ರಾಜಕೀಯ ಗೊಂದಲಗಳಿಗೆ ಕಡಿವಾಣ ಹಾಕಲೇಬೇಕು


Team Udayavani, Aug 12, 2021, 6:10 AM IST

ರಾಜಕೀಯ ಗೊಂದಲಗಳಿಗೆ ಕಡಿವಾಣ ಹಾಕಲೇಬೇಕು

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ, ಹೊಸ ಸಂಪುಟ, ಖಾತೆ ಹಂಚಿಕೆ ಎಲ್ಲವೂ ಮುಗಿದ ಅನಂತರ ಇನ್ನೇನು ಸರಕಾರ ಅಭಿವೃದ್ಧಿಯತ್ತ ಗಮನಹರಿಸಲಿದೆ ಎಂದುಕೊಳ್ಳುತ್ತಿರುವಂತೆ ಖಾತೆ ಹಂಚಿಕೆಯ ಅಸಮಾಧಾನ ಆಡಳಿತಾರೂಢ ಬಿಜೆಪಿಯಲ್ಲಿ ಸ್ಫೋಟಗೊಂಡು ಸಂಧಾನ, ಮಾತುಕತೆ, ರಾಜೀನಾಮೆಯ ಬೆದರಿಕೆ ಹಂತಕ್ಕೆ ಹೋಗಿರುವುದು ಒಳ್ಳೆಯ ಬೆಳವಣಿಗೆಯಲ್ಲ.

ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಮುಖ್ಯಮಂತ್ರಿ ಪರಮಾಧಿಕಾರ ಎಂಬ ಮಾತು ಕೇವಲ ಮಾತಿಗೆ ಸೀಮಿತವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಲ್ಲವೂ ಹೈಕಮಾಂಡ್‌ ಅಥವಾ ವರಿಷ್ಠರದೇ ತೀರ್ಮಾನ ಇದರಲ್ಲಿ ಯಾವ ಪಕ್ಷವೂ ಹೊರತಲ್ಲ.

ಬಿಜೆಪಿಯಲ್ಲಿ ಈಗ ಉಂಟಾಗಿರುವ ಖಾತೆ ಹಂಚಿಕೆ ಅಸಮಾಧಾನವನ್ನು ಈಗಲೇ ಶಮನ ಮಾಡದಿದ್ದರೆ ಮುಂದೆ ಬೇರೆ ರೀತಿಯ ಸ್ವರೂಪ ಪಡೆಯುವ ಸಾಧ್ಯತೆಗಳೂ ಇಲ್ಲದಿಲ್ಲ. ಹೀಗಾಗಿ, ಪಕ್ಷದ ವರಿಷ್ಠರು ಈ ಕುರಿತು ಗಂಭೀರವಾಗಿ ಯೋಚಿಸಿ ಕ್ರಮ ಕೈಗೊಳ್ಳಬೇಕು.

ಖಾತೆ ಹಂಚಿಕೆ ಕುರಿತು ಅಸಮಾಧಾನ ಮುಂದೆ ಇಲಾಖೆಗೆ ಇಂಥದ್ದೇ ಅಧಿಕಾರಿ ಬೇಕು. ಇಷ್ಟು ಅನುದಾನ ಬೇಕು, ಇಂಥದ್ದೇ ಯೋಜನೆ ಅನುಷ್ಠಾನವಾಗಬೇಕು ಎಂಬ ಷರತ್ತುಗಳಿಗೆ ವಿಸ್ತರಿಸಿದರೆ ಖಂಡಿತವಾಗಿಯೂ ಉತ್ತಮ ಸರಕಾರ ಕೊಡಲು ಸಾಧ್ಯವಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ಸರಕಾರ ಪತನಕ್ಕೆ ಕಾರಣವಾಗಿದ್ದು ಇಂಥದ್ದೇ ಅಂಶಗಳು. ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆ, ಸಚಿವಗಿರಿಯ ಬೇಡಿಕೆ, ಪ್ರಿಯವಾದ ಖಾತೆಗೆ ಪಟ್ಟು, ಶಾಸಕರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ವಿಚಾರಗಳಿಂದ ಸರಕಾರವೇ ಪತನವಾಗುವ ಹಂತಕ್ಕೆ ತಲುಪಿತು.

ಹರಸಾಹಸದ ನಡುವೆ ರಚನೆಯಾದ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪ್ರವಾಹ, ಕೊರೊನಾ ಸವಾಲಾಗಿ ಪರಿಣಮಿಸಿತು. ಜತೆಗೆ ಆಂತರಿಕ ಸಂಘರ್ಷದಿಂದ ಮುಖ್ಯಮಂತ್ರಿ ಬದಲಾವಣೆಯೂ ಆಯಿತು. ಇದೀಗ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದು ಮತ್ತೆ ಅದೇ ವರ್ತನೆಗಳು ಪುನರಾವರ್ತನೆಯಾಗುತ್ತಿವೆ.ಅತೃಪ್ತ ಶಾಸಕರ ಬಹಿರಂಗ ಹೇಳಿಕೆ, ರಹಸ್ಯ ಮಾತುಕತೆ, ಖಾತೆ ಹಂಚಿಕೆ ಬಗ್ಗೆ ಆಕ್ರೋಶ, ರಾಜೀನಾಮೆ ನೀಡಲು ಮುಂದಾಗುವುದು ಇವೆಲ್ಲವೂ ಯಾವುದೇ ಸರಕಾರಕ್ಕೆ ಶೋಭೆ ತರುವ ವಿಷಯವಲ್ಲ. ಪಕ್ಷದ ಹಿರಿಯರು ಸಮಸ್ಯೆ ಬಗೆಹರಿಸಿ ಸುಸೂತ್ರವಾಗಿ ಆಡಳಿತ ಯಂತ್ರ ನಡೆಯುವಂತೆ ನೋಡಿಕೊಳ್ಳಬೇಕು.

ವಿಧಾನಸಭೆ ಚುನಾವಣೆಗೆ 21 ತಿಂಗಳು ಬಾಕಿ ಇದ್ದು ಕಳೆದ ಎರಡು ವರ್ಷಗಳಲ್ಲಿ ಕೊರೊನಾದಿಂದ ಉಂಟಾಗಿರುವ  ಆರ್ಥಿಕ ಸಂಕಷ್ಟ ನಿವಾರಣೆ ಮಾಡಿ ಬಜೆಟ್‌ ಯೋಜನೆಗಳ ಅನುಷ್ಠಾನಕ್ಕೆ ಗಮನಹರಿಸಬೇಕು.  ಇಲ್ಲವಾದರೆ  ಈ ಸರಕಾರವು ಎಷ್ಟು ದಿನವೋ ಎಂಬ ತೂಗುಗತ್ತಿ ನೇತಾಡುವಂತಾದರೆ ಅಭಿವೃದ್ಧಿ ಮರೀಚಿಕೆಯಾಗುತ್ತದೆ.

ಇದಷ್ಟೇ ಅಲ್ಲ, ಸದ್ಯ ರಾಜ್ಯ ಕೊರೊನಾ ಮೂರನೇ ಅಲೆಯ ಅಪಾಯ ಎದುರಿಸುತ್ತಿದೆ. ಇದಕ್ಕೆ ಈಗಿನಿಂದಲೇ ಸಜ್ಜಾಗಬೇಕಿದೆ. ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಎರಡನೇ ಅಲೆಯಲ್ಲಿ ಆದ ಆಪಾಯವೇ ಮರುಕಳಿಸುವ ಸಾಧ್ಯತೆಯೂ ಇದೆ. ಹಾಗೆಯೇ ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ತಲೆದೋರಿತ್ತು. ಈಗಷ್ಟೇ ಅಲ್ಲಿನ ಜನ ಚೇತರಿಸಿಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ರಾಜಕೀಯ ಮೇಲಾಟಗಳು ನಡೆದು, ಸರಕಾರವೇ ಅಪಾಯದಲ್ಲಿದೆ ಎಂಬ ಭಾವನೆ ಬರಬಾರದು. ಇದಕ್ಕೆ ಸರಕಾರವೂ ಆಸ್ಪದ ಕೊಡಬಾರದು.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.