ಕೋವಿಡ್ 3ನೇ ಅಲೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ
ವಿವಿಧೆಡೆಗಳಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ
Team Udayavani, Aug 4, 2021, 4:10 PM IST
ದೇವನಹಳ್ಳಿ: ಕೋವಿಡ್ 3ನೇ ಅಲೆ ತಡೆಯಲು ಬೆಂ.ಗ್ರಾ. ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರವಹಿಸಿದೆ. ಕೇರಳ, ಮಹಾರಾಷ್ಟ್ರ ಕಡೆಗಳಿಂದ ರಾಜ್ಯಕ್ಕೆ ಮರಳುವ ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ, ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕೈಗೊಳ್ಳುತ್ತಿದೆ.
ಕೇರಳದಲ್ಲಿ ಹೆಚ್ಚು ಕೋವಿಡ್ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬರುವ ಪ್ರತಿ ಪ್ರಯಾಣಿಕರ ಆರೋಗ್ಯ ಪರೀಕ್ಷೆ
ಮಾಡಿ, ಕೋವಿಡ್ ವರದಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ಪ್ರಯಾಣಿಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದರೂ, ಕೋವಿಡ್-19 ವರದಿ ಕಡ್ಡಾಯವಾಗಿದೆ. ಕೋವಿಡ್-19 ವರದಿಯಿಲ್ಲದಿದ್ದರೆವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲಾಗುತ್ತಿದೆ. ನಿತ್ಯ 2 ಸಾವಿರಕ್ಕೂ ಹೆಚ್ಚು ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಪ್ರಯಾಣಿಕ ಆರೋಗ್ಯ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದೆ.
ಪ್ರತಿನಿತ್ಯ 3 ಪಾಳಯದಲ್ಲಿ ಕೆಲಸ: ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿನಿತ್ಯ 3 ಪಾಳಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದಕೇರಳ, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ಕೋವಿಡ್ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಅರಿವು ಮೂಡಿಸುವುದು. ಜ್ವರ ಬಂದಲ್ಲಿ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುವುದರ ಬಗ್ಗೆಯೂ
ತಿಳುವಳಿಕೆ ನೀಡಲಾಗುತ್ತಿದೆ.
ಅಧಿಕಾರಿಗಳಿಂದ ನಿತ್ಯ ಪರಿಶೀಲನೆ: ಪ್ರತಿನಿತ್ಯ ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಕೋವಿಡ್ 3ನೇ ಅಲೆ ಗಂಭೀರತೆಯನ್ನು ಪರಿಗಣಿಸಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರ 3ನೇ ಅಲೆ ತಡೆಗೆ ಸಾಕಷ್ಟು ಕಾರ್ಯಕ್ರಮ ರೂಪಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೆಂ.ಗ್ರಾ. ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆಕಡಿಮೆಯಾಗುತ್ತಿದೆ.
ಇದನ್ನೂ ಓದಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ
ವಿಮಾನ ನಿಲ್ದಾಣದಲ್ಲಿ ಕೇವಲ ವಿದೇಶದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.ಕೇರಳ, ಮಹಾರಾಷ್ಟ್ರಗಳಲ್ಲಿ ಕೋವಿಡ್ 3ನೇ ಅಲೆ ಹೆಚ್ಚಾಗುತ್ತಿದೆ. ದೇಶೀಯ ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿಲ್ಲ. ಈಗಾಗಲೇ ವೈರಸ್ ಬಗ್ಗೆ ಎಚ್ಚೆತ್ತುಕೊಂಡು ಮಾಸ್ಕ್ ಧರಿಸಿ ಪ್ರಯಾಣ ಮಾಡುತ್ತಿದ್ದಾರೆ. ಇನ್ನೂ ಕೆಲವರು ಹಾಗೆಯೇ ಓಡಾಡುತ್ತಿದ್ದಾರೆ.
– ನಾಗರಾಜ್, ಪ್ರಯಾಣಿಕ
ವಿಮಾನ ನಿಲ್ದಾಣದಲ್ಲಿ ಕೇರಳ, ಮಹಾರಾಷ್ಟ್ರಗಳಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಜ್ವರ,ಕೆಮ್ಮು, ನೆಗಡಿ, ಗಂಟಲು ನೋವು, ಉಸಿರಾಟದ ತೊಂದರೆ ಇರುವ ಪ್ರಯಾಣಿಕರನ್ನು ಹೆಚ್ಚು ತಪಾಸಣೆ ಮಾಡಿ, ನಿಗಾವಹಿಸಲಾಗುತ್ತಿದೆ. 3ನೇ ತಡೆಗೆ ಜಿಲ್ಲಾಡಳಿತವು ಸಾಕಷ್ಟುಕಾರ್ಯಕ್ರಮ ರೂಪಿಸಿದೆ.
– ಡಾ.ಎ. ತಿಪ್ಪೇಸ್ವಾಮಿ,
ಜಿಲ್ಲಾ ಆರೋಗ್ಯಾಧಿಕಾರಿ
ವಿಮಾನ ನಿಲ್ದಾಣದಲ್ಲಿ ಹೆಚ್ಚಿನಕಟ್ಟೆಚ್ಚರವಹಿಸಲಾಗುತ್ತಿದೆ.ಕೊರೊನಾ 3ನೇ ಅಲೆ ಜನರ ಮೇಲೆ ಹೆಚ್ಚಿನ ಗಂಭೀರ ಪರಿಣಾಮ ಬೀರಲಿದೆ. ಪ್ರಯಾಣಿಕರು ಸ್ವಯಂಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರಕಾಯ್ದುಕೊಳ್ಳಬೇಕು.
– ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ
-ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.