ಗುಂಡೇಟು ತಿಂದ ಬಾಕ್ಸರ್ಗೆ ಒಲಿಂಪಿಕ್ಸ್ ನಲ್ಲಿ ಸತತ 2ನೇ ಚಿನ್ನ!
Team Udayavani, Aug 7, 2021, 8:00 AM IST
ಟೋಕಿಯೊ: ದರೋಡೆಕೋರರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಬಾಕ್ಸರ್ ಓರ್ವ ಒಲಿಂಪಿಕ್ಸ್ ನಲ್ಲಿ ಸತತ ಎರಡನೇ ಚಿನ್ನದ ಪದಕ ಗೆದ್ದ ಅಮೋಘ ಸಾಹಸವಿದು. ಈ ಸಾಧಕನೇ ಕ್ಯೂಬಾದ ಜೂಲಿಯೊ ಲಾ ಕ್ರೂಜ್. ಟೋಕಿಯೊ ಹೆವಿವೇಟ್ ಬಾಕ್ಸಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಗಳಿಸಿ ಮೆರೆದಿದ್ದಾರೆ.
31 ವರ್ಷದ ಲಾ ಕ್ರೂಜ್ ಶುಕ್ರವಾರ ನಡೆದ ಹೆವಿವೇಟ್ ವಿಭಾಗದ ಫೈನಲ್ ಕಾದಾಟದಲ್ಲಿ 5-0 ಅಂತರದಿಂದ ರಶ್ಯದ ಮುಸ್ಲಿಮ್ ಗಾಜಿಮಗೊಡೇವ್ ಅವರನ್ನು ಪರಾಭವಗೊಳಿಸಿದರು.
ಸಾವು ಗೆದ್ದ ವೀರ
2014ರಲ್ಲಿ ಸಶಸ್ತ್ರ ದರೋಡೆಕೋರರು ಲಾ ಕ್ರೂಜ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅವರ ದೇಹದ ಹಿಂಭಾಗಕ್ಕೆ ಗುಂಡು ತಾಗಿದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಘಟನೆ ನಡೆದ ಎರಡು ವರ್ಷಗಳ ಬಳಿಕ ರಿಯೋ ಒಲಿಂಪಿಕ್ಸ್ ನಲ್ಲಿ ಅವರಿಗೆ ಚಿನ್ನದ ಪದಕ ಒಲಿದಿತ್ತು. ಇದೀಗ ಮತ್ತೆ ಟೋಕಿಯೋದಲ್ಲೂ ಚಿನ್ನ ಗೆದಿದ್ದಾರೆ.
“ಅಂದಿನ ಘಟನೆಯ ಆಘಾತದಿಂದ ಬೇಗನೆ ಹೊರಬರಲು ಸಾಧ್ಯವಾಗಿರಲಿಲ್ಲ. ಅದು ಅತ್ಯಂತ ಕಷ್ಟದ ಸಮಯವಾಗಿತ್ತು. ಆದರೆ ನಾನು ವಿಶ್ವಾಸ ಕಳೆದುಕೊಳ್ಳಲಿಲ್ಲ. ನನ್ನ ಈ ಸಾಧನೆಗೆ ಅಂದು ವೈದ್ಯರು ನೀಡಿದ ಶ್ರೇಷ್ಠ ಚಿಕಿತ್ಸೆಯೇ ಮುಖ್ಯಕಾರಣ’ ಎಂದು ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಕೂಡ ಆಗಿರುವ ಕ್ರೂಜ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.