ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಸುನೀಗಿದರೆ 2 ಲಕ್ಷ ಪರಿಹಾರ
Team Udayavani, Aug 4, 2021, 7:50 AM IST
ಹೊಸದಿಲ್ಲಿ: ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಸುನೀಗಿದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ರಾಜ್ಯಸಭೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಮಾಹಿತಿ ನೀಡಿದ್ದು, ಸದ್ಯದ ನಿಯಮಗಳ ಪ್ರಕಾರ ಅಸುನೀಗಿದವರಿಗೆ 25 ಸಾವಿರ ರೂ., ಗಾಯಗೊಂಡವರಿಗೆ 12,500 ರೂ.ನೀಡಲಾಗುತ್ತಿದೆ ಎಂದರು.
2019ರ ಮಾಹಿತಿ ಪ್ರಕಾರ, ದೇಶದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ 29,354 ಮಂದಿ ಸಾವಿಗೀಡಾಗಿ ದ್ದರೆ, 67,751 ಮಂದಿ ಗಾಯಗೊಂಡಿ ದ್ದಾರೆ. ಅಪಘಾತ ಎಸಗಿ ಪರಾರಿಯಾಗಿ ರುವ ವ್ಯಕ್ತಿಯನ್ನು ಹಿಡಿಯಲು ಸಾಧ್ಯವಿಲ್ಲ. ಆದ್ದರಿಂದ ಸರಕಾರದ ವತಿಯಿಂದಲೇ ಮೋಟಾರು ವಾಹನ ಅಪಘಾತ ನಿಧಿ ಸ್ಥಾಪಿಸಿ, ಅದರ ಮೂಲಕ ಪರಿಹಾರ ನೀಡಲಾಗುತ್ತದೆ.
ಫ್ಲೆಕ್ಸಿ ಇಂಧನ ವಾಹನಗಳಿರಲಿ: ಮುಂದಿನ 1 ವರ್ಷದ ಒಳಗಾಗಿ ವಾಹನ ಉತ್ಪಾದಕರು ಎರಡು ರೀತಿಯ ಇಂಧನಗಳಿಂದ (ಫ್ಲೆಕ್ಸಿ ಫ್ಯೂಯೆಲ್) ಚಲಿಸುವ ವಾಹನಗಳನ್ನು ಉತ್ಪಾದಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದೂ ಸಚಿವ ಗಡ್ಕರಿ ಒತ್ತಾಯಿಸಿದ್ದಾರೆ. ಜತೆಗೆ ಎಲ್ಲ ವಾಹನಗಳಲ್ಲಿಯೂ ಕನಿಷ್ಠ 6 ಏರ್‌ಬ್ಯಾಗ್ ಇರುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.