ಭಾರತದ ವೇಗಕ್ಕೆ ಕುಸಿದ ಇಂಗ್ಲೆಂಡ್
Team Udayavani, Aug 5, 2021, 12:50 AM IST
ನಾಟಿಂಗ್ಹ್ಯಾಮ್: ಭಾರತದ ವೇಗಿಗಳ ಬಿಗಿ ದಾಳಿಗೆ ಪರದಾಡಿದ ಇಂಗ್ಲೆಂಡ್, ನಾಟಿಂಗ್ಹ್ಯಾಮ್ ಟೆಸ್ಟ್ ಪಂದ್ಯದ ಮೊದಲ ದಿನ ತೀವ್ರ ಕುಸಿತ ಅನುಭವಿಸಿ 183 ರನ್ಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಕಪ್ತಾನನ ಆಟವಾಡಿದ ಜೋ ರೂಟ್ 64 ರನ್ ಮಾಡಿದರು.
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಬುಮ್ರಾ ಪಂದ್ಯದ 5ನೇ ಎಸೆತದಲ್ಲೇ ಖಾತೆ ತೆರೆಯದ ರೋರಿ ಬರ್ನ್ಸ್ ಅವರನ್ನು ಲೆಗ್ ಬಿಫೋರ್ ಬಲೆಗೆ ಬೀಳಿಸಿದರು. ಈ ಆಘಾತದಿಂದ ಚೇತರಿಸಿಕೊಳ್ಳಲು ಇಂಗ್ಲೆಂಡಿಗೆ ಸಾಧ್ಯವಾಗಲಿಲ್ಲ. ಲಂಚ್ ವೇಳೆ 2ಕ್ಕೆ 61 ರನ್ ಗಳಿಸಿದ ಇಂಗ್ಲೆಂಡ್, ಚಹಾ ವಿರಾಮದ ಹೊತ್ತಿಗೆ 138ಕ್ಕೆ 4 ವಿಕೆಟ್ ಕಳೆದುಕೊಂಡಿತ್ತು.
ಟೀ ಬಳಿಕ ಲಾರೆನ್ಸ್ ಮತ್ತು ಬಟ್ಲರ್ ಶೂನ್ಯಕ್ಕೆ ಔಟಾದದ್ದು ಇಂಗ್ಲೆಂಡಿನ ಸ್ಥಿತಿಯನ್ನು ಬಿಗಡಾಯಿಸುವಂತೆ ಮಾಡಿತು. ಉತ್ತಮವಾಗಿ ಆಡುತ್ತಿದ್ದ ರೂಟ್ ಕೂಡ ಪೆವಿಲಿಯನ್ ಹಾದಿ ಹಿಡಿದರು. ಭಾರತದ ಪರ ಜಸ್ಪ್ರೀತ್ ಬುಮ್ರಾ 4, ಶಮಿ 3, ಶಾರ್ದೂಲ್ ಠಾಕೂರ್ 2, ಸಿರಾಜ್ ಒಂದು ವಿಕೆಟ್ ಕಿತ್ತರು.
ಈ ಪಂದ್ಯಕ್ಕಾಗಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ಹೊರಗಿರಿಸಿದ್ದು ಅಚ್ಚರಿಯಾಗಿ ಕಂಡಿತು. ಹಾಗೆಯೇ ಹಿರಿಯ ವೇಗಿ ಇಶಾಂತ್ ಶರ್ಮ ಅವರನ್ನೂ ಕೈಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.