ರಾಷ್ಟ್ರೀಯ ವಯೋಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ ನಿಧನ
Team Udayavani, Aug 9, 2021, 8:13 AM IST
ವಿಜಯಪುರ : ಶ್ರೇಷ್ಠ ಶಿಕ್ಷಕ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ (96) ಸೋಮವಾರ ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದಲ್ಲಿ ಇರುವ ತಮ್ಮ ಮನೆಯಲ್ಲಿ ಬೆಳಗಿನ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಡೀನರಾಗಿರುವ ಡಾ.ಮಹೇಶ ಚಿಂತಾಮಣಿ ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಸಾಹಿತ್ಯದ ಅಪಾರ ಬಳಗವನ್ನು ಅಗಲಿದ್ದಾರೆ.
ಹಲಸಂಗಿ ಗೆಳೆಯರ ಬಳಗದ ಸದಸ್ಯರಾಗಿದ್ದ ಈಶ್ವರಚಂದ್ರ ಚಿಂತಾಮಣಿ ಅವರು, ಜಾನಪದ ಸಂಶೋಧನೆ, ಸಂಗ್ರಹ, ವಿಶೇಷವಾಗಿ ಮಕ್ಕಳ ಸಾಹಿತ್ಯದ ವೈವಿಧ್ಯಮಯ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ.ರಾಜ್ಯದ ನವ ಸಾಕ್ಷರರಿಗಾಗಿ ಇವರು ರಚಿಸಿದ ಕಥೆಗಳು, ನಾಟಕಗಳು ಪಠ್ಯವಾಗಿದ್ದು, ರಾಜ್ಯದ ಬಹುತೇಕ ಎಲ್ಲ ಆಕಾಶವಾಣಿ ಕೇಂದ್ರಗಳಲ್ಲಿ ಪ್ರಸಾರವಾಗಿವೆ.
ಈಶ್ವರಚಂದ್ರರ ಶಿಕ್ಷಣ ಸೇವೆಗೆ ರಾಜ್ಯ, ರಾಷ್ಟ್ರೀಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ದಕ್ಕಿದ್ದರೆ, ಸಾಹಿತ್ಯ ಹಾಗೂ ಸಂಶೋಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಕಳೆದ 3 ವರ್ಷದ ಹಿಂದೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ರಾಷ್ಟ್ರೀಯ ವಯೋಶ್ರೇಷ್ಠ ಪ್ರಶಸ್ತಿಗೂ ಚಿಂತಾಮಣಿ ಅವರು ಭಾಜನರಾಗಿದ್ದರು.
ಮೃತ ಈಶ್ವರಚಂದ್ರ ಚಿಂತಾಮಣಿ ಅವರು ವೈದ್ಯಕೀಯ ಸಂಶೋಧನೆಗಾಗಿ ನಗರದ ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಸಂಶೋಧನಾ ಕಾಲೇಜಿಗೆ ತಮ್ಮ ದೇಹ ದಾನದ ವಾಗ್ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಇಚ್ಛಾನುಸಾರ ದೇಹವನ್ನು ಸೋಮವಾರ ಬೆ.11 ಕ್ಕೆ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮೃತರ ಪುತ್ರ ಸಾಹಿತಿ ಡಾ.ಮಹೇಶ ಚಿಂತಾಮಣಿ ತಿಳಿಸಿದ್ದಾರೆ.
ಗಣ್ಯರ ಸಂತಾಪ : ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ ಅವರ ನಿಧನಕ್ಕೆ ಮಾಜಿ ಸಚಿವರಾದ ಶಾಸಕ ಡಾ.ಎಂ.ಬಿ.ಪಾಟೀಲ, ಬಸವನ ಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಶರಣ ಸಾಹಿತ್ಯ ಪರಿಷತ್ತ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ಡಾ.ನಾರಾಯಣ ಪವಾರ ಸೇರಿದಂತೆ ಗಣ್ಯರು ಈಶ್ವರಚಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.