ಕೋವಿಡ್ ನಿಯಮ ಉಲ್ಲಂಘಿಸಿದ ತಹಶೀಲ್ದಾರ್ ಚಂದ್ರಶೇಖರ್
ಜಿಲ್ಲಾಧಿಕಾರಿ ಆದೇಶ ಮೀರಿ ಮಗುವಿನ ಹುಟ್ಟುಹಬ್ಬ ಆಚರಣೆ
Team Udayavani, Aug 5, 2021, 6:25 PM IST
ಮಂಡ್ಯ: ಕೋವಿಡ್ ಸೋಂಕಿನ ಮೂರನೇ ಅಲೆ ಭೀತಿಯ ನಡುವೆಯೇ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂಗಾಳಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಮಗುವಿನ ಹುಟ್ಟುಹಬ್ಬ ಆಚರಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ ಹೋಟೆಲ್‌ನ ಆವರಣದಲ್ಲಿ ನಡೆದಿದೆ.
ಬುಧವಾರ ರಾತ್ರಿ ತಮ್ಮ ಮಗುವಿನ ಹುಟ್ಟುಹಬ್ಬ ಆಚರಿಸಿರುವ ತಹಶೀಲ್ದಾರ್ ಚಂದ್ರಶೇಖರ್ ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೂ ಕ್ಯಾರೆ ಎನ್ನದೇ ಹೆಚ್ಚು ಜನರನ್ನು ಸೇರಿಸಿ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ:
ಮದುವೆ, ಹುಟ್ಟುಹಬ್ಬ, ನಾಮಕರಣ, ಅಂತ್ಯಕ್ರಿಯೆ ಸೇರಿದಂತೆ ವಿವಿಧ ಸಭೆ, ಸಮಾರಂಭ, ಆಚರಣೆಗಳಲ್ಲಿ 30ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಮಂಗಳವಾರ ಆದೇಶ ಹೊರಡಿಸಿದ್ದರು. ಆದರೆ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂಗಾಳಿ ಅವರು ಬುಧವಾರ ಸಂಜೆ 6ಗಂಟೆಗೆ ಕೆಆರ್‌ಎಸ್ ಜಲಾಶಯದ ರಾಯಲ್ ಆರ್ಕಿಡ್ ಹೋಟೆಲ್‌ನ ಆವರಣಕ್ಕೆ ಕಾರುಗಳಲ್ಲಿ ಆಗಮಿಸಿದ ನೂರಾರು ಮಂದಿ ಅಧಿಕಾರಿ ವರ್ಗ ಹಾಗೂ ಸಂಬಅಧಿಕರು ಕೊರೊನಾ ಸೋಂಕಿನ ಭಯವಿಲ್ಲದೆ ಗುಂಪು ಗುಂಪಾಗಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದ ದೃಶ್ಯ ಕಂಡು ಬಂದಿತು.
ಅನುಮತಿಯೂ ಪಡೆದಿಲ್ಲ:
ಸಭೆ, ಸಮಾರಂಭ, ಮದುವೆ, ಹುಟ್ಟುಹಬ್ಬ ಆಚರಣೆಗೆ ಆಯಾ ತಾಲೂಕಿನ ತಹಶೀಲ್ದಾರ್ ಅವರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಚಂದ್ರಶೇಖರ್ ಶಂ.ಗಾಳಿ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರ ಅನುಮತಿಯೇ ಪಡೆದಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮಾರ್ಗದರ್ಶನ ಅರಿವು ಮೂಡಿಸಬೇಕಾದ ತಹಶೀಲ್ದಾರ್ ಚಂದ್ರಶೇಖರ್ ತಾವೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
ಅಧಿಕಾರಿಗಳಿಗೊ ಅದು ನ್ಯಾಯವೇ?:
ಕೋವಿಡ್ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವ ತಹಶೀಲ್ದಾರ್ ಚಂದ್ರಶೇಖರ್, ಮಂಡ್ಯ ತಾಲೂಕಿನಲ್ಲಿ ನಡೆಯುತ್ತಿದ್ದ ಮದುವೆ, ಸಮಾರಂಭಗಳ ಮೇಲೆ ದಾಳಿ ನಡೆಸಿ ದಂಡ, ಪ್ರಕರಣ ದಾಖಲಿಸಿದ್ದರು. ಆದರೆ ಅವರೇ ತಮ್ಮ ಮಗುವಿನ ಹುಟ್ಟುಹಬ್ಬ ಆಚರಿಸಲು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವುದರಿಅದ ಅಧಿಕಾರಿಗಳಿಗೊಂದು ನ್ಯಾಯ, ಸಾರ್ವಜನಿಕರಿಗೊಂದು ನ್ಯಾಯವೇ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆದರೂ ಕೂಡ 30 ಜನರನ್ನು ಮೀರುವಂತಿಲ್ಲ. ಆದರೆ ಕೆಆರ್‌ಎಸ್‌ನಲ್ಲಿ ಮಂಡ್ಯ ತಹಸೀಲ್ದಾರ್ ಅವರು ನಿಯಮ ಮೀರಿ ಹೆಚ್ಚು ಜನರಿಂದ ಹುಟ್ಟುಹಬ್ಬ ಆಚರಣೆ ಮಾಡಿರುವುದು ಕಾನೂನು ಪ್ರಕಾರ ತಪ್ಪು. ನಮ್ಮಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಈಗಾಗಲೇ ಹೋಟೆಲ್‌ನವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಹಶೀಲ್ದಾರ್ ಅವರ ಮೇಲೆ ಕ್ರಮ ಕೈಗೊಳ್ಳಲು ಉಪವಿಭಾಗಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಅವರ ಸೂಚನೆಯಂತೆ ಕ್ರಮ ವಹಿಸಲಾಗುವುದು ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾರವೀಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.