ಒಂದು ಕುಟುಂಬದ ಹಿತಾಸಕ್ತಿಗಾಗಿ ಸಂಸತ್ ಕಾರ್ಯ ನಿರ್ವಹಿಸುವುದಿಲ್ಲ : ರವಿಶಂಕರ್ ಪ್ರಸಾದ್

ಸಂಸತ್ತನ್ನು ಕಾಂಗ್ರೆಸ್ ಎಂದೂ ಗಂಭೀರವಾಗಿ ತೆಗೆದುಕೊಂಡಿಲ್ಲ : ಪ್ರಸಾದ್

Team Udayavani, Aug 5, 2021, 12:59 PM IST

Parliament disrupted to protect interest of one family: Ravi Shankar Prasad attacks Congress on Pegasus row

ನವ ದೆಹಲಿ : ಸಂಸತ್ತು ಒಂದು ಕುಟುಂಬದ ಹಿತಾಸಕ್ತಿಗೆ ಸೂಕ್ತವಾಗಿ ಇರುವುದಕ್ಕೆ ಸಾಧ್ಯವಿಲ್ಲ. ಸಂಸತ್ತು ಒಂದು ಕುಟುಂಬಕ್ಕೆ ಸಂಬಂಧಪಟ್ಟಂತಹ ಆಸಕ್ತಿಗಳ ಮೇಲೆ ಕಾರ್ಯನಿರ್ವಹಿಸುವ ಕ್ಷೇತ್ರವಲ್ಲವೆಂದು ಕೇಂದ್ರದ ಮಾಜಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಕಾಂಗ್ರೆಸ್ ಗೆ ಪರೋಕ್ಷವಾಗಿ ಕುಟುಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಸಾದ್, ಈ ಕುಟುಂಬ ಹಿಂದಿನಿಂದಲೂ ಇದೇ ರೀತಿಯಲ್ಲಿ ಬೆಳೆದುಕೊಂಡು ಬಂದಿದೆ. ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದಲ್ಲಿ ದೇಶ ಪ್ರಗತಿಯತ್ತ ಸಾಗುತ್ತಿದೆ ಎನ್ನುವುದನ್ನು ಅರ್ಥೈಸಿಕೊಳ್ಳುವುದರಲ್ಲಿ ಈ ಕುಟುಂಬ ಸೋತಿದೆ 2ಜಿ ಹಗರಣ, ಕಲ್ಲಿದ್ದಲು ಹಗರಣಗಳನ್ನುಒಳಗೊಂಡು ದೇಶದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ನಿರಾಕರಣೆಯ ಧೋರಣೆಯಲ್ಲಿ ಕುಟುಂಬ ವರ್ತಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ… ವರುಣಾ ಕ್ಷೇತ್ರದ ಮೇಲೆ ಕಣ್ಣಿಟ್ಟ ವಿಜಯೇಂದ್ರ

ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಕರೆದ ಸರ್ವಪಕ್ಷಗಳ ಸಭೆಯನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿತು. ಈಗ ಕೇಂದ್ರದ ವಿರುದ್ಧ ಸುಖಾಸುಮ್ಮನೆ ಆರೋಪ ಹೊರಿಸುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರವನ್ನು ಯಾವುದೇ ನೈತಿಕತೆಯಿಲ್ಲದೇ ಕಾಂಗ್ರೆಸ್ ಆರೋಪ ಮಾಡುತ್ತದೆ. ಸಂಸತ್ತನ್ನು ಕಾಂಗ್ರೆಸ್ ಎಂದೂ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಪೆಗಾಸಸ್ ಪ್ರಕರಣದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪೆಗಾಸಸ್ ಗೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ಬಳಿ ಯಾವುದಾದರೂ ಪುರಾವೆಗಳಿವೆಯೇ..? ಯಾವ ನಂಬರ್ ಗೆ ಯಾವ ದಿನ, ಯಾವ ಸಂದರ್ಭದಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಹ್ಯಾಕ್ ಮಾಡಿದೆ ಎಂದು ಕಾಂಗ್ರೆಸ್ ಹೇಳುತ್ತದೆಯೇ..? ಕಾಂಗ್ರೆಸ್ ಬಳಿ ಪೆಗಾಸಸ್ ಗೆ ಸಂಬಂಧಪಟ್ಟಂತೆ ಒಂದೂ ದಾಖಲೆಯಿಲ್ಲ ಎಂದು ಗುಡುಗಿದ್ದಾರೆ.

ಇನ್ನು, ಪೆಗಾಸಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನೊಳಗೊಂದು ಇತರೆ ವಿರೋಧ ಪಕ್ಷಗಳು ನಿರಂತರವಾಗಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ಇದನ್ನೂ ಓದಿ : ಅತ್ಯಾಚಾರ ಸಂತ್ರಸ್ತೆಯ ಪೋಷಕರ ಫೋಟೋ ಹಂಚಿಕೊಂಡ ರಾಹುಲ್ ಮೇಲೆ ಎಫ್ ಐ ಆರ್..!

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.