ವಿದ್ಯುತ್ ಸ್ಪರ್ಶಿಸಿ ಅಂತಿಮ ಪದವಿ ವಿದ್ಯಾರ್ಥಿನಿ ಸಾವು
Team Udayavani, Aug 9, 2021, 9:11 PM IST
ಸಾಂದರ್ಭಿಕ ಚಿತ್ರ..
ಕನಕಪುರ : ತಾಯಿಯನ್ನು ರಕ್ಷಣೆ ಮಾಡಲು ಹೋದ ಅಂತಿಮ ಪದವಿ ವಿದ್ಯಾರ್ಥಿನಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಹಾರೋಹಳ್ಳಿಯ ಕೋಟೆಯಲ್ಲಿ ನಡೆದಿದೆ.
ತಾಲೂಕಿನ ಹಾರೋಹಳ್ಳಿ ಕೋಟೆ ನಿವಾಸಿ ಶ್ರೀನಿವಾಸ್ ಮೂರ್ತಿ ಅವರ ತೃತೀಯ ಪುತ್ರಿ ನಿಸರ್ಗ 21 ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಒಗೆದ ಬಟ್ಟೆಗಳನ್ನು ಒಣಗಿ ಹಾಕಲು ಹೋದಾಗ ಈ ಅವಘಡ ಸಂಭವಿಸಿದೆ ತಾಯಿ ನಾಗಮಣಿ ಒಗೆದ ಬಟ್ಟೆಗಳನ್ನು ತಂತಿಯ ಮೇಲೆ ಒಣಗಿ ಹಾಕಲು ಹೋದಾಗ ವಿದ್ಯುತ್ ತಗಲಿದೆ ಅಲ್ಲೇ ಇದ್ದ ಮಗಳು ನಿಸರ್ಗ ತಾಯಿಯನ್ನು ರಕ್ಷಣೆ ಮಾಡಲು ಹೋದಾಗ ತಾಯಿ ನಾಗಮಣಿ ಪ್ರಾಣಾಪಾಯದಿಂದ ಪಾರಾದರು ಆದರೆ ಮಗಳು ನಿಸರ್ಗ ಳಿಗೆ ವಿದ್ಯುತ್ ತಗಲಿ ಕೆಳಗೆ ಬಿದ್ದಿದ್ದರು ಬಳಿಕ ಸ್ಥಳೀಯ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಸರ್ಗ ಮೃತಪಟ್ಟಿದ್ದಾಳೆ.
ಇದನ್ನೂ ಓದಿ:‘ನೀರಜ್’ಹೆಸರಿನವರಿಗೆ ಫ್ರೀ ಪೆಟ್ರೋಲ್: ಚೋಪ್ರಾ ಚಿನ್ನದ ಸಾಧನೆಗೆ ಬಂಕ್ ಮಾಲೀಕನ ಸಂಭ್ರಮ
ವಿದ್ಯುತ್ ಕಂಬದಿಂದ ಮನೆಗೆ ಸಂಪರ್ಕಕಲ್ಪಿಸಲು ಅಳವಡಿಸಿದ್ದ ಕಬ್ಬಿಣದ ಪೈಪಿಗೆ ಬಟ್ಟೆ ಒಣಗಿ ಹಾಕಲು ತಂತಿಯನ್ನು ಕಟ್ಟಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ .
ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿರುವ ಹಾರೋಹಳ್ಳಿ ಪೊಲೀಸರು ಯುಡಿಆರ್ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Ramanagara: ಕಾಡಾನೆ ದಾಳಿಗೆ ರೈತ ಬಲಿ
Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.