ವಿಜಯಪುರ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ

ಪ್ರಯಾಣಿಕರ ನೆಗೆಟಿವ್‌ ವರದಿ ಖಚಿತ ಪಡಿಸಿಕೊಳ್ಳುವುದು ಬಸ್‌ ಕಂಡಕ್ಟರ್‌ ಜವಾಬ್ದಾರಿಯಾಗಿದೆ

Team Udayavani, Aug 6, 2021, 6:38 PM IST

ವಿಜಯಪುರ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ

ವಿಜಯಪುರ: ಕೋವಿಡ್‌ ಮೂರನೇ ಅಲೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ರಾಜ್ಯ ಮಹಾರಾಷ್ಟ್ರದ ಗಡಿಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್ ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ಗಡಿ ಭಾಗದ ಪ್ರದೇಶದಲ್ಲಿರುವ ತಿಕೋಟಾ ತಾಲೂಕಿನ ವಿವಿಧ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ತಿಕೋಟಾ ತಾಲೂಕು ವ್ಯಾಪ್ತಿಯ ಕನಮಡಿ, ಅಳಗಿನಾಳ, ಸಿದ್ದಾಪುರ (ಅ) ಹಾಗೂ ಯತ್ನಾಳ ಗಡಿ ಭಾಗದ ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಿಂದ ನಮ್ಮ ಜಿಲ್ಲೆಯ ಮೂಲಕ ಕರ್ನಾಟಕ ಪ್ರವೇಶಿಸುವ ವ್ಯಕ್ತಿಗಳಿಗೆ ಕೋವಿಡ್‌ ನಿಯಮದಂತೆ ಪ್ರವೇಶ ನೀಡಬೇಕು ಎಂದರು.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರು ಲಸಿಕೆ ಪಡೆಯಲಿ ಅಥವಾ ಪಡೆಯದೇ ಇರಲಿ ಕಡ್ಡಾಯವಾಗಿ 72 ಗಂಟೆ ಒಳಗಿನ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ತರಬೇಕು. ನೆಗೆಟಿವ್‌ ವರದಿ ಇರದಿದ್ದರೆ ರಾಜ್ಯದ ಒಳಗೆ ಪ್ರವೇಶವಿಲ್ಲ. ಕಾರು, ಬೈಕ್‌ ಸೇರಿದಂತೆ ಸ್ವಂತ ವಾಹನಗಳ ಮೂಲಕ ಬರುವವರಿಗೆ ಈ ನಿಯಮ ಅನ್ವಯವಾಗುತ್ತದೆ. ಬಸ್‌ ಮೂಲಕ ಜಿಲ್ಲೆಗೆ ಪ್ರಯಾಣಿಸುವ ಪ್ರಯಾಣಿಕರ ನೆಗೆಟಿವ್‌ ವರದಿ ಖಚಿತ ಪಡಿಸಿಕೊಳ್ಳುವುದು ಬಸ್‌ ಕಂಡಕ್ಟರ್‌ ಜವಾಬ್ದಾರಿಯಾಗಿದೆ ಎಂದು ಸೂಚಿಸಿದರು.

ಗಡಿಭಾಗದಲ್ಲೇ ಆರ್‌ಟಿಪಿಸಿಆರ್‌ ತಪಾಸಣೆ:
ಮಹಾರಾಷ್ಟ್ರದಿಂದ ಬರುವಾಗ ಆರ್‌ ಟಿಪಿಸಿಆರ್‌ ನೆಗೆಟಿವ್‌ ವರದಿ ತರದೇ ಇರುವವರಿಗೆ ಗಡಿ ಭಾಗದ ಚೆಕ್‌ಪೋಸ್ಟ್‌ ಸ್ಥಳದಲ್ಲೇ ಆರೋಗ್ಯ ಇಲಾಖೆ ಸಿಬ್ಬಂದಿ ಆರ್‌ ಟಿಪಿಸಿಆರ್‌ ತಪಾಸಣೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಆರ್‌ಟಿಪಿಸಿಆರ್‌ ವರದಿ ಬರುವವರೆಗೂ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಿಕೋಟಾ ತಾಲೂಕಿನ 4 ಚೆಕ್‌ಪೋಸ್‌ rಗಳಲ್ಲಿ ದಿನದ 24 ಗಂಟೆಯೂ ಪೊಲೀಸ್‌, ಕಂದಾಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿ ಒಳಗೊಂಡ ಜಂಟಿ ತಂಡದ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ. ತಾಲೂಕು ಆಡಳಿತ ಚೆಕ್‌ಪೋಸ್ಟ್‌ಗಳಿಗೆ ಬೇಕಾಗುವ ಎಲ್ಲ ಸವಲತ್ತು ನೀಡಿದ್ದು, ಮೂರನೇ ಅಲೆ ತಡೆಗಟ್ಟಲು ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ತಹಶೀಲ್ದಾರ್‌ ಸಂತೋಷ ಮ್ಯಾಗೇರಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಪ
ವಿಭಾಗಾಧಿಕಾರಿ ಬಲರಾಮ ರಾಠೊಡ, ಉಪ ತಹಶೀಲ್ದಾರ್‌ ರಾಜು ಸುಣಗಾರ, ಪಿಎಸ್‌ಐ ಅನಿತಾ ರಾಠೊಡ, ಆರೋಗ್ಯ, ಕಂದಾಯ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.