ಅತ್ತಿಗೆಯ ಜತೆ ಅನೈತಿಕ ಸಂಬಂಧ ಆರೋಪ : ತಮ್ಮನನ್ನೇ ಕೊಲೆ ಮಾಡಿದ ಅಣ್ಣ
Team Udayavani, Aug 7, 2021, 9:55 AM IST
ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ ನೀಡುತ್ತಿದ್ದರು.
ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು. ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ರವಿಯು ಓಡಿ ಹೋಗಿದ್ದಾನೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.