ಮುಂಬೈನಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿಗೆ ಮೊದಲ ಬಲಿ..!
Team Udayavani, Aug 13, 2021, 10:50 AM IST
ಮಹಾರಾಷ್ಟ್ರ : ಸಂಭಾವ್ಯ ಮೂರನೇ ಅಲೆ ಹಾಗೂ ಕೋವಿಡ್ ಸೋಂಕು ದಿನ ನಿತ್ಯ ಹಾವು ಏಣಿ ಆಟ ಆಡುತ್ತಿರುವ ನಡುವೆ ಮುಂಬೈನಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ಸೋಂಕಿಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಲಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿ ಎಮ್ ಸಿ ), ಕಳೆದ ತಿಂಗಳು ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿಗೆ ಒಳಗಾಗಿದ್ದ 63 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
63 ವರ್ಷದ ಮಹಿಳೆ ಜುಲೈ 21 ರಂದು ಕೋವಿಡ್ 19 ಪಾಸಿಟಿವ್ ಗೆ ಒಳಗಾಗಿದ್ದರು. ಜುಲೈ 27 ರಂದು ಸೋಂಕಿಗೆ ಬಲಿಯಾಗಿದ್ದರು.
ಇದನ್ನೂ ಓದಿ : ಪ್ರತೀಕಾರ: ಹಾವು ಕಚ್ಚಿದ ಕೋಪಕ್ಕೆ ಹಾವನ್ನೇ ಕಚ್ಚಿ ಕೊಂದು ಹಾಕಿದ ಈ ವ್ಯಕ್ತಿ!
ಸೋಂಕಿನಿಂದ ಮೃತಪಟ್ಟ ಮಹಿಳೆಗೆ ಕೋವಿಡ್ ಸೋಂಕಿನ ಲಸಿಕೆಯ ಎರಡೂ ಡೋಸ್ ಗಳನ್ನು ನೀಡಲಾಗಿತ್ತು. ಯಾವುದೇ ಟ್ರಾವೆಲಿಂಗ್ ಹಿಸ್ಟರಿ ಮಹಿಳೆಗೆ ಇಲ್ಲ. ಆದಾಗ್ಯೂ, ಮಹಿಳೆ ಕೆವು ವರ್ಷಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆಯ ಜೀನೋಮ್ ಸೀಕ್ವೆನ್ಸಿಂಗ್ ವರದಿಯನ್ನು ಇತ್ತೀಚೆಗೆ ಪಡೆದಿತ್ತು, ವರದಿಯ ಪ್ರಕಾರ, ಮೃತ ಮಹಿಳೆ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ಸೋಂಕಿಗೆ ಒಳಗಾಗಿದ್ದರು ಎಂದು ಸೂಚಿಸಿದೆ ಎಂದು ಬಿ ಎಂ ಸಿ ತಿಳಿಸಿದೆ.
ಏತನ್ಮಧ್ಯೆ, ಆಕೆಯ ಕುಟುಂಬದ ಆರು ಮಂದಿ ಕೂಡ ಕೋವಿಡ್ ಸೋಂಕಿಗೆ ಒಳಗಾಇದ್ದರು. ಆ ಪೈಕಿ ಇನ್ನೊಬ್ಬರು ಕೂಡ ಡೆಲ್ಟಾ ಪ್ಲಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನುಳಿದ ನಾಲ್ವರ ಜೀನೋಮ್ ಸೀಕ್ವೆನ್ಸಿಂಗ್ ಇನ್ನಷ್ಟೇ ಬರಬೇಕಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಆಗಸ್ಟ್ ಆಸೆ ಬಿಟ್ಟಾಕಿ.. ಸೆಪ್ಟೆಂಬರ್ವರೆಗೆ ನಿಮ್ಮಾಸೆ ಕಟ್ಟಾಕಿ…: ಮುಂದೈತೆ ಸಿನಿಹಬ್ಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.