![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 9, 2021, 2:20 PM IST
ಸಾಂದರ್ಭಿಕ ಚಿತ್ರ
ನವ ದೆಹಲಿ : ಭಾರತದಲ್ಲಿ ಈಗಾಗಲೇ ಕೋವಿಡ್ ಲಸಿಕೆ ಪಡೆಯುವುದಕ್ಕೆ ಹಿಂಜರಿಕೆಯ ಸಮಸ್ಯೆ ಇದೆ ಎಂದು ಸುಪ್ರೀಂ ಕೋರ್ಟ್ ಇಂದು(ಸೋಮವಾರ, ಆಗಸ್ಟ್ 9) ಅರ್ಜಿಯ ವಿಚಾರಣೆ ವೇಳೆ ಹೇಳಿದೆ.
ಎಲ್ ನಾಗೇಶ್ವರ ರಾವ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು ಕೋವಿಡ್ -19 ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂದು ಕೋರಿ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಮಾಜಿ ಸದಸ್ಯ ಜಾಕೋಬ್ ಪುಲಿಯಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿದ್ದು, ಕೋವಿಡ್ -19 ಲಸಿಕೆಯಿಂದ ಜನರ ಮೇಲೆ ಆಗುವ ದುಷ್ಪರಿಣಾಮಗಳ ದತ್ತಾಂಶಗಳು ಸಾರ್ವಜನಿಕರಿಗೂ ತಿಳಿಯುವಂತೆ ಕೇಂದ್ರ ಮಾಡಬೇಕೆಂದು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ : ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಯಾರಪ್ಪನ ಅಪ್ಪಣೆಯೂ ಬೇಕಾಗಿಲ್ಲ: ಕಾರಜೋಳ
ಕಡ್ಡಾಯ ಲಸಿಕಾ ಅಭಿಯಾನದ ಮೇಲೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದರೂ, ಕೋವಿಡ್ ಲಸಿಕೆ ಪ್ರಯೋಗದ ದತ್ತಾಂಶವನ್ನು ಬಹಿರಂಗಪಡಿಸುವ ಕುರಿತು ಕೇಂದ್ರ, ಆರೋಗ್ಯ ಸಚಿವಾಲಯ, ಐಸಿಎಂಆರ್ ಮತ್ತು ಲಸಿಕೆ ತಯಾರಕರಿಗೆ ನೋಟಿಸ್ ನೀಡಿದೆ.
ಅರ್ಜಿದಾರರ ಮನವಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್, “ದೇಶದಲ್ಲಿ 50 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಲಸಿಕಾ ಪ್ರಯೋಗದ ದತ್ತಾಂಶವನ್ನು ಯಾವ ಕಾರಣಕ್ಕಾಗಿ ಗೌಪ್ಯವಾಗಿಡಬೇಕೆಂದು ನೀವು ಬಯಸುತ್ತೀರಿ? ” ಎಂದು ಕೇಂದ್ರಕ್ಕೆ ಪ್ರಶ್ನಿಸಿದ್ದಾರೆ.
ಇನ್ನು, ಅರ್ಜಿದಾರರಿಗೆ ಪ್ರಶ್ನಿಸಿದ ನ್ಯಾಯಮೂರ್ತಿಗಳು, “ದೇಶ, ಲಸಿಕೆ ಪಡೆಯುವುದಕ್ಕೆ ಜನರು ಹಿಂಜರಿಕೆ ಮಾಡಿಕೊಳ್ಳಬಾರದು ಎನ್ನುವ ಬಗ್ಗೆ ಕಾರ್ಯ ಯೋಜನೆಯಲ್ಲಿದೆ . ಇಂತಹ ಅರ್ಜಿಗಳು ಜನರ ಮನಸ್ಸಿನಲ್ಲಿ ಅನುಮಾನವನ್ನು ಸೃಷ್ಟಿಸುತ್ತವೆ ಎಂದು ನೀವು ಭಾವಿಸುವುದಿಲ್ಲವೇ?” ಎಂದು ಕೇಳಿದ್ದಾರೆ. ಮಾತ್ರವಲ್ಲದೇ, ನ್ಯಾಯಾಲಯವು “ಲಸಿಕೆ ಹಿಂಜರಿಕೆಯನ್ನು ಉತ್ತೇಜಿಸುತ್ತಿದೆ” ಎನ್ನುವಂತಾಗಬಾರದು ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಇದು “ಲಸಿಕೆ ವಿರೋಧಿ ಅರ್ಜಿ” ಅಲ್ಲ ಅಥವಾ ಅರ್ಜಿದಾರರು ದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ನಿಲ್ಲಿಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದ್ದಾರೆ.
ಲಸಿಕೆ ಪ್ರಯೋಗಗಳಲ್ಲಿ ಪಾರದರ್ಶಕತೆ ಅಗತ್ಯ ಮತ್ತು ಡೇಟಾವನ್ನು ಬಹಿರಂಗಪಡಿಸುವುದರಿಂದ ಎಲ್ಲಾ ಅನುಮಾನಗಳನ್ನು ನಿವಾರಣೆಯಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.