ಬೀದಿಗೆ ಬಿದ್ದ ಹನಿ ಸಿಂಗ್ ದಾಂಪತ್ಯ ಕಲಹ: ಪತಿ ವಿರುದ್ಧ ಪತ್ನಿ ಶಾಲಿನಿ ಗಂಭೀರ ಆರೋಪ
Team Udayavani, Aug 5, 2021, 1:28 PM IST
ಮುಂಬೈ : ಗಾಯಕ ಯೋ ಯೋ ಹನಿ ಸಿಂಗ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇವರ ದಾಂಪತ್ಯ ಕಲಹ ಇದೀಗ ಕೋರ್ಟ್ ಮೆಟ್ಟಿಲೇರಿದೆ.
ಹನಿಸಿಂಗ್ ಪತ್ನಿ ಶಾಲಿನಿ ತಲ್ವಾರ್ ಕೌಂಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಿಂಗ್ ವಿರುದ್ಧ ದೆಹಲಿ ತಿಸ್ ಹಜಾರೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಈಕೆ, 10 ಕೋಟಿ ರೂ. ಪರಿಹಾರ ಕೇಳಿದ್ದಾರೆ.
ಸಿಂಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ, ಆರ್ಥಿಕ ಹಿಂಸೆ ಮತ್ತು ವ್ಯಭಿಚಾರದ ಆರೋಪಗಳನ್ನು ಮಾಡಿದ್ದಾರೆ ಶಾಲಿನಿ. ಪತಿಯಿಂದ ವಿಚ್ಛೇದನ ಕೋರಿರುವ ಅವರು, ಹನಿ ಸಿಂಗ್ ತನ್ನನ್ನು ಕ್ರೂರವಾಗಿ, ಪ್ರಾಣಿಗಳಂತೆ ನಡೆಸಿಕೊಂಡಿದ್ದಾನೆ. ಆತನ ಪೋಷಕರು ಜೊತೆ ನನ್ನ ಮೇಲೆ ಹಲವಾರು ಬಾರಿ ದೈಹಿಕ ಹಲ್ಲೆಗೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾಳೆ. .
ತನ್ನ ಪತಿ ಸಾಕಷ್ಟು ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಶಾಲಿನಿ, ಸಿಂಗ್ ಕುಟುಂಬದ ಸದಸ್ಯರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ, ಭಯದಲ್ಲೇ ಜೀವನ ಮಾಡಬೇಕಾಗಿದೆ ಎಂದು ದೂರಿದ್ದಾರೆ.
ಈ ಹಿಂದೆ ಹನಿಸಿಂಗ್ ಸಾಹಿತ್ಯ ವಿವಾದಕ್ಕೆ ಕಾರಣವಾಗಿ ಖ್ಯಾತ ಗಾಯನ ವಿರುದ್ಧ ಎಫ್ ಐ ಆರ್ ಸಹ ದಾಖಲಾಗಿತ್ತು. 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಹನಿಸಿಂಗ್ ಹಾಡಿನ ಸಾಹಿತ್ಯ ವಿವಾದಕ್ಕೆ ಗುರಿಯಾಗಿತ್ತು. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರವನ್ನು ಪ್ರಚೋದಿಸುವ ಸಾಹಿತ್ಯ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರ ತಂಡ ಎಫ್‌ಐಆರ್ ಸಹ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.