ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ
Team Udayavani, Aug 5, 2021, 7:14 PM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಕಾರಣ ,ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದೇವೆ. ಯಾವುದೇ ರೀತಿಯ ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ. ನೆರೆಯ ರಾಜ್ಯ ಕೇರಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಇದನ್ನೂ ಓದಿ: ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು
ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು. ಪದವಿ ಪರೀಕ್ಷೆಗಳಲ್ಲಿ ವಹಿಸಲಾದ ಅಸೈನ್‍ಮೆಂಟ್ ಗಳನ್ನು ಆನ್‍ಲೈನ್ ಅಥವಾ ಅಂಚೆ ಮೂಲಕ ಸಂಬಂಧಿಸಿದ ಕಾಲೇಜುಗಳೀಗೆ ತಲುಪಿಸಲು ಅವಕಾಶ ನೀಡಬೇಕು, ಪದವಿ ಪರೀಕ್ಷೆಗಳಿಗೆ ಹಾಜರಾಗಲು ಇಚ್ಛಿಸುವ ಕೋವಿಡ್ ಸೋಂಕಿತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.