ರೈಲು ಮಾದರಿಯಲ್ಲಿ ಹಂಪಿ ಸ್ಮಾರಕ ವೀಕ್ಷಣೆ


Team Udayavani, Aug 4, 2021, 6:37 PM IST

Hampi

ಹೊಸಪೇಟೆ: ಪ್ರವಾಸಿಗರು ಇನ್ನುಂದೆ ರೈಲಿನಲ್ಲಿ ಆಸೀನರಾದ ಅನುಭೂತಿಯೊಂದಿಗೆ ಹಂಪಿ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಮಾಡಬಹುದು.
ಹೌದು! ಎರಡು ಬೋಗಿವುಳ್ಳ ಡೀಸೆಲ್‌ ರೈಲು ಮಾದರಿಯ ವಾಹನದಲ್ಲಿ ಕುಳಿತು ಪ್ರಸಿದ್ಧ ಸ್ಮಾರಕ ದರ್ಶನ ಪಡೆಯುವ ಭಾಗ್ಯ ಇದೀಗ ಪ್ರವಾಸಿಗರಿಗೆ ದೊರೆತಿದೆ. ಈ ಮೂಲಕ ಬಹುದಿನದ “ಹಂಪಿ ಆನ್‌ ವ್ಹೀಲ್ಸ್‌’ ಯೋಜನೆ ಸಾಕಾರಗೊಂಡಿದೆ.

ಹಂಪಿ ವಿಶ್ವ ಪರಂಪರೆ ಪ್ರದೇಶಾಭಿವೃದ್ಧಿ ನಿರ್ವಾಹಣಾ ಪ್ರಾಧಿಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಬೆಂಗಳೂರು ಮೂಲದ ಪ್ರಿವಲೆನ್ಸ್‌ ಗ್ರೀನ್‌ ಸಲ್ಯೂಶನ್‌ ಸಂಸ್ಥೆ ಎರಡು ಬೋಗಿವುಳ್ಳ ಡೀಸೆಲ್‌ ರೈಲನ್ನು ಹಂಪಿಯಲ್ಲಿ ಓಡಾಡಿಸುತ್ತಿದೆ.

ಸ್ಮಾರಕ ದರ್ಶನ: ಹಂಪಿ ಶ್ರೀವಿರೂಪಾಕ್ಷೇಶ್ವರ ದೇಗುಲದ ರಥಬೀದಿಯಿಂದ ಆರಂಭಗೊಳ್ಳುವ ಪ್ರಯಾಣವು ಎದುರು ಬಸವಣ್ಣ ಮಂಟಪ,
ಕಡಲೆ ಕಾಳು ಗಣಪ, ಸಾಸಿವೆ ಕಾಳು ಗಣಪ,ಶ್ರೀಕೃಷ್ಣ ದೇಗುಲ, ಬಡವಿ ಲಿಂಗ, ಉಗ್ರ ನರಸಿಂಹ, ಹಜಾರ ರಾಮ ದೇಗುಲ, ಉದ್ದಾನ
ವೀರಭದ್ರೇಶ್ವರ ದೇಗುಲ, ನೆಲಸ್ತರದ ಶಿವ ದೇಗುಲ, ಕಮಲ ಮಹಲ್‌, ಆನೆಲಾಯ,ಮಹಾನವಮಿ ದಿಬ್ಬ, ರಾಣಿಯರ ಸ್ನಾನಗೃಹದಿಂದ
ಗೆಜ್ಜಲ ಮಂಟಪದವರೆಗೆ ಸಾಗಲಿದೆ. ಗೆಜ್ಜಲ ಮಂಟಪದಿಂದ ವಿಜಯ ವಿಠಲ, ಕಲ್ಲಿನತೇರು, ಪುರಂದರದಾಸರ ಮಂಟಪಗಳನ್ನು ಬ್ಯಾಟರಿ
ಚಾಲಿತ ವಾಹನದಲ್ಲಿ ತೆರಳಿ ನೋಡುವ ವ್ಯವಸ್ಥೆ ಕೂಡ ಮಾಡಲಾಗಿದೆ. ಇದಕ್ಕಾಗಿ ಎರಡು ಬ್ಯಾಟರಿ ಚಾಲಿತ ವಾಹನಗಳನ್ನು ಕಾಯ್ದಿರಿಸಲಾಗಿದೆ.

ಇದನ್ನೂ ಓದಿ:ಜಿಲ್ಲಾದ್ಯಂತ ನೈಟ್‌ ಕರ್ಫ್ಯೂ ಜಾರಿ

ದರ ಎಷ್ಟು?
ಶ್ರೀ ವಿರೂಪಾಕ್ಷೇಶ್ವರ ರಥಬೀದಿಯಲ್ಲಿ ಟಿಕೆಟ್‌ ಕೌಂಟರ್‌ ತೆರೆಯಲಾಗಿದ್ದು, ಎರಡು ಬೋಗಿಯ ರೈಲಿನಲ್ಲಿ 20 ಜನರು ಕುಳಿತು ತೆರಳಬಹುದು. 18 ವರ್ಷ ಮೇಲ್ಪಟ್ಟವರಿಗೆ ತಲಾ ಒಬ್ಬರಿಗೆ 354 ರೂ. ಟಿಕೆಟ್‌ ದರ ನಿಗದಿಪಡಿಸಲಾಗಿದೆ. ಇನ್ನೂ 5 ವರ್ಷದೊಳಗಿನ ಮಕ್ಕಳು ಉಚಿತವಾಗಿ ಪ್ರಯಾಣಿಸಬಹುದು. 6 ವರ್ಷದಿಂದ 17 ವರ್ಷದ ಮಕ್ಕಳಿಗೆ ತಲಾ 177 ರೂ. ಟಿಕೆಟ್‌ ದರ ನಿಗದಿಪಡಿಸಲಾಗಿದೆ. ನಿತ್ಯ ಬೆಳಗ್ಗೆ 8 ಗಂಟೆಯಿಂದ ಆರಂಭಗೊಳ್ಳುವ ರೈಲು ಪ್ರಯಾಣ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲದ ದರ್ಶನಕ್ಕೆ ಇದೇ ಸಂಸ್ಥೆ ಭಕ್ತರಿಗೆ ರೈಲಿನ ವ್ಯವಸ್ಥೆ ಕಲ್ಪಿಸಿದೆ. ಇನ್ನೂ ಬೆಂಗಳೂರಿನ ಲಾಲ್‌ಬಾಗ್‌ನಲ್ಲೂ ಸದ್ಯದಲ್ಲೇ ಚುಕುಬುಕು ರೈಲಿನ ವ್ಯವಸ್ಥೆ ಮಾಡಲಿದೆ.ಈಗ ಹಂಪಿಯಲ್ಲಿ ಚುಕುಬುಕು ರೈಲಿನ ವ್ಯವಸ್ಥೆ ಕಲ್ಪಿಸಿದ್ದು, ಪ್ರವಾಸಿಗರು ಹರ್ಷಿತರಾಗಿದ್ದಾರೆ.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.