ದೇಣಿಗೆ ಸಂಗ್ರಹಿಸಿ ಉಗ್ರರಿಗೆ ಕೊಡುತ್ತಿದ್ದ ಜೆಇಐ ಸಂಘಟನೆ!
Team Udayavani, Aug 9, 2021, 6:50 AM IST
ಶ್ರೀನಗರ: ನಿಷೇಧಿತ ಜಮಾತ್ ಎ ಇಸ್ಲಾಮಿ (ಜೆಇಐ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಅನೇಕರ ಮನೆ ಮತ್ತು ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರವಿವಾರ ದಾಳಿ ನಡೆಸಿದೆ.
ಈ ಸಂಘಟನೆಯು ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಉಗ್ರ ಸಂಘಟನೆಗಳಿಗೆ ನೀಡುತ್ತಿತ್ತು ಎನ್ನುವ ಆಘಾತಕಾರಿ ವಿಚಾರ ದಾಳಿಯಿಂದಾಗಿ ಬೆಳಕಿಗೆ ಬಂದಿದೆ.
ಜಮ್ಮು ಮತ್ತು ಕಾಶ್ಮೀರದ 14 ಜಿಲ್ಲೆಗಳ ಒಟ್ಟು 56 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಜೆಇಐ ಪ್ರಾದೇಶಿಕವಾಗಿ ಹಾಗೂ ವಿದೇಶಗಳಿಂದ ದೇಣಿಗೆ ಪಡೆಯುತ್ತಿತ್ತು. ಆ ಹಣವನ್ನು ಹಿಜ್ಬುಲ್ ಮುಜಾಹಿದೀನ್ ಮತ್ತು ಲಷ್ಕರ್ ಎ ತಯ್ಯಬಾ ಉಗ್ರ ಸಂಘಟನೆಗಳಿಗೆ ನೀಡುತ್ತಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರ ಮನಸ್ಸನ್ನು ಬದಲಿಸಿ, ಉಗ್ರ ಸಂಘಟನೆಗೆ ಸೇರಿಸುವ ಕೆಲಸದಲ್ಲೂ ಇದರ ಪಾಲಿದೆ ಎಂದು ಎನ್ಐಎ ಹೇಳಿದೆ.
ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ಜೆಇಐ ಅನ್ನು 2019ರ ಫೆಬ್ರವರಿಯಲ್ಲಿ ಐದು ವರ್ಷಗಳ ಕಾಲ ನಿರ್ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.