ಪ್ರವಾಹ ಸಂತೃಸ್ತರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿ: ಗೋವಿಂದ ಕಾರಜೋಳ ಸೂಚನೆ


Team Udayavani, Aug 6, 2021, 4:23 PM IST

ಪ್ರವಾಹ ಸಂತೃಸ್ತರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿ: ಗೋವಿಂದ ಕಾರಜೋಳ ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗುವ ಜನರಿಗೆ ಅಗತ್ಯವಿರುವ ಕಡೆಗಳಲ್ಲಿ ‌ಹೊಸದಾಗಿ ಬಡಾವಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ಪ್ರವಾಹ ಸ್ಥಿತಿ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪುನರ್ವಸತಿ ಕಾಯ್ದೆ ಪ್ರಕಾರ ಸಂತ್ರಸ್ತರಿಗೆ 40×60 ಅಳತೆಯ ನಿವೇಶನದಲ್ಲಿ ಸೂರು‌ ಒದಗಿಸಲು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಮುಳುಗಡೆಯಾಗುವ ಗ್ರಾಮಗಳ ಜನರಿಗೆ ತಾತ್ಕಾಲಿಕ ‌ಶೆಡ್ ನಿರ್ಮಿಸಿ ಮೂಲಸೌಕರ್ಯವನ್ನು ಒದಗಿಸಬೇಕು. ಈ ಹಿಂದೆ 2009-10 ನೇ ಸಾಲಿನಲ್ಲಿ ಪ್ರವಾಹ ಬಂದಾಗ ಕೆಲ ಗ್ರಾಮಗಳನ್ನು ಸ್ಥಳಾಂತರಿಸಿ ‘ಆಸರೆ’ ಮನೆಗಳನ್ನು ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿ‌ ಮಾಹಿತಿಯನ್ನು ಒದಗಿಸಬೇಕು ಎಂದು ತಿಳಿಸಿದರು.

ನದಿತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಕಲ್ಪಿಸಲು ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದರು.

ಇದನ್ನೂ ಓದಿ:ವರ್ಕೌಟ್ ಮಾಡೋವಾಗ ಆಯ ತಪ್ಪಿ 10ನೇ ಮಹಡಿ ಯಿಂದ ಕೆಳಗೆ ಬಿದ್ದ ಯುವತಿ

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 7800 ಕೋಟಿ ರೂಪಾಯಿ ಹಾನಿಯಾಗಿದೆ. 21,300 ವಿದ್ಯುತ್ ಕಂಬಗಳು‌‌ ಹಾಗೂ 5300 ಟ್ರಾನ್ಸ್ ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ‌ ಅಂದಾಜು ಮಾಡಬೇಕು ಎಂದು ಹೇಳಿದರು.

ಜಂಟಿ‌ ಸಮೀಕ್ಷೆ ಕೂಡಲೇ ಪೂರ್ಣಗೊಳಿಸಬೇಕು. ಜಮೀನಿನಲ್ಲಿ ನೀರಿರುವುದರಿಂದ ಒಂದು ವೇಳೆ ಸಮೀಕ್ಷೆಗೆ ಅಡ್ಡಿಯಾದರೆ ಜಿ.ಪಿ.ಎಸ್.ಆಧಾರಿತ ಸಮೀಕ್ಷೆಯ ಸಾಧ್ಯತೆ ಕುರಿತು ಪರಿಶೀಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಸಲಹೆ ನೀಡಿದರು. ಮಳೆಯಿಂದ ವಿದ್ಯುತ್ ಪೂರೈಕೆ ತೊಂದರೆಯಾದ ಕಡೆಗಳಲ್ಲಿ ತಕ್ಷಣವೇ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು. ಒಂದು ವೇಳೆ ಪ್ರವಾಹ ಉಂಟಾದರೆ ನಂತರದ ದಿನಗಳಲ್ಲಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಅಗತ್ಯ ಪರಿಕರಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಕೋವಿಡ್ ಸಂಭವನೀಯ ಮೂರನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ   ಹಾಸಿಗೆ, ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕಾಗಿ ಸೂಕ್ತ ಪ್ರಸ್ತಾವ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ, ತಾಲ್ಲೂಕು ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 418 ಹಾಸಿಗೆಗಳು ಲಭ್ಯವಿವೆ. ಆದರೆ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುವಂತೆ ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಬೇಕು. ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯ ಕೆಲಸ ತ್ವರಿತವಾಗಿ ಆಗಬೇಕು ಎಂದು ಸೂಚನೆ ನೀಡಿದರು.

ಬಾಕಿ ಉಳಿದಿರುವ ಆಕ್ಸಿಜನ್ ಘಟಕಗಳ ಸ್ಥಾಪನೆ ಹಾಗೂ ತುರ್ತು ನಿರ್ವಹಣೆಗೆ ಅನುಕೂಲವಾಗುವಂತೆ ಸ್ಥಳೀಯ ಉತ್ತಮ ಕಂಪನಿಗಳಿಗೆ ಕಾರ್ಯಾದೇಶ ನೀಡುವಂತೆ ತಿಳಿಸಿದರು.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿಳಂಬಕ್ಕೆ ಕೇಂದ್ರವೇ ಕಾರಣ!

ಕೋವಿಡ್ ಸಂದರ್ಭದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜತೆಗೆ ಗುಣಮಟ್ಟದ ಚಿಕಿತ್ಸೆಗಾಗಿ ಅಗತ್ಯ ತಜ್ಞ ವೈದ್ಯರು‌ ಮತ್ತು ಸಿಬ ಸಿಬ್ಬಂದಿ ನಿಯೋಜಿಸಬೇಕು. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ಯಾರಾ ಮೆಡಿಕಲ್ ತರಬೇತಿ ನೀಡುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂದರು.

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ರವಾಹದಿಂದ ಜಿಲ್ಲೆಯಲ್ಲಿ ಬೆಳೆ, ಮೂಲಸೌಕರ್ಯ ಸೇರಿದಂತೆ ಒಟ್ಟಾರೆ ಅಂದಾಜು 7800 ಕೋಟಿ ರೂಪಾಯಿಗಿಂತ  ಅಧಿಕ ನಷ್ಟವಾಗಿದೆ. ಸಮೀಕ್ಷೆಯ ಬಳಿಕ ಖಚಿತ ಮಾಹಿತಿ ‌ಲಭಿಸಲಿದೆ ಎಂದು ಹೇಳಿದರು.

ಮಳೆಯಿಂದ ಚಿಕ್ಕೋಡಿ ವಿಭಾಗದಲ್ಲಿ ತೊಂದರೆಯಾಗಿದೆ. ಸಕಾಲದಲ್ಲಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಹಾನಿಯ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಯಿತು. ಅಥಣಿ ಭಾಗದಲ್ಲಿ 22 ಹಳ್ಳಿಗಳು ಜಲಾವೃತಗೊಂಡಿದ್ದವು. 230 ತಾತ್ಕಾಲಿಕ ಶೆಡ್ ನಿರ್ಮಿಸಿ ಜನರಿಗೆ ತುರ್ತು ವಸತಿ ಕಲ್ಪಿಸಲಾಗಿದೆ.

ಆದ್ಯತೆ ಮೇರೆಗೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ಆರ್.ಟಿ.ಜಿ.ಎಸ್. ಮೂಲಕ ನಿರ್ಧಾರ. ಈಗಾಗಲೇ ಬಹುತೇಕ ಪಟ್ಟಿ ಸಿದ್ಧಗೊಂಡಿದೆ. ಬೆಳೆಹಾನಿ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ. ಆಗಸ್ಟ್ 15 ರ ವೇಳೆಗೆ ಮಳೆಯಿಂದ ಉಂಟಾಗಿರುವ ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ನದಿತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ. ‌ಈ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಮುನ್ಸೂಚನೆ ವ್ಯವಸ್ಥೆ ಮಾಡಬೇಕಿದೆ ಎಂದು ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಸಚಿವರ ಗಮನಸೆಳೆದರು.

ಮಳೆಯಿಂದ ಉಂಟಾದ ಮನೆಹಾನಿಯ ಸಮೀಕ್ಷೆ ಮಾಹಿತಿಯನ್ನು ಅಪ್ ಲೋಡ್ ಮಾಡಲು ನಿಗದಿಪಡಿಸುವ ಸಮಯವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ದರ್ಶನ್ ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಇದುವರೆಗೆ 5.59 ಲಕ್ಷ ಜನರ ಕೋವಿಡ್ ಪರೀಕ್ಷೆ ಮಾಡಲಾಗಿದ್ದು 496 ಪಾಸಿಟಿವ್ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಸದ್ಯಕ್ಕೆ ಶೇ.0.84 ರಷ್ಟಿದೆ.  ಕೋವಿಡ್ ಮರಣಪ್ರಮಾಣ ಶೇ.2.34 ರಷ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು. 460 ಬ್ಲ್ಯಾಕ್ ಫಂಗಸ್ ಇದರಲ್ಲಿ 300 ಕ್ಕೂ ಅಧಿಕ ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 49 ಜನರು ಬ್ಲ್ಯಾಕ್ ಫಂಗಸ್ ನಿಂದ ಮರಣ ಹೊಂದಿದ್ದಾರೆ ಎಂದರು.

ಜಿಲ್ಲೆಯಲ್ಲಿ ಒಟ್ಟಾರೆ 18 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 199 ಕಾಳಜಿ ಕೇಂದ್ರದಲ್ಲಿ ಕೂಡ 30 ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಡಾ.ಐ.ಪಿ.ಗಡಾದ ವಿವರಿಸಿದರು.

ಜಿಲ್ಲೆಯ ಒಟ್ಟಾರೆ 6.91 ಹೆಕ್ಟೇರ್ ಬಿತ್ತನೆ ಬೆಳೆಯ ಪೈಕಿ ಸೋಯಾಬಿನ್, ಕಬ್ಬು, ಹೆಸರು ಮತ್ತಿತರ ಬೆಳೆಹಾನಿಯಾಗಿದೆ.‌ ಬೆಳೆಹಾನಿ ಜಂಟಿ‌ ಸಮೀಕ್ಷೆ ಆರಂಭಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಹೊಸಮನಿ ತಿಳಿಸಿದರು.

ಟಾಪ್ ನ್ಯೂಸ್

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.