ಬೆಳ್ತಂಗಡಿ: 37,718 ಪಡಿತರ  ಚೀಟಿಗಳ ಇ-ಕೆವೈಸಿ ಪೂರ್ಣ


Team Udayavani, Aug 3, 2021, 3:10 AM IST

Untitled-1

ಬೆಳ್ತಂಗಡಿ: ನ್ಯಾಯಬೆಲೆ ಅಂಗಡಿ ಗಳಲ್ಲಿ ಈಗಾಗಲೆ ಇ- ಕೆವೈಸಿಯಾಗಿರುವ ಪಡಿ ತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ, ಉಳಿದಿರುವ ಎಲ್ಲ ಫಲಾನುಭವಿಗಳ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಆ.1 ನೇ ತಾರೀಕಿನಿಂದ 10 ನೇ ತಾರೀಕಿನರವರೆಗೆ ನಡೆಸುವ ಪ್ರಕ್ರಿಯೆ ಬೆಳ್ತಂಗಡಿ ತಾಲೂಕಿನಲ್ಲಿ ಬಿರುಸುಗೊಂಡಿದೆ.

ಇ-ಕೆವೈಸಿ ಮಾಡಿಸುವ ಉದ್ದೇಶ ಪಡಿತರ ಚೀಟಿದಾರರು ತಮ್ಮ ಇರುವಿಕೆಯ ಕುರಿತು ದೃಢೀಕರಣ ಮಾಡುವ ಪ್ರಕ್ರಿಯೆಯಾಗಿದೆ. ಎ.ಪಿ.ಎಲ್‌., ಬಿ.ಪಿ.ಎಲ್‌., ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಸ್ಥರು ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಬೇಕಿದೆ. 2021ರ ಆಗಸ್ಟ್‌ ತಿಂಗಳ ವರೆಗೆ ಇ-ಕೆವೈಸಿ ಅವಕಾಶ ನೀಡ ಲಾಗಿದ್ದು, ಆ ಬಳಿಕ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿ ಯಲಾಗುತ್ತದೆ.

ಗ್ರಾಮೀಣ ಭಾಗದಲ್ಲಿ ಸವಾಲು:

ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕದ ಪುಸ್ತಕ, ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಸಂಖ್ಯೆಗೆ ನೋಂದಾಯಿಸಿದ ಮೊಬೈಲ್‌ ಸಂಖ್ಯೆಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಕೊರೊನಾದ ಮಧ್ಯೆಯೂ ಸಾಮಾಜಿಕ ಅಂತರ ಪಾಲಿ ಸುವುದು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ಇ-ಕೆವೈಸಿಗೆ ತೊಡ ಕಾಗಿರುವ ಮಧ್ಯೆಯೂ ವಯಸ್ಸಾದ, ಕೊರೊನಾ ಬಾಧಿತರನ್ನು ಕರೆತಂದು ಕೆವೈಸಿ ನೀಡುವುದು ಸವಾಲಾಗಿದೆ.

ಒಟ್ಟು 62,844 ಪಡಿತರ ಚೀಟಿ:

ಬೆಳ್ತಂಗಡಿ ತಾ| ನಲ್ಲಿ ಒಟ್ಟು 62,844 ಪಡಿತರ ಚೀಟಿಗಳಲ್ಲಿ 37,718 ಪಡಿತರ ಚೀಟಿಗಳ ಇ-ಕೆವೈಸಿ ಪೂರ್ಣಗೊಂಡಿದೆ. ಒಟ್ಟು 2,49,068 ಪಡಿತರ ಚೀಟಿ ಫಲಾನು ಭವಿಗಳು ಇದ್ದು, 1,45,189 ಮಂದಿಯ ಇ-ಕೆವೈಸಿ ಪೂರ್ಣಗೊಂಡಿದೆ. ತಾ|ನ ಎಲ್ಲ 68 ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಾರ್ಯ ನಡೆಸ ಲಾಗುತ್ತಿದ್ದು, ಇ-ಕೆವೈಸಿ ಬಾಕಿ ಇರುವ ಫಲಾನುಭವಿಗಳು ಆ.10ರ ಒಳಗೆ ತಮ್ಮ ಬಯೋ ದೃಢೀಕರಣವನ್ನು ಕಡ್ಡಾಯ ವಾಗಿ ನೀಡುವಂತೆ ಆಹಾರ ಇಲಾಖೆ ಸೂಚಿಸಿದೆ. ಈ ಕುರಿತು ಸಂದೇಹಗಳು ಇದ್ದಲ್ಲಿ 08256-232383 ದೂರವಾಣಿ ಸಂಪರ್ಕಿಸಬಹುದಾಗಿದೆ.

ಪಡಿತರ ಚೀಟಿದಾರರು ತಮ್ಮ ಇರುವಿಕೆಯನ್ನು ಖಾತ್ರಿ ಪಡಿಸಲು ಬಯೋ- ದೃಢೀಕರಣ ನೀಡುವ ಇ-ಕೆವೈಸಿ ಮಾಡಿಸಬೇಕು. ಆಗಸ್ಟ್‌ 10ರ ವರೆಗೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಬಾಕಿ ಇರುವವರು ಕಡ್ಡಾಯವಾಗಿ ಮಾಡಬೇಕು. ಇ-ಕೆವೈಸಿ ಮಾಡಿಸದಿದ್ದಲ್ಲಿ ಪಡಿತರ ಹಂಚಿಕೆ ತಡೆಹಿಡಿಯಲಾಗುತ್ತದೆ. -ವಿಶ್ವ ಕೆ., ಆಹಾರ ನಿರೀಕ್ಷಕರು, ಬೆಳ್ತಂಗಡಿ 

 

-ವಿಶೇಷ ವರದಿ

ಟಾಪ್ ನ್ಯೂಸ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.