ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ‍್ಣೀರು

Team Udayavani, Aug 3, 2021, 7:14 PM IST

dtrrtre

ಚೆನ್ನೈ : ಜುಲೈ 25 ರಂದು ಮಹಾಬಲಿಪುರಂ ಬಳಿ ನಡೆದ ಡೆಡ್ಲಿ ಕಾರು ಅಪಘಾತದಲ್ಲಿ ಅದೃಷ್ಟವಶಾತ್ ಬದುಕುಳಿದ ನಟಿ ಯಶಿಕಾ ಆನಂದ್ ಅವರು ಕೊಂಚ ಗುಣಮುಖರಾಗಿದ್ದಾರೆ. ಇದುವರೆಗೂ ಐಸಿಯುನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ ಚೇತರಿಸಿಕೊಂಡಿದ್ದು, ಅಪಘಾತ ನಡೆದ ದುರಂತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಬದುಕಿರೋದಕ್ಕೆ ಜೀವನಪರ್ಯಂತ ಪಶ್ಚಾತ್ತಾಪದಲ್ಲಿ ಇರುವಂತಾಯ್ತು ಎಂದು ಬೇಸರ ವ್ಯಕ್ತಪಡಿಸಿರುವ ಯಶಿಕಾ, “ನನಗೆ ಈಗ ಏನಾಗುತ್ತಿದೆ ಎಂದು ಈಗ ಹೇಳಲಾಗುತ್ತಿಲ್ಲ. ನಾನು ಬದುಕಿರುವುದಕ್ಕೆ ಜೀವನಪರ್ಯಂತ ಪಶ್ಚಾತ್ತಾಪ ಪಡುವೆ. ನನ್ನನ್ನು ಅಪಘಾತದಿಂದ ಬದುಕಿಸಿದೆ ಎಂದು ದೇವರಿಗೆ ಧನ್ಯವಾದ ಹೇಳಲಾ ಅಥವಾ ನನ್ನ ಗೆಳತಿಯನ್ನು ಕರೆದುಕೊಂಡು ಹೋದೆ ಅಂತ ದ್ವೇಷಿಸಲಾ? ಒಂದೂ ಅರ್ಥವಾಗುತ್ತಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ನನ್ನ ಗೆಳತಿ ಪಾವನಿಯನ್ನು ತುಂಬ ಮಿಸ್ ಮಾಡಿಕೊಳ್ತೀನಿ.  ದಯವಿಟ್ಟು ನನ್ನನ್ನು ಕ್ಷಮಿಸು. ನಿನ್ನ ಕುಟುಂಬವನ್ನು ನಾನು ತುಂಬ ಸಂಕಷ್ಟಕ್ಕೆ ನೂಕಿದೆ.”

‘’ಪ್ರತಿಕ್ಷಣ ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುವೆ. ಬದುಕಿರುವುದಕ್ಕೆ ಕೊನೆಯ ತನಕ ಪಶ್ಚಾತ್ತಾಪದಲ್ಲಿ ಇರುವೆ. ನಿನ್ನ ಆತ್ನಕ್ಕೆ ಶಾಂತಿ ಸಿಗಲಿ, ಆದಷ್ಟು ಬೇಗ ನನ್ನ ಹತ್ತಿರ ಬಾ ಎಂದು ಪ್ರಾರ್ಥಿಸುವೆ. ನಿನ್ನ ಕುಟುಂಬ ಕೂಡ ನನ್ನನ್ನು ಕ್ಷಮಿಸಿವೆ. ನಿನ್ನ ನೆನಪುಗಳನ್ನು ಸದಾ ಸಂಭ್ರಮಿಸುವೆ”.

“ಅದೃಷ್ಟವಶಾತ್ ನನ್ನ ಮುಖಕ್ಕೆ ಏನೂ ಆಗಿಲ್ಲ. ಇದು ನನ್ನ ಮರುಜನ್ಮ. ಮಾನಸಿಕವಾಗಿ, ದೈಹಿಕವಾಗಿ ನನಗೆ ಗಾಯಗಳಾಗಿವೆ. ದೇವರು ನನಗೆ ಶಿಕ್ಷೆ ನೀಡಿದ್ದಾನೆ. ನಾನು ಏನು ಕಳೆದುಕೊಂಡಿದ್ದೀನೋ ಅದರ ಮುಂದೆ ಇದು ಏನೂ ಅಲ್ಲ.”

‘’ಕಾನೂನು ಎಲ್ಲರಿಗೂ ಒಂದೇ. ನಾವು ಕುಡಿದು ಗಾಡಿ ಓಡಿಸುತ್ತಿರಲಿಲ್ಲ ಎಂದು ಪೊಲೀಸರು ಅಧಿಕೃತವಾಗಿ ಹೇಳಿದ್ದಾರೆ. ಹೀಗಿದ್ದಾಗ್ಯೂ ಕೆಲವರು ನಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅನೇಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ತುಂಬ ಸೂಕ್ಷ್ಮವಾದ ವಿಷಯ. ನನ್ನ ಬಲಗಾಲು ಫ್ರ್ಯಾಕ್ಚರ್ ಆಗಿದೆ. ಸರ್ಜರಿ ನಂತರ ನಾನು ರೆಸ್ಟ್ ಮಾಡುತ್ತಿದ್ದೇನೆ. ಇನ್ನು 5 ತಿಂಗಳುಗಳ ಕಾಲ ನನಗೆ ನಡೆಯಲು, ನಿಂತುಕೊಳ್ಳಲು ಆಗಲ್ಲ. ಪೂರ್ತಿ ದಿನ ನಾನು ಹಾಸಿಗೆ ಮೇಲೆ ಇರುವೆ. ಅದೇ ಹಾಸಿಗೆ ಮೇಲೆ ಮೂತ್ರ-ಮಲ ವಿಸರ್ಜನೆ ಮಾಡಿಕೊಳ್ಳಬೇಕು. ನನಗೆ ಬಲ ಹಾಗೂ ಎಡಕ್ಕೂ ತಿರುಗಲು ಆಗಲ್ಲ” ಎಂದು ಯಶಿಕಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.