ಸದ್ಯದಲ್ಲೇ KGF ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್ ಶಿಪ್


Team Udayavani, Aug 11, 2021, 4:56 PM IST

Huge industrial township near KGF will start Soon : Murugesh Nirani

*ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಿಸಲು ಮನವಿ

* ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ ಮಾಡಿದ ಸಚಿವ ನಿರಾಣಿ

* ಬಳಕೆಯಾಗದಿರುವ ಬಿಜಿಎಂಎಲ್ ಜಮೀನು ನೀಡುವಂತೆ ಕೋರಿಕೆ

*ಟೌನ್‍ಶಿಪ್ ನಿರ್ಮಾಣದಿಂದ ಕೈಗಾರಿಕೆಗಳ ಉತ್ತೇಜನ ಉದ್ಯೋಗ ಸೃಷ್ಟಿ.

* ಕೇಂದ್ರದಿಂದ ಟೌನ್‍ಶಿಪ್ ನಿರ್ಮಾಣಕ್ಕೆ ಎಲ್ಲ ರೀತಿ ಸಹಕಾರದ ನೆರವು.

ನವದೆಹಲಿ : ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ  ಇರುವ ಜಮೀನಿನಲ್ಲಿ  ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಿರಾಣಿಯವರು, ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

ಕೆಜಿಎಪ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಗೆ ಬರುವ ಸುಮಾರು 3212 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರವು ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದುಘಿ, ಇಲ್ಲಿ ಗಣಿಗಾರಿಕೆ ನಡೆಸಲು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಸಚಿವರಿಗೆ ವಸ್ತುಸ್ಥಿತಿಯನ್ನು ನಿರಾಣಿ ಅವರು ವಿವರಿಸಿದರು. ಟೌನ್‍ಶಿಪ್ ನಿರ್ಮಾಣವಾದರೆ ಈ ಭಾಗದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅನುಕೂಲವಾಗುತ್ತದೆ. ಅಲ್ಲದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಉಗ್ರರ ವಿರುದ್ಧ ಹೋರಾಡಲು ಹೊಸಪಡೆ ರಚನೆ: ತಾಲಿಬಾನ್ ಗೆ ಸಡ್ಡು ಹೊಡೆದ ಗವರ್ನರ್ ಸಲೀಮಾ!

ಕೆಜಿಎಪ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ.

ಅಲ್ಲದೆ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್‍ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕೆಂದು ಕೋರಿದರು.

ಕೆಜಿಎಪ್ ಚಿನ್ನದ ಗಣಿಯು ಅತ್ಯಂತ ಪುರಾತನವಾದ ಗಣಿ ಪ್ರದೇಶವಾಗಿತ್ತು. ಬ್ರಿಟಿಷರ ಕಾಲದಿಂದಲೇ ಇಲ್ಲಿ ಗಣಿಗಾರಿಕೆಯನ್ನು ನಡೆಸಲಾಗುತ್ತಿತ್ತುಘಿ. ಕಳೆದ ಹಲವಾರು ವರ್ಷಗಳಿಂದ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ.

ಭಾರತೀಯ ಪರಂಪರೆಯಲ್ಲಿ ಚಿನ್ನಕ್ಕೆ ಅಗ್ರಸ್ಥಾನ. ದೇಶದಲ್ಲಿ ಚಿನ್ನದ ಉತ್ಪಾದನೆ ಪ್ರಮಾಣ ಕಡಿಮೆಯಿರುವುದರಿಂದ ವಿದೇಶಗಳಿಂದ ಪ್ರತಿವರ್ಷ 30 ಬಿಲಿಯ ಡಾಲರ್ (ಅಂದಾಜು 2 ಲಕ್ಷ ಕೋಟಿ ರೂ.ಗೂ ಹೆಚ್ಚು) ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದರು.

ದೇಶೀಯವಾಗಿ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕ 2ರಿಂದ 3 ಟನ್ ಉತ್ಪಾದಿಸಲಾಗುತ್ತಿದೆ. 19 ವರ್ಷಗಳ ಹಿಂದೆ ಮುಚ್ಚಲಾಗಿದ್ದ ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎï)ಗಳಲ್ಲಿ ಮತ್ತೆ ಚಿನ್ನದ ಗಣಿಗಾರಿಕೆ ಆರಂಭಿಸಲು ಕೇಂದ್ರ ಅನುಮತಿ ನೀಡಿದೆ  ಎಂದು ತಿಳಿಸಿದರು.

12,500 ಎಕರೆಯಲ್ಲಿ ಚಿನ್ನ

ಬಿಜಿಎಂಎಲ್‍ಗೆ ಸೇರಿದ ಗಣಿ ಪ್ರದೇಶ ಸುಮಾರು 12,500 ಎಕರೆಗಳಿದ್ದು, ಈ ಪ್ರದೇಶದಲ್ಲಿಚಾಂಪಿಯನ್ ರೀï, ಮಾರಿಕುಪ್ಪಂ, ಗೋಲ್ಕೊಂಡ, ಚಿಗರಿಗುಂಟೆ, ಬಿಸಾನತ್ತಂ, ಮೈಸೂರು ಮೈನ್ಸ್, ನಂದಿದುರ್ಗ್, ಹೆನ್ರೀಸ್ ಸೇರಿದಂತೆ 30ಕ್ಕೂ ಹೆಚ್ಚು ಭಾಗಗಳಲ್ಲಿ ಚಿನ್ನವನ್ನು ಹೊರ ತೆಗೆಯಲಾಗಿದೆ ಎಂದು ವಿವರಿಸಿದರು.

ಕೆಜಿಎಫ್ ಚಿನ್ನದ ಗಣಿ ಪ್ರಪಂಚದಲ್ಲೇ ಅತ್ಯಂತ ಹಳೆಯದು. ಕೆಜಿಎï ಭಾಗದಲ್ಲಿಚೋಳರ ಕಾಲದಲ್ಲಿಚಿನ್ನದ ನಿಕ್ಷೇಪ ಶೋಧಿಸಿದ್ದರ ಬಗ್ಗೆ ಇತಿಹಾಸದ ದಾಖಲೆಗಳಿವೆ. ನಂತರ É್ರಂಚ್ ಭೂಗರ್ಭ ಶಾಸಜ್ಞರ ಸಹಾಯದಿಂದ ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಕಾಲದಲ್ಲಿಚಿನ್ನವನ್ನು ಹೊರ ತೆಗೆಯಲಾಗುತ್ತಿತ್ತು ಎಂದು ಈಸ್ಟ್ ಇಂಡಿಯಾ ಕಂಪನಿ ದಾಖಲೆಗಳಲ್ಲಿಉಲ್ಲೇಖವಿದೆ.

ಕೆಜಿಎಫ್   ಚಿನ್ನದ ಗಣಿ ಪ್ರಪಂಚದಲ್ಲೇ ಅತ್ಯಂತ ಆಳವಾದ ಗಣಿ. ಸುಮಾರು 3200 ಮೀಟರ್ (10,500 ಅಡಿಗಳು) ಆಳದ ಗಣಿಗಳಿವೆ. ಜತೆಗೆ ಚಿನ್ನದ ಅದಿರು ಹೊರತೆಗೆಯಲು ಸುಮಾರು 1,400 ಕಿ.ಮೀ.ಗಳಷ್ಟು ಉದ್ದದ ಸುರಂಗ ಕೊರೆಯಲಾಗಿದೆ. ಕಾರ್ಮಿಕರು ಗಣಿಯ ಆಳಕ್ಕೆ ಇಳಿಯಲು 30ಕ್ಕೂ ಹೆಚ್ಚು ಶಾಪ್ಟ್ ಳನ್ನು ನಿರ್ಮಿಸಲಾಗಿತ್ತು. ಕಂಪನಿ ಉತ್ತುಂಗದಲ್ಲಿದ್ದಾಗ ಸುಮಾರು 35 ಸಾವಿರ ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.

ಈ ಗಣಿಯಲ್ಲಿ ಒಂದು ಟನ್ ನಿಕ್ಷೇಪದಿಂದ ಸುಮಾರು 3.07 ಗ್ರಾಂ.ನಿಂದ 4.09 ಗ್ರಾಂ.ಗಳಷ್ಟು ಚಿನ್ನ ಲಭಿಸುತ್ತಿತ್ತು. ಹಾಗಾಗಿ ಗಣಿಯನ್ನು ಮುಚ್ಚುವವರೆಗೆ ಬಿಜಿಎಂಎಲ್‍ನ ಅಧಿಕೃತ ದಾಖಲೆಗಳ ಮಾಹಿತಿ ಪ್ರಕಾರ ಒಟ್ಟು 800 ಟನ್ ಚಿನ್ನವನ್ನು ಉತ್ಪಾದಿಸಲಾಗಿದೆ. ಇದಕ್ಕೂ ಮೊದಲು, ಚೋಳರ ಕಾಲದಲ್ಲಿ ಮತ್ತು ಹೈದರಾಲಿ ಹಾಗೂ ಟಿಪ್ಪುಸುಲ್ತಾನರ ಕಾಲದಲ್ಲಿ ಸುಮಾರು 6,200 ಕೆ.ಜಿ.ಗಳಷ್ಟು ಚಿನ್ನವನ್ನು ಉತ್ಪಾದಿಸಲಾಗಿತ್ತು ಎಂಬುದನ್ನು ದಾಖಲೆಗಳ ಸಮೇತ  ವಿವರಿಸಿದರು.

ಸೂಕ್ತ ಭರವಸೆ

ಸಚಿವ ನಿರಾಣಿಯವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಲ್ಲಿದ್ದಲು ಸಚಿವ  ಪ್ರಹ್ಲಾದ್ ಜೋಷಿ ಅವರು ಸದ್ಯದಲ್ಲಿಯೇ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವಸ್ತುಸ್ಥಿತಿ ಅಧ್ಯಯನ ನಡೆಸುವಂತೆ ಸೂಚನೆ ನೀಡಲಾಗುವುದು. ಕೆಜಿಎïನಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪನೆ ಮಾಡಲು ಕೇಂದ್ರದಿಂದ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ಕೊಟ್ಟರು.

ಇದನ್ನೂ ಓದಿ : ಕಾಡು ಹಂದಿಗೆ ಇಟ್ಟ ಉರುಳಿಗೆ ಬಿತ್ತು ಬೃಹತ್ ಗಾತ್ರದ ಚಿರತೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.