ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು
Team Udayavani, Aug 6, 2021, 8:02 PM IST
ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, ಹತ್ತಾರು ಮನೆಗಳನ್ನು ನೆಲಸಮ ಮಾಡಲಾಗಿದೆ.
ಈ ಹಿಂದೆ ಇಲ್ಲಿ ಕಾರ್ಯನಿರ್ವಹಿಸಿದ ಕೆಲವು ಅಧಿಕಾರಿಗಳು ಹಾಗೂ ಮುಖಂಡರು ಅತಿಕ್ರಮಣಕಾರರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೆ ಈ ಅತಿಕ್ರಮಣಕ್ಕೆ ಮುಖ್ಯ ಕಾರಣವೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇದರಲ್ಲಿ ಕೆಲವೊಂದಷ್ಟು ಜನ ಪ್ರಭಾವಿಗಳಿದ್ದರೂ ಸಹ ತಹಶೀಲ್ದಾರರು ಯಾವುದೇ ಮುಲಾಜು ಇಲ್ಲದೆ ಅತಿಕ್ರಮಣ ತೆರವು ಮಾಡಿದರು.
ಅನೇಕ ವರ್ಷಗಳಿಂದ ಅತಿಕ್ರಮಣವಾಗಿದ್ದರೂ ಸಹ ನಿದ್ರೆಯಲ್ಲಿದ್ದ ನೀರಾವರಿ ಇಲಾಖೆ ಅಧಿಕಾರಿಗಳು ಇತ್ತೀಚಿಗೆ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡು, ಪೋಲಿಸ್ ಅಧಿಕಾರಿಗಳ ಸಹಾಯದಿಂದ ಅತಿಕ್ರಮಣ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆರು ಜೆಸಿಬಿ ಹಾಗೂ ಐದು ಟ್ರ್ಯಾಕ್ಟರ್ ಗಳು ನೂರಾರು ಜನ ಸಿಬ್ಬಂದಿಗಳು ತೆರವು ಕಾರ್ಯಚರಣೆ ನಡೆಸಿದರು.
ಇದನ್ನೂ ಓದಿ :ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಲಾರಿ : ಓರ್ವ ಸಾವು, ಮೂವರು ಗಂಭೀರ
ತೆರವು ಕಾರ್ಯಾಚರಣೆಯಲ್ಲಿ ಬೈಲಹೊಂಗಲ ಡಿ.ಎಸ್.ಪಿ ಶಿವಾನಂದ ಕಟಗಿ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಘಟಪ್ರಭಾ ಸಿಪಿಐ ಶ್ರಿಶೈಲ ಬ್ಯಾಕೂಡ, ಮೂಡಲಗಿ ಪಿಎಸ್‌ಐ ಹಾಲಪ್ಪಾ ಬಾಲದಂಡಿ, ಪಿಎಸ್‌ಐ ಆರ್.ಎಸ್.ಖೋತ, ಮುಖ್ಯಾಧಿಕಾರಿ ಕೆ.ಬಿ.ಪಾಟೀಲ, ಧುಪದಾಳ ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್.ಗಡಕರಿ, ನೀರಾವರಿ ಇಲಾಖೆಯ ಚೀಫ್ ಇಂಜಿನಿಯರ್ ಕಣಗಲಿ, ಹಾಗೂ ಸಿಬ್ಬಂದಿ ವರ್ಗವರು, ಮಹಿಳಾ ಹಾಗೂ ಪುರುಷ ಪೊಲೀಸ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
“ಅತಿಕ್ರಮಣ ತೆರವಿಗೆ ಮುಂದಾದ ಅಧಿಕಾರಿಗಳಿಗೆ ಅತಿಕ್ರಮಣಕಾರರಿಂದ ತೀವ್ರ ವಿರೋಧ ವ್ಯಕ್ತ ವಾಯಿತು, ಈಗಾಗಲೆ ಇಲ್ಲಿರುವ ಎಲ್ಲ ಅತಿಕ್ರಮಣಕಾರರಿಗೆ ಮುಂಚಿತವಾಗಿ ತೆರವುಗೊಳಿಸಲು ಸೂಚನೆ ನೀಡಿದ್ದರೂ ಸಹ ತೆರವು ಮಾಡದ ಕಾರಣ ಕೋರ್ಟ್ ಆದೇಶದಂತೆ ಅತೀಕ್ರಮಣ ತೆರವು ಮಾಡುವುದು ಅನಿವಾರ್ಯವಾಯಿತು”.
– ಪ್ರಕಾಶ ಹೊಳೆಪ್ಪನವರ, ತಹಶೀಲ್ದಾರರು ಗೋಕಾಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.