ಸಚಿವ ಸಂಪುಟದಲ್ಲಿ ಮೈಸೂರಿಗೆ ಪ್ರಾತಿನಿಧ್ಯ ಇಲ್ಲ

ಜಿಲ್ಲೆಯ ಮೂವರು ಶಾಸಕರಲ್ಲಿ ಬೇಸರ, ಬೆಂಬಲಿಗರು,ಕಾರ್ಯಕರ್ತರಿಗೂ ನಿರಾಸೆ;  ಹೊರಗಿನವರಿಗೆ ಉಸ್ತುವಾರಿ ಮಣೆ

Team Udayavani, Aug 5, 2021, 4:30 PM IST

mysour

ಸಾಂದರ್ಭಿಕ ಚಿತ್ರ...

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿಯೂ ಮೈಸೂರನ್ನು ಕಡೆಗಣಿಸಲಾಗಿದ್ದು, ಜಿಲ್ಲೆಯ ಮೂವರು ಬಿಜೆಪಿ ಶಾಸಕರಲ್ಲಿ ಯಾರೊಬ್ಬರಿಗೂ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದಿರುವುದು ಕಾರ್ಯಕರ್ತರರು ಮತ್ತು ಜಿಲ್ಲೆಯ ಜನರಲ್ಲಿ ಬೇಸರ ತರಿಸಿದೆ.

ಮೈತ್ರಿ ಸರ್ಕಾರ ಕೆಡವಿ ಬಿಎಸ್‌ವೈ ಸರ್ಕಾರ ರಚನೆಗೆ ಕಾರಣರಾದವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕಾರಣಕ್ಕೆ ಮೈಸೂರು ಭಾಗದ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗದು ಎಂಬ ಹೇಳಿಕೆ ಈ ಬಾರಿಯ ನೂತನ ಸಚಿವ ಸಂಪುಟ ರಚನೆಗೂ ಅನ್ವಯವಾಗಲಿದೆ ಎಂದು ಹೈಕಮಾಂಡ್‌ ಪರೋಕ್ಷವಾಗಿ ಹೇಳಿದಂತಿದೆ.

ಮೈತ್ರಿ ಸರ್ಕಾರ ಪತನ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಮೈಸೂರು ಭಾಗದ ಶಾಸಕರನ್ನು ಕಡೆಗಣಿಸಲಾಗಿತ್ತು. ನಂತರದ ಹೊಸ ಸಂಪುಟ ದಲ್ಲಿ ಶಾಸಕ ರಾಮದಾಸ್‌ ಅಥವಾ ಎಲ್‌. ನಾಗೇಂದ್ರ ಇಒಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಕೊನೆಗಳಿಗೆಯಲ್ಲಿ ಜಿಲ್ಲೆಯ ಯಾವೊಬ್ಬ ಶಾಸಕನಿಗೂ ಸಚಿವ ಸ್ಥಾನ ದೊರೆಯದಿರುವುದು ಸಹಜವಾಗಿಯೇ ಜಿಲ್ಲೆಯ ಜನತೆ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೇಸರ ತರಿಸಿದ್ದು, ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದಿನ ಯಡಿಯೂರಪ್ಪ ಸರ್ಕಾರದಲ್ಲೂ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಮೈಸೂರಿನ ಹಿರಿಯ ರಾಜಕಾರಣಿ ಎಸ್‌.ಎ.ರಾಮ ದಾಸ್‌ ಅವರಿಗೆ ಬೊಮ್ಮಾಯಿ ಸರ್ಕಾರದಲ್ಲಾದರೂ ಸಚಿವರಾಗುವ ಅದೃಷ್ಟ ಬರಲಿದೆ ಎಂದೇ ಅಂದಾಜಿಸಲಾಗಿತ್ತು. ಮೈಸೂರು ಜಿಲ್ಲೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಎಸ್‌.ಎ.ರಾಮ ದಾಸ್‌, ಚಾಮರಾಜ ವಿಧಾನಸಭಾ ಕ್ಷೇತ್ರದ ಎಲ್‌.ನಾಗೇಂದ್ರ ಹಾಗೂ ನಂಜನಗೂಡು ತಾಲೂಕಿನಿಂದ ಹರ್ಷವರ್ಧನ್‌ ಸೇರಿ ಮೂವರು ಶಾಸಕರಿದ್ದರು. ಇವರಲ್ಲಿ ರಾಮದಾಸ್‌ ಹಿರಿಯರಾಗಿದ್ದರಿಂದ ಅದೃಷ್ಟ ಕೈಹಿಡಿಯಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂವರಲ್ಲಿ ಯಾರೊಬ್ಬರಿಗೂ ಬಿಜೆಪಿ ಹೈಕಮಾಂಡ್‌ ಅವಕಾಶ ನೀಡದೆ ಮೈಸೂರನ್ನುಕಡೆಗಣಿಸಿದೆ.

ಹೊರಗಿನವರ ಕಾರುಬಾರು
ಯಡಿಯೂರಪ್ಪ ಸರ್ಕಾರದಲ್ಲಿವಿ. ಸೋಮಣ್ಣ ಒಂದು ವರ್ಷ ಮೈಸೂರು ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಕೆಲಸ ಮಾಡಿದ್ದರು.ಬಳಿಕಅವರನ್ನು ಕೊಡಗು ಉಸ್ತುವಾರಿ ಮಂತ್ರಿಯಾಗಿ ನೇಮಿಸಿ, ಮೈಸೂರು ಜಿಲ್ಲೆಗೆಎಸ್‌.ಟಿ.ಸೋಮಶೇಖರ್‌ ಅವರನ್ನು ನೇಮಿಸಲಾಯಿತು.ಹೊರ ಭಾಗದವರೇ ಮೈಸೂರು ಜಿಲ್ಲೆಯಲ್ಲಿ ಸ್ತುವಾರಿ ಮಂತ್ರಿಯಾಗಿ ದರ್ಬಾರು ನಡೆಸುತ್ತಿರುವುದು ಸ್ಥಳೀಯ ಬಿಜೆಪಿಯೊಳಗೆ ಸಹಜವಾಗಿ ಅಸಮಾಧನಕ್ಕೆ ಕಾರಣವಾಗಿತ್ತು. ಮತ್ತೆ ಬೊಮ್ಮಾಯಿ ಸರ್ಕಾರದಲ್ಲೂ ಸೋಮಶೇಖರ್‌ ಅವರೇ ಮೈಸೂರುಉಸ್ತುವಾರಿ ಸಚಿವರಾಗಿ ಮುಂದುವರೆಯುವ ಸಾಧ್ಯತೆ ಬಹುಪಾಲು ಖಚಿತವಾಗಿದೆ.ಒಟ್ಟಾರೆ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಆದಂತೆ ಬೊಮ್ಮಾಯಿ ನೇತೃತ್ವದ ಹೊಸ ಸರ್ಕಾರದಲ್ಲಿಯೂ ಮೈಸೂರು ಕಡೆಗಣಿಸಲ್ಪಟ್ಟಿದೆ.

ಇದನ್ನೂ ಓದಿ:ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ ಯಡಿಯೂರಪ್ಪ: ಕಾಂಗ್ರೆಸ್ ಟೀಕೆ

ಮೈತ್ರಿ ಸರ್ಕಾರದಲ್ಲಿತ್ತು ವಿಶೇಷ ಪ್ರಾತಿನಿಧ್ಯ
ಈ ಹಿಂದೆ ಇದ್ದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ಮೈಸೂರು ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿತ್ತು. ಮೈಸೂರಿನ ಜಿ.ಟಿ.ದೇವೇಗೌಡ, ಸಾ.ರಾ. ಮಹೇಶ್‌ ಸಚಿವರಾಗಿ ಗಮನ ಸೆಳೆಯುವ ಮೂಲಕ ಮೈಸೂರು ಜಿಲ್ಲೆಯ ಪ್ರಗತಿಗೆ ವಿಶೇಷಆಸಕ್ತಿ ವಹಿಸಿದ್ದರು. ಆದರೆ,ಬಿಜೆಪಿ ಸರ್ಕಾರ ರಚನೆ ನಂತರ ಮೈಸೂರು ಭಾಗದ ಮೂವರು ಶಾಸಕರನ್ನು ಕಡೆಗಣಿಸಲಾಗಿದೆ. ಇದರಿಂದ ಶಾಸಕರ ವೈಯಕ್ತಿಕ ವರ್ಚಸ್ಸು, ಕಾರ್ಯವೈಖರಿ, ಪ್ರಭಾವ ಮತ್ತು ಅನುಭವ ಮೂಲೆಗುಂಪಾದಂತಾಗಿದೆ.

ಮೈಸೂರಿಗೆ ಈ ಬಾರಿಯಾದರೂ ಪ್ರಾತಿನಿಧ್ಯ ಸಿಗಲಿದೆ ಎಂಬ ವಿಶ್ವಾಸವಿತ್ತು. ಆದರೆ, ಸಂಪುಟದಲ್ಲಿ ಯಾರಿಗೂ ಅವಕಾಶ ಸಿಗದಿದ್ದಕ್ಕೆ ಬೇಸರವಾಗಿದೆ. ಪ್ರತಿ ಜಿಲ್ಲೆಯಿಂದ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕಿತ್ತು.
-ಎಲ್‌.ನಾಗೇಂದ್ರ, ಶಾಸಕ, ಚಾಮರಾಜ ಕ್ಷೇತ್ರ

ಈ ಬಾರಿಯೂ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಯಬಲಗೈ ಸಮುದಾಯವನ್ನುಕಡೆಗಣಿಸಲಾಗಿದೆ. ಜಿಲ್ಲೆಯಲ್ಲಿ ಮೂವರು ಶಾಸಕರಿದ್ದೇವೆ.ಈ ಪೈಕಿ ಒಬ್ಬರಿಗೂ ಅವಕಾಶಕಲ್ಪಿಸಿಲ್ಲ.
-ಹರ್ಷವರ್ಧನ್‌, ಶಾಸಕ, ನಂಜನಗೂಡು

-ಸತೀಶ್‌ ದೇಪುರ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.