ಆದಂ ದೇಸೂರ ನಿಧನದಿಂದ ತೆರವಾದ ಸ್ಥಾನಕ್ಕೆ ಸೆ.3 ರಂದು ಉಪ ಚುನುವಾಣೆ
Team Udayavani, Aug 12, 2021, 7:43 PM IST
ದಾಂಡೇಲಿ : ರಾಜ್ಯದ 12 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯ ಪೈಕಿ ದಾಂಡೇಲಿ ನಗರ ಸಭೆಯ ಹಿಂದುಳಿದ ವರ್ಗ-ಅ ವರ್ಗಕ್ಕೆ ಮೀಸಲಾಗಿರುವ ವಾರ್ಡ್ 11 ಕ್ಕೂ ಉಪ ಚುನಾವಣೆಯ ನಡೆಯಲಿದೆ.
ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಹಾಗೂ ವಾರ್ಡ್ 11 ರಲ್ಲಿ ನಗರ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಆದಂ ದೇಸೂರರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಸೆ. 3 ರಂದು ಚುನಾವಣೆ ನಡೆಯಲಿದ್ದು, ಸೆ. 6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಗೋವಾ – ಬೆಳಗಾವಿ ಗಡಿಯಲ್ಲಿ ಹೆಚ್ಚಿದ ತಪಾಸಣೆ : ತೊಂದರೆ ಅನುಭವಿಸುವ ವ್ಯಾಪಾರಸ್ಥರು
ಆ.23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆದುಕೊಳ್ಳಲು ಆ.26 ಕೊನೆಯ ದಿನವಾಗಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.