ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ : ಸಚಿವ ಶ್ರೀರಾಮುಲು ಧನ್ಯವಾದ
Team Udayavani, Aug 11, 2021, 5:22 PM IST
ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.
ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು(ಬುಧವಾರ, ಆಗಸ್ಟ್ 11) ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಅವರು ಹೇಳಿದರು.
ಇದನ್ನೂ ಓದಿ : ಅಲೆಕ್ಸಾ ಬಾಯ್ ಫ್ರೆಂಡ್ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?
ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆರ್ ಎಸ್ ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರೆಸ್ಸೆಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರ್ ಎಸ್ ಎಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.
ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ತಿಳಿಸಿದರು.
ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ದಲಿತ, ಹಿಂದುಳಿದ ಪರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಏರಿಳಿಕೆಯೊಂದಿಗೆ ವಹಿವಾಟು ಅಂತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.