ಜಿಲ್ಲಾದ್ಯಂತ ನೈಟ್‌ ಕರ್ಫ್ಯೂ ಜಾರಿ


Team Udayavani, Aug 4, 2021, 6:16 PM IST

4-15

ದಾವಣಗೆರೆ: ಕೋವಿಡ್‌-19 ಎರಡನೇ ಅಲೆ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೂಡಲೇ ಜಾರಿಗೆ ಬರುವಂತೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಆಗಸ್ಟ್‌ 16ರಂದು ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ 2021ರ ಜುಲೈ 7 ಹಾಗೂ 18 ರಂದು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಆ. 16 ರವರೆಗೆ ಪ್ರತಿ ದಿನ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಅನುಮತಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.

ಜುಲೈ 31ರ ಸರ್ಕಾರದ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲ ಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ವಿಶೇಷ ಕಣ್ಗಾವಲು ಕ್ರಮಗಳಿಗೆ ಸಂಬಂಧಿಸಿದಂತೆ ಆದೇಶಗಳು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಸರ್ಕಾರದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ ಪಕ್ಷದಲ್ಲಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ದೇವರ ಸೇವೆಗೂ ನಿಷೇಧ: ಕೋವಿಡ್‌ -19 ಸಂಭಾವ್ಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆ. 31ವರೆಗೆ ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಎಲ್ಲ ಮುಂಜರಾಯಿ ದೇವಾಲಯಗಳು ಮತ್ತು ಖಾಸಗಿ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಶನಿವಾರ ಮತ್ತು ಭಾನುವಾರಗಳಂದು ಭಕ್ತಾದಿಗಳ ದೇಗುಲ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಮುಂಬರುವ ಹಬ್ಬದ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲ ದೇವಾಲಯಗಳಲ್ಲಿ ಜನದಟ್ಟಣೆಯನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ದೇವಸ್ಥಾನಗಳಿಗೆ ತೆರಳುವವರು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್‌ ನಿಯಂತ್ರಣ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಿಡಲಾಗಿದೆ. ಉತ್ಸವ, ಸೇವೆ, ಮಡಿ, ಪ್ರಸಾದ, ದಾಸೋಹ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಶನಿವಾರ ಮತ್ತು ಭಾನುವಾರಗಳಂದು ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಆದೇಶ ಆ. 31ವರೆಗೆ ಜಾರಿಯಲ್ಲಿರುತ್ತದೆ.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.