ಭಾರತೀಯರಲ್ಲೇ ಅಧ್ಯಾತ್ಮಿಕ ಶ್ರೀಮಂತಿಕೆ ಅಧಿಕ
ತಮ್ಮ ಜವಾಬ್ದಾರಿ ನಿಭಾಯಿಸಿ ಶ್ರೀಗಳ ಪ್ರವಚನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು
Team Udayavani, Aug 9, 2021, 6:20 PM IST
ಭಾಲ್ಕಿ: ಜಗತ್ತಿನ ಎಲ್ಲ ರಾಷ್ಟ್ರಗಳಿಗಿಂತಲೂ ಭಾರತೀಯರಲ್ಲಿ ಅಧ್ಯಾತ್ಮಿಕ ಶ್ರೀಮಂತಿಕೆ ಹೆಚ್ಚಿದೆ. ಇಲ್ಲಿಯ ಶರಣು, ಸಂತರು, ಸ್ವಾಮಿಗಳು ಜೀವನದ ಮೌಲ್ಯಗಳನ್ನು ಜನರಿಗೆ ತಿಳಿಹೇಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹೀಗಾಗಿ ನಾವೆಲ್ಲರೂ ಪೂಜ್ಯರ ಪ್ರವಚನ ಕೇಳಿ ಪುನೀತರಾಗಬೇಕು ಎಂದು ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರ ಪ್ರವಚನ ಆಯೋಜಿಸುವ ಕುರಿತು ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮನೆಯ ಸ್ವತ್ಛವಾಗಲು ಕಸ ಗುಡಿಸಬೇಕು. ದೇಹ ಸ್ವತ್ಛವಾಗಿಸಿಕೊಳ್ಳಲು ಸ್ನಾನ ಮಾಡಬೇಕು. ಹಾಗೇ ನಮ್ಮ ಅಂತರಂಗ ಶುದ್ಧವಾಗಿಸಿಕೊಳ್ಳಲು ಸಂತರ, ಮಹಾತ್ಮರ ವಾಣಿ ಆಲಿಸುವುದು ಅಗತ್ಯ. ಸಿದ್ದೇಶ್ವರ ಸ್ವಾಮೀಜಿ ಅವರು ನಡೆದಾಡುವ ವಿಶ್ವಕೋಶ ಇದ್ದ ಹಾಗೆ. ಅಂತಹ ಮಹಾತ್ಮರು ಭಾಲ್ಕಿ ಪಟ್ಟಣದಲ್ಲಿ ಪ್ರವಚನ ನಡೆಸಿಕೊಡಲು ಒಪ್ಪಿಕೊಂಡಿರುವುದು ನಮ್ಮೆಲ್ಲರ ಸೌಭಾಗ್ಯ. ಸೆಪ್ಟಂಬರ್‌ನಲ್ಲಿ ಶ್ರೀಗಳ ಪ್ರವಚನ ನಡೆಯಲಿದ್ದು, ಭಕ್ತರು ನಿಸ್ವಾರ್ಥ ಮನೋಭಾವದಿಂದ ತಮ್ಮ ಜವಾಬ್ದಾರಿ ನಿಭಾಯಿಸಿ ಶ್ರೀಗಳ ಪ್ರವಚನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿ ಅವರು ಅಪ್ಪಟ ಬಸವತತ್ವದ ಅನುಯಾಯಿ, ಆದರ್ಶ ಪುರುಷರಾಗಿದ್ದಾರೆ. ಶ್ರೀಗಳು ಈ ಭಾಗಕ್ಕೆ ಬರುತ್ತಿರುವುದು ಹರ್ಷ ತಂದಿದೆ. ಶ್ರೀಗಳ ಪ್ರವಚನ ಯಶಸ್ವಿಗೆ ತನು, ಮನ, ಧನದಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಮನುಷ್ಯನ ವ್ಯಕ್ತಿತ್ವ ಸುಧಾರಣೆಗೆ ಅಧ್ಯಾತ್ಮದ ಜ್ಞಾನ ಅತ್ಯಂತ ಅವಶ್ಯಕ. ಈ ನಿಟ್ಟಿನಲ್ಲಿ ಸಿದ್ದೇಶ್ವರ ಸ್ವಾಮೀಜಿ ಇಲ್ಲಿಗೆ ಬಂದು ಜ್ಞಾನದ ದಾಸೋಹ ನೀಡಲು ಒಪ್ಪಿರುವುದು ನಮ್ಮೆಲ್ಲರ ಭಾಗ್ಯ. ಶೀಘ್ರವೇ ಮತ್ತೂಮ್ಮೆ ನಿಯೋಗ ಕೊಂಡೊಯ್ಯದು ಶ್ರೀಗಳನ್ನು ಭೇಟಿಯಾಗಿ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.
ಯುವ ಮುಖಂಡ ಪ್ರಸನ್ನ ಖಂಡ್ರೆ, ಪುರಸಭೆ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ವಂಕೆ, ಪ್ರಕಾಶ ಬಿರಾದಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಬಸವಲಿಂಗ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ರಾಜಶೇಖರ ಅಷ್ಟೂರೆ, ಸೋಮನಾಥಪ್ಪ ಅಷ್ಟೂರೆ, ವಿಶ್ವನಾಥಪ್ಪ ಬಿರಾದಾರ್, ಪ್ರಕಾಶ ಡೋಣಗಾಪೂರೆ, ಚನ್ನಬಸವ ಬಳತೆ, ಶಶಿಧರ ಕೋಸಂಬೆ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ್, ಸಂಗಮೇಶ ಗುಮ್ಮೆ, ಉಮಾಕಾಂತ ವಾರದ, ಶೇಖರ ವಂಕೆ, ಸಿಕ್ರೇಶ್ವರ ಶೆಟಕಾರ್, ಜಯರಾಜ ಪಾತ್ರೆ, ಶಂಭುಲಿಂಗ ಕಾಮಣ್ಣ, ವೈಜಿನಾಥ ಸಿಸರ್ಗಿ, ಸಂಗಮೇಶ ಕಾರಾಮುಂಗೆ, ಅಮರ ಜಲೆª, ಟಿಂಕು ರಾಜಭವನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.