ಏಳು ತಿಂಗಳು ಕಳೆದರೂ ದುರಸ್ತಿಯಾಗದ ಕಾವೇರಿ ತಂತ್ರಾಂಶ


Team Udayavani, Aug 8, 2021, 3:30 AM IST

ಏಳು ತಿಂಗಳು ಕಳೆದರೂ ದುರಸ್ತಿಯಾಗದ ಕಾವೇರಿ ತಂತ್ರಾಂಶ

ಬೈಂದೂರು:  ಸರಕಾರ ಆಡಳಿತ ಸುಧಾರಣೆಯಾಗಬೇಕು, ತಾಂತ್ರಿಕವಾಗಿ ಮೇಲ್ದರ್ಜೆಗೇರಬೇಕು, ಜನರಿಗೆ ಉತ್ತಮ ಸೇವೆ ದೊರೆಯಬೇಕು ಎನ್ನುವ ಉದ್ದೇಶದಿಂದ ಹೊಸ ಹೊಸ ತಂತ್ರಾಂಶಗಳನ್ನು ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸುತ್ತಿದೆ. ಆದರೆ ಈ ತಂತ್ರಾಂಶಗಳ ಗೊಂದಲದ ಪರಿಣಾಮ ನೋಂದಣಿ ಇಲಾಖೆ ಯಲ್ಲಿ ಒಟ್ಟು 14,000 ಸ್ಥಿರಾಸ್ತಿ  ಕಡತಗಳು ಕಾವೇರಿ ತಂತ್ರಾಂಶದಿಂದ ಇ-ಸ್ವತ್ತು ನೋಂದಣಿ ಯಾಗದೆ ಬಾಕಿ ಉಳಿದಿವೆ.

ಅಧಿಕಾರಿಗಳಲ್ಲಿ  ಸಮನ್ವಯದ ಕೊರತೆ:

ಅಗತ್ಯ ಕೆಲಸಕ್ಕೆ ಭೂ ವಿಕ್ರಯ ಮಾಡಿದ ಗ್ರಾಮೀಣ ಭಾಗದ ಜನರು ಈ ಗೊಂದಲದಿಂದ  ಶುಲ್ಕ ನೀಡಿ ನೋಂದಣಿಯಾಗಿದ್ದರೂ  ಕಾವೇರಿ ತಂತ್ರಾಂಶವನ್ನು ಸರಿಪಡಿಸದ ಇಲಾಖೆಯ ಕಾರ್ಯವೈಖರಿಯಿಂದ ಬೇಸತ್ತು ಹೋಗುವಂತಾಗಿದೆ. ಮಾತ್ರವಲ್ಲದೆ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಯಾದರೆ ಜನಪ್ರತಿನಿಧಿಗಳು ಮಾತ್ರ ಜಾಣ ಮೌನ ವಹಿಸುತ್ತಿದ್ದಾರೆ.

ಇಲ್ಲಿನ ಪ್ರಸ್ತುತ ಸಮಸ್ಯೆಗಳೇನು?:

ಭೂ ಪರಿವರ್ತನೆಯಾದ ಸ್ಥಿರಾಸ್ತಿಗಳನ್ನು ನೋಂದಣಿ  ಇಲಾಖೆಯಲ್ಲಿ ಪಂಚತಂತ್ರ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆಯಲ್ಲಿ ನೋಂದಾಯಿಸಲಾಗುತ್ತದೆ. ಬಳಿಕ ಆನ್‌ಲೈನ್‌ ತಂತ್ರಾಂಶದ ಮೂಲಕ ಗ್ರಾಮ ಪಂಚಾಯತ್‌ಗೆ ರವಾನೆಯಾಗುತ್ತದೆ. ಆದರೆ ಕಳೆದ ಆರೇಳು ತಿಂಗಳುಗಳಿಂದ ಕೃಷಿಯೇತರ ಸ್ಥಿರಾಸ್ತಿಗಳ ನೋಂದಣಿಯಾದ ದಸ್ತಾವೇಜುಗಳ ಮಾಹಿತಿಯು ಗ್ರಾಮ ಪಂಚಾಯತ್‌ಗೆ ವರ್ಗಾವಣೆಯಾಗಿರು ವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಲ ಪಡೆ ಯಲು, ಕಟ್ಟಡ ನಿರ್ಮಿಸಲು ಅಥವಾ ಯಾವುದೇ ಅಭಿವೃದ್ಧಿಗೂ ಅವಕಾಶ ಇಲ್ಲದಂತಾಗಿದೆ. ಈ ಕುರಿತು ಇಲಾಖೆಯನ್ನು ವಿಚಾರಿಸಿದರೆ ತಂತ್ರಾಂಶ ದೋಷ ಎನ್ನುತ್ತಾರೆ. ಜತೆಗೆ ಗುರುತಿನ ಚೀಟಿ  ಪಡೆದು ನೋಂದಣಿ  ಬಳಿಕ ರವಾನೆ ಮಾಡುವ ಪ್ರಯತ್ನವು ಸಫಲವಾಗಿಲ್ಲ. ಇಂತಹ ಸಾವಿರಾರು ಕಡತಗಳು ನೋಂದಣಿ  ಸಮಸ್ಯೆಯಿಂದ ಬಾಕಿ ಉಳಿದಿವೆ.

ಇದರ ಜತೆ ಕಾಡುವ ಇನ್ನೊಂದು ಸಮಸ್ಯೆ ಎಂದರೆ ಗುರುತಿನ ಚೀಟಿ ಪಡೆಯಲು 18 ವರ್ಷ ಮೇಲ್ಪಟ್ಟಿರಬೇಕು. ಒಂದು ವೇಳೆ ಸ್ಥಿರಾಸ್ತಿಯಲ್ಲಿ ಹಕ್ಕು ಪಡೆಯುವ ವ್ಯಕ್ತಿ ಅಪ್ರಾಪ್ತನಾಗಿದ್ದರೆ 18 ವರ್ಷ ತುಂಬುವ ವರೆಗೆ ಕಾಯಬೇಕು ಎನ್ನುವ ಗೊಂದಲ ಇದೆ. ಸಂವಿಧಾನ ನೀಡಿದ ಆಸ್ತಿ ಹಕ್ಕು ಉಲ್ಲಂಘನೆಗೆ ದಾರಿ ಮಾಡಿ ಕೊಟ್ಟಂತಿದೆ. ಬೈಂದೂರಿನಲ್ಲಿ 150ಕ್ಕೂ ಅಧಿಕ ಇಂತಹ ಪ್ರಕರಣಗಳಿವೆ. ಹೀಗಾಗಿ ಜಿಲ್ಲಾಡಳಿತ ಸಮರ್ಪಕ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವತ್ರಿಕ ಅಭಿಪ್ರಾಯವಾಗಿದೆ.

ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಈ ಸಮಸ್ಯೆ ಕಳೆದ ಆರು ತಿಂಗಳುಗಳಿಂದ ಇದೆ. ತಂತ್ರಾಂಶ ಗೊಂದಲದ ಕಾರಣ ಬಾಕಿ ಉಳಿದಿದ್ದು ಈಗಾಗಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಶೀಘ್ರ ಸರಿಪಡಿಸಲಾಗುವುದು. -ಶ್ರೀಧರ್‌, ಜಿಲ್ಲಾ ನೋಂದಣಾಧಿಕಾರಿ 

 

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.