ಕರಾವಳಿಯಲ್ಲಿ ಭಯೋತ್ಪಾದನೆ ನಂಟು: ಎನ್‌ಐಎ ಘಟಕ ಬೇಡಿಕೆಗೆ ಇನ್ನಷ್ಟು ಬಲ


Team Udayavani, Aug 12, 2021, 9:00 AM IST

ಕರಾವಳಿಯಲ್ಲಿ  ಭಯೋತ್ಪಾದನೆ ನಂಟು: ಎನ್‌ಐಎ ಘಟಕ ಬೇಡಿಕೆಗೆ ಇನ್ನಷ್ಟು ಬಲ

ಮಂಗಳೂರು: ಭಯೋತ್ಪಾದಕ ಸಂಘಟನೆ ಐಸಿಸ್‌ನೊಂದಿಗೆ ನಂಟು ಆರೋಪದಲ್ಲಿ ಉಳ್ಳಾಲ ಹಾಗೂ ಭಟ್ಕಳದಲ್ಲಿ ಇಬ್ಬರನ್ನು ಬಂಧಿಸುವುದರೊಂದಿಗೆ ಕರಾವಳಿ ಉಗ್ರ ಚಟುವಟಿಕೆ ಸಂಬಂಧ ಮತ್ತೂಮ್ಮೆ ಸುದ್ದಿಯಲ್ಲಿದೆ. ಇದರೊಂದಿಗೆ ಇಲ್ಲಿ ಎನ್‌ಐಎ ಘಟಕ ಸ್ಥಾಪನೆ ಕುರಿತು ಕಳೆದ ಕೆಲವು ವರ್ಷಗಳಿಂದ ಕೇಳಿಬರುತ್ತಿರುವ ಬೇಡಿಕೆಗೆ ಮತ್ತಷ್ಟು  ಬಲ ಬಂದಿದೆ.

ಭದ್ರತೆ ದೃಷ್ಠಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲ್ಪಟ್ಟಿರುವ  ಕರಾವಳಿಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಭಯೋತ್ಪಾದಕ ಸಂಘಟನೆಗಳ ನಂಟು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸಂಘಟನೆ ಗಳು ಸ್ಲೀಪರ್‌ ಸೆಲ್‌ಗ‌ಳ ಮೂಲಕ  ಕಾರ್ಯಚಟುವಟಿಕೆ ಗಳನ್ನು ನಡೆಸುತ್ತಿರುವುದು ರಾಷ್ಟ್ರೀಯ ತನಿಖಾ ಸಂಸ್ಥೆ ಗಳ ತನಿಖೆಯಿಂದ  ಬಹಿರಂಗಗೊಂಡಿದೆ. ಇದಲ್ಲದೆ ಕರಾವಳಿಯಲ್ಲಿ ಅಗಾಗ್ಗೆ ರಿಂಗಣಿಸುತ್ತಿರುವ  ಸ್ಯಾಟ್‌ಲೆçಟ್‌ ಕರೆಗಳು ಕೂಡ ತನಿಖಾ ತಂಡಗಳಿಗೆ ಸವಾಲು ಆಗಿ ಪರಿಣಮಿಸಿವೆ. ಈ ಹಿನ್ನಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಷ್ಟ್ರೀಯ ತನಿಖಾ ದಳದ ಕಚೇರಿಯನ್ನು ಮಂಗಳೂರಿನಲ್ಲಿ ತೆರೆಯಬೇಕೆಂಬ ಬೇಡಿಕೆಯನ್ನು  ಕೇಂದ್ರ ಸರಕಾರಕ್ಕೆ  ಮಾಡಲಾಗಿತ್ತು.

ಭಯೋತ್ಪಾದಕ ಸಂಘಟನೆಗಳ ನಂಟಿನ ಜಾಡು :

ಕರಾವಳಿಯಲ್ಲಿ ಭಯೋತ್ಪಾದಕ ಸಂಘಟನೆಗಳ ಸ್ಲೀಪರ್‌ ಸೆಲ್‌ಗ‌ಳು 2003ರಿಂದಲೇ ಸಕ್ರಿಯವಾಗಿರುವುದು 2008ರಲ್ಲಿ ಇಂಡಿಯನ್‌ ಮುಜಾಹಿದ್ದೀನ್‌ನ ಇಬ್ಬರು ಮುಂಚೂಣಿಯ ನಾಯಕರ ಬಂಧನದ ವೇಳೆ ಬೆಳಕಿಗೆ ಬಂದಿತ್ತು. 2007ರ ಹೈದರಾಬಾದ್‌ ಸ್ಫೋಟಕ್ಕೆ ಸಂಬಂಧಿಸಿ 2008ರಲ್ಲಿ ಬಂಧನಕ್ಕೊಳಗಾದ ಇಂಡಿಯನ್‌ ಮುಜಾಹಿದ್ದೀನ್‌ ಸಂಘಟನೆಯ ಅಕ್ಬರ್‌ ಇಸ್ಮಾಯಿಲ್‌ ವಿಚಾರಣೆ ಸಂದರ್ಭ ರಿಯಾಜ್‌ ಭಟ್ಕಳ ಮತ್ತು ಯಾಸಿನ್‌ ಭಟ್ಕಳ ಅವರ ಹೆಸರನ್ನು ಬಹಿರಂಗಪಡಿಸುವುದರೊಂದಿಗೆ ಕರಾವಳಿಯಲ್ಲಿ  ಭಯೋತ್ಪಾದಕ ಚಟುವಟಿಕೆಗಳ ನಂಟು ಮೊದಲಾಗಿ ಬಹಿರಂಗಗೊಂಡಿತ್ತು. ಮುಂಬಯಿ ಪೊಲೀಸರು 2008ರ ಅ. 3ರಂದು ಉಳ್ಳಾಲ ಸಹಿತ 4 ಕಡೆ ದಾಳಿ ನಡೆಸಿ ಇಂಡಿಯನ್‌ ಮುಜಾಹಿದ್ದೀನ್‌ನ ನೆಲೆಗಳನ್ನು  ಪತ್ತೆಹಚ್ಚಿದ್ದರು.

ಯಾಸಿನ್‌  ಭಟ್ಕಳ ಮತ್ತು ಅಸಾದುಲ್ಲಾ  ಅಖ್ತರ್‌ ಮಂಗಳೂರಿನಲ್ಲಿ ಉಳಿದುಕೊಂಡು  ತಮ್ಮ ಕಾರ್ಯಾಚರಣೆ ನಡೆಸಿರುವುದು ಹೈದರಾಬಾದ್‌ ಮತ್ತು ದೇಶದ ಇತರ ಕಡೆ ನಡೆದ ಸ್ಫೋಟಗಳಿಗೆ ಇಲ್ಲಿಂದಲೇ ಸ್ಫೋಟಕಗಳು ರವಾನೆ ಮಾಡಿರುವುದು ಎನ್‌ಐಎ ತನಿಖೆಯಿಂದ ಬಹಿರಂಗಗೊಂಡಿತ್ತು. ಅನಂತರ ವಿವಿಧ ಸಂಘಟನೆಗಳ ಜತೆ ನಂಟುಹೊಂದಿರುವ ಕಾರಣಕ್ಕೆ ಕೆಲವು ಮಂದಿಯನ್ನು ಬಂಧಿಸಲಾಗಿತ್ತು. ಇದೀಗ 2021ರ ಆಗಸ್ಟ್‌ನಲ್ಲಿ ಐಸಿಸ್‌ನೊಂದಿಗೆ ನಂಟು ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು  ಒಟ್ಟಾರೆಯಾಗಿ ಕರಾವಳಿಯಲ್ಲಿ  ಭಯೋತ್ಪಾದಕ ಚಟುವಟಿಕೆಗಳ ನಂಟು ದಿನದಿಂದ ದಿನಕ್ಕೆ  ವಿಸ್ತರಿಸುತ್ತಿರುವುದು ಕಂಡುಬಂದಿದೆ.

ದೊರೆಯದ ಸ್ಪಂದನೆ :

ಬಿ.ಎಸ್‌. ಯಡಿಯೂರಪ್ಪ ಅವರು 2017ರಲ್ಲಿ ಮಂಗಳೂರಿಗೆ ಬಂದ ವೇಳೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಕೇಂದ್ರಕ್ಕೆ ಒತ್ತಡ ಹೇರಿ ಮಂಗಳೂರಿನಲ್ಲಿ ಕೇಂದ್ರೀಯ ತನಿಖಾ ದಳ ಕಚೇರಿ ಸ್ಥಾಪಿಸಲಾಗುವುದೆಂಬ ಭರವಸೆ ನೀಡಿದ್ದರು. ಸಂಸದೆ ಶೋಭಾ ಕರಂದ್ಲಾಜೆ ಅವರು ಈ ಬಗ್ಗೆ ಅಂದಿನ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಿದ್ದರು. ಮಾತ್ರವಲ್ಲದೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದರಾದ ನಳಿನ್‌ ಕುಮಾರ್‌ ಕಟೀಲು ಮತ್ತು ಶೋಭಾ ಕರಂದ್ಲಾಜೆ ಅವರನ್ನೊಳಗೊಂಡ ನಿಯೋಗವು ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ಎನ್‌ಐಎ ಕಚೇರಿ :

ಎನ್‌ಐಎ ಸಂಸ್ಥೆ ಯಾವುದೇ ರಾಜ್ಯಗಳಲ್ಲಿ ಭಯೋತ್ಪಾದಕ ಕೃತ್ಯಗಳ ಕುರಿತು ತನಿಖೆ ಮಾಡುವ ಮತ್ತು ಕ್ರಮ ಜರುಗಿಸುವ ಅಧಿಕಾರವನ್ನು ಹೊಂದಿದೆ. ಪ್ರಸ್ತುತ ಎನ್‌ಐಎ ಕಚೇರಿಗಳು ಹೈದರಾಬಾದ್‌, ಗುವಾಹಾಟಿ, ಕೊಚ್ಚಿ, ಲಕ್ನೋ, ಮುಂಬಯಿ, ಕೋಲ್ಕತ್ತಾ, ರಾಯಪುರ, ಜಮ್ಮುವಿನಲ್ಲಿದೆ. ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳ ನಂಟು ಕೇಳಿಬಂದಾಗ ಎನ್‌ಐಎ ತಂಡ ಹಲವಾರು ಬಾರಿ ಮಂಗಳೂರಿಗೆ ಆಗಮಿಸಿದೆ. ಮಂಗಳೂರು, ಕಾಸರಗೋಡಿನಿಂದ  ಉತ್ತರಕನ್ನಡ, ಕೊಡಗು ಜಿಲ್ಲೆಗಳು ಭಯೋತ್ಪಾದಕ ಚಟುವಟಿಕೆಗಳ ನಂಟು ಕುರಿತು ಮಹತ್ವವನ್ನು  ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ  ವಾಯು, ಜಲ, ರಸ್ತೆ ಸಾರಿಗೆಗಳು ಹಾಗೂ ಮೂಲಸೌಕರ್ಯಗಳನ್ನು ಹೊಂದಿರುವ  ಮಂಗಳೂರು ಕೇಂದ್ರವಾಗಿಟ್ಟು  ಎನ್‌ಐಎ ಕಚೇರಿಯನ್ನು  ಸ್ಥಾಪಿಸಬಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪ್ರಸ್ತುತ ಎನ್‌ಐಎ ಕ್ಯಾಂಪ್‌ ಅಫೀಸ್‌ ಬೆಂಗಳೂರಿನಲ್ಲಿದೆ.

ಗೃಹಸಚಿವರಿಗೆ ಮನವಿ ಸಲ್ಲಿಕೆ :

ಕರಾವಳಿಯಲ್ಲಿ  ಭಯೋತ್ಪಾದಕ ಸಂಘಟನೆಗಳ ನಂಟು ಹಿನ್ನಲೆಯಲ್ಲಿ  ಮಂಗಳೂರಿನಲ್ಲಿ ಎನ್‌ಐಎ ಕಚೇರಿಯನ್ನು ತೆರೆಯಬೇಕೆಂದು ಈ ಹಿಂದೆಯೂ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಇದೀಗ ಮತ್ತೇ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದು  ಆಗ್ರಹಿಸಿದ್ದು ಇದು ಕಾರ್ಯರೂಪಕ್ಕೆ ಬರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.ನಳಿನ್‌ ಕುಮಾರ್‌ ಕಟೀಲು, ಸಂಸದರು ದ.ಕ. 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.