ಫೈಟರ್ ಸಾವು ಪ್ರಕರಣ: ದೂರು ದಾಖಲಾಗುತ್ತಿದ್ದಂತೆ ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆ ?
Team Udayavani, Aug 10, 2021, 1:49 PM IST
ಬೆಂಗಳೂರು: ಲವ್ ಯೂ ರಚ್ಚು ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣದಡಿ ದೂರು ದಾಖಲಾಗುತ್ತಿದ್ದಂತೆ ನಿರ್ಮಾಪಕ ಗುರುದೇಶಪಾಂಡೆ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಸೋಮವಾರ (ಆಗಸ್ಟ್ 9) ಬಿಡದಿಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೈ ಟೆನ್ಷನ್ ಕರೆಂಟ್ ವೈರ್ ತಗುಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ರಂಜಿತ್ ಎನ್ನುವ ಸಹಾಯಕ ಕಲಾವಿದನಿಗೆ ಗಂಭೀರ ಗಾಯವಾಗಿದೆ.
ಘಟನೆ ಸಂಬಂಧ ಚಿತ್ರದ ನಿರ್ದೇಶಕ ಶಂಕರ, ಚಿತ್ರದ ನಿರ್ಮಾಪಕ ಗುರುದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಚಿತ್ರದ ಉಸ್ತುವಾರಿ ಪರ್ನಾಂಡಿಸ್ ಚಿತ್ರದ ಕ್ರೇನ್ ಅಪರೇಟರ್ ಮಹೇದವ ವಿರುದ್ಧ ದೂರು ದಾಖಲಾಗಿದೆ.
ಬಿಡದಿ ಪೊಲೀಸರು ಸುಮೋಟೋ ಕೇಸ್ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಈಗಾಗಲೇ ಬಂಧಿಸಿರುವ ನಿರ್ದೇಶಕ ಶಂಕರಯ್ಯ, ವಿನೋದ್ ಕುಮಾರ್, ಮಹದೇವ್ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಇನ್ನು ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್ ಹಾಗೂ ಫೈಟ್ ಮಾಸ್ಟರ್ ವಿನೋದ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ರಾಮನಗರ ಅಪರ ಹಿರಿಯ ಸಿವಿಲ್ ನ್ಯಾಯಾಧೀಶೇ ಅನುಪಮ ಲಕ್ಷ್ಮೀ ಆದೇಶಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 24 ರಂದು ನಡೆಸಲಾಗುವುದು ನ್ಯಾಯಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ
Thalapathy69: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ
Bhairathi Ranagal: ಭೈರತಿಗೆ ಸ್ಯಾಂಡಲ್ವುಡ್ ಆರತಿ
BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ
Sandalwood: ಪ್ಯಾನ್ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್ ಆಗಲಿದೆ ಕನ್ನಡದ ʼಭಗತ್ʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.