ಹೇಗಿದೆ ನಮ್ಮ ಆಡಳಿತ?: ಜನರ ಅಭಿಪ್ರಾಯ ಕೇಳಿದ ಪ್ರಧಾನಿ

Team Udayavani, Aug 11, 2021, 7:20 AM IST

ಹೇಗಿದೆ ನಮ್ಮ ಆಡಳಿತ?: ಜನರ ಅಭಿಪ್ರಾಯ ಕೇಳಿದ ಪ್ರಧಾನಿ

ಹೊಸದಿಲ್ಲಿ: ಎನ್‌ಡಿಎ ನೇತೃತ್ವದ ಸರಕಾರದ ಸಾಧನೆ, ಕೆಲಸ ಹೇಗಿದೆ ಎಂಬುದನ್ನು ತಿಳಿಯಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಕೊರೊನಾ ಪರಿಸ್ಥಿತಿ ನಿಭಾಯಿಸಿದ ರೀತಿ, ರಾಮಮಂದಿರ ನಿರ್ಮಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಸಹಿತ ಪ್ರಮುಖ ವಿಚಾರಗಳ ಬಗ್ಗೆ ಜನರ ಅಭಿಪ್ರಾಯ ತಿಳಿಯಲು ತೀರ್ಮಾನಿಸಿದ್ದಾರೆ.

ಉತ್ತರಪ್ರದೇಶ ಸೇರಿ ಐದು ರಾಜ್ಯಗಳಿಗೆ ಮುಂದಿನ ವರ್ಷದ ಮೊದಲರ್ಧದಲ್ಲಿ ಚುನಾ ವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಈ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಪ್ರಧಾನಮಂತ್ರಿಗಳ ಮೊಬೈಲ್‌ ಆ್ಯಪ್‌ನಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಅಭಿಪ್ರಾಯ ಹಂಚಿಕೊಳ್ಳಿ: ರಾಮ ಮಂದಿರ ನಿರ್ಮಾಣ, ತ್ರಿವಳಿ ತಲಾಖ್‌ ರದ್ದು ಕಾಯ್ದೆ, ವಿಶೇಷ ಮಾನ್ಯತೆ ರದ್ದು, ಶಿಕ್ಷಣ, ಕೊರೊನಾ ಪರಿಸ್ಥಿತಿ ನಿರ್ವಹಣೆ, ಉದ್ಯೋಗ, ಶುಚಿತ್ವ, ವಿದ್ಯುತ್‌, ರಸ್ತೆಗಳು ಮತ್ತು ಮೂಲಸೌಕರ್ಯ ಗಳು, ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯ ವಸ್ಥೆಗಳ ಸಹಿತ ಒಟ್ಟು 13 ವಿಚಾರಗಳ ಬಗ್ಗೆ ಅಭಿಮತ ಆಹ್ವಾನಿಸಲಾಗಿದೆ.

ಎರಡನೇ ಭಾಗ:

ಎರಡನೇ ಭಾಗದಲ್ಲಿ “ಒಪ್ಪಿಕೊಳ್ಳು ತ್ತೀರಾ’ ಮತ್ತು “ಅಸಮ್ಮತಿ ಸೂಚಿಸುತ್ತೀರಾ’ ಎಂಬ ಆಯ್ಕೆ ನೀಡಲಾಗಿದೆ. ಅಲ್ಲಿ “ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಅಧಿಕಾರ ಇದ್ದರೆ ಅಭಿವೃದ್ಧಿಗೆ ನೆರವಾಗು ತ್ತದೆಯೇ’, “ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿವೆಯೇ?’, “ಮುಂದಿನ ವರ್ಷಗಳಲ್ಲಿ ರಾಜ್ಯದ ಭವಿಷ್ಯ ಉಜ್ವಲವಾಗಿ ಬೆಳಗಲಿದೆಯೇ?’, “ರಾಜ್ಯ ಸರಕಾರದ ಒಟ್ಟಾರೆ ಸಾಧನೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?’ ಎಂಬ ಪ್ರಶ್ನೆಗಳನ್ನು ಕೇಳಲಾಗಿದೆ.

“ಮತ ಚಲಾಯಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ಜಾತಿ, ಧರ್ಮ, ಅವರು ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗಮನಿಸುತ್ತೀರಾ’ ಎಂದೂ ಕೇಳಲಾಗಿದೆ.

ಅಭ್ಯರ್ಥಿಗಳ ಆಯ್ಕೆಗೆ ಸಹಕಾರಿ?: ಮುಂದಿನ ವರ್ಷದ ಮೊದಲ ಭಾಗದಲ್ಲಿ ಉತ್ತರಪ್ರದೇಶ, ಪಂಜಾಬ್‌, ಉತ್ತರಾಖಂಡ, ಗೋವಾ, ಮಣಿಪುರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಸಮೀಕ್ಷೆ ನಡೆಸುವುದರಿಂದ ಈ ಐದು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ನೀಡಬಹುದು ಎಂಬ ಬಗೆಗಿನ ಲೆಕ್ಕಾಚಾರವೂ ಇದೆ. ಐದು ರಾಜ್ಯಗಳಲ್ಲಿರುವ ಬಿಜೆಪಿ ಮುಖಂಡರ ಪೈಕಿ ಮೂವರು ಪ್ರಮುಖರ ನಾಯಕರ ಹೆಸರನ್ನೂ ಉಲ್ಲೇಖೀಸುವಂತೆ ಕೋರಿರುವುದು ಮಹತ್ವದ್ದು.

ಸರಕಾರದ ಮೌಲ್ಯಮಾಪನ: ಆಯಾ ರಾಜ್ಯ ಸರಕಾರಗಳು ರಸ್ತೆ, ಇಂಧನ, ಕುಡಿಯುವ ನೀರು, ಕೈಗೆಟಕುವ ದರದಲ್ಲಿ ಆರೋಗ್ಯ ವ್ಯವಸ್ಥೆ, ಶಿಕ್ಷಣ, ಪಡಿತರ ಸಂಬಂಧಿ ವಿಚಾರಗಳು, ಕಾನೂನು ಮತ್ತು ಸುವ್ಯವಸ್ಥೆ, ಉದ್ಯೋಗ ಸೃಷ್ಟಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯುದೀಕರಣ, ರೈತರ ಕಲ್ಯಾಣ ಕ್ಷೇತ್ರಗಳಲ್ಲಿ ಯಾವ ಸಾಧನೆ ಮಾಡಲಾಗಿದೆ ಎಂದೂ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜನರಿಗೆ ಹೆಚ್ಚು ಅನುಕೂಲವಾಗಿರುವ ಯೋಜನೆ ಯಾವುದು ಎಂಬ ಬಗ್ಗೆಯೂ ಅಭಿಪ್ರಾಯ ಆಹ್ವಾನಿಸಲಾಗಿದೆ. ಬಿಜೆಪಿಗೆ ಮತ ಹಾಕಲು ತಿಳಿಸುತ್ತೀರಾ- ಹೌದು ಅಥವಾ ಇಲ್ಲ ಎಂಬ ಉತ್ತರದೊಂದಿಗೆ ಸಮೀಕ್ಷೆ ಮುಕ್ತಾಯವಾಗುತ್ತದೆ.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.