ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Team Udayavani, Aug 1, 2021, 10:41 PM IST
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆ.5ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಾತ್ರ ಕೆಲವೊಮ್ಮ ಸಾಧಾರಣ ಮಳೆ ನಿರೀಕ್ಷೆಯಿದೆ. ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್
ದಕ್ಷಿಣ ಒಳನಾಡಿನಲ್ಲಿ ಭಾನುವಾರ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.ದಕ್ಷಿಣ ಕನ್ನಡದ ಸುಬ್ರಮಣ್ಯದಲ್ಲಿ 7 ಸೆಂ.ಮೀ., ಶಿವಮೊಗ್ಗದ ತಾಳಗುಪ್ಪದಲ್ಲಿ 5 ಸೆಂ.ಮೀ., ಶೃಂಗೇರಿ, ಶಿವಮೊಗ್ಗದ ತುಮ್ರಿಯಲ್ಲಿ ತಲಾ 4 ಸೆಂ.ಮೀ., ಉತ್ತರ ಕನ್ನಡದ ಸಿದ್ದಾಪುರ, ಕೊಲ್ಲೂರು, ಉಡುಪಿಯ ಸಿದ್ದಾಪುರ, ಧರ್ಮಸ್ಥಳ, ಮಡಿಕೇರಿ, ಆಗುಂಬೆ, ಚಿಕ್ಕಮಗಳೂರಿನ ಜಯಪುರ, ಕೊಡಗಿನ ಸಂತಹಳ್ಳಿಯಲ್ಲಿ ತಲಾ 3 ಸೆಂ.ಮೀ., ಮೂಡುಬಿದ್ರೆ, ಕದ್ರಾ, ಮಂಚಿಕೆರೆ, ಕಾರ್ಕಳ, ಸೋಮವಾರಪೇಟೆ, ದಾವಣಗೆರೆಯ ತೆಲಿಗಿಯಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.
ಉಳಿದಂತೆ, ಕುಂದಾಪುರ, ಸುಳ್ಯ, ಮುಲ್ಕಿ, ಉಪ್ಪಿನಂಗಡಿ, ಪುತ್ತೂರು, ಉತ್ತರ ಕನ್ನಡದ ಜನ್ಮನೆ, ಜಗಲಬೆಟ್, ಭಟ್ಕಳ, ಬಾಸಗೋಡ್, ಬೇಲಿಕೇರಿ, ಹಲಿಯಾಳ, ಶಿರಾಲಿ, ಹಾವೇರಿ, ಕೊಡಗಿನ ಭಾಗಮಂಡಲ, ಸುಂಟಿಕೊಪ್ಪ, ಹಾರಂಗಿ, ಕುಶಾಲನಗರ, ಕೊಟ್ಟಿಗೆಹಾರ, ರಾಯಲಪಾಡು, ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.