ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ

Team Udayavani, Aug 14, 2021, 6:51 AM IST

ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ

ಕುಂದಾಪುರ/ಉಡುಪಿ: ಕೋವಿಡ್‌ ಕಾರಣದಿಂದ ಭಾಗಶಃ ಸಂಚಾರ ಮೊಟಕುಗೊಳಿಸಿದ್ದ ಬೆಂಗಳೂರು-ಕಾರವಾರ (06211/12) ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್‌ ಕೋಚಿ ನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೇ ತಿಳಿಸಿದೆ.  ಇದಕ್ಕೆ ಕೊಂಕಣ್‌ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣ ಸಮಿತಿ, ಪ್ರಯಾಣಿಕರ ಒತ್ತಾಯ, ಹೋರಾಟ ಫ‌ಲಪ್ರದವಾಗಿದೆ.

ಕೊರೊನಾ ಕಾರಣದಿಂದ ಯಶವಂತಪುರ – ಕಾರವಾರ ಹಗಲು ರೈಲು ಸ್ಥಗಿತಗೊಂಡ ಬಳಿಕ ಅದೇ ಸಮಯದಲ್ಲಿ ವಿಸ್ಟಾಡೋಮ್‌ ಪ್ರವಾಸಿ ಬೋಗಿಯಿರುವ ರೈಲನ್ನು ಯಶವಂತಪುರದಿಂದ ಮಂಗಳೂರು ತನಕ ಓಡಿಸಲಾಗುತ್ತಿತ್ತು. ಇದರಿಂದ ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ನಿರಾಸೆಯಾಗಿತ್ತು.

ಈ ಸಂಬಂಧ ಕಾರವಾರದವರೆಗೂ ಈ ರೈಲನ್ನು  ವಿಸ್ತರಿಸಬೇಕೆಂದು ಕುಂದಾಪುರ, ಉತ್ತರ ಕನ್ನಡ ರೈಲ್ವೇ ಪ್ರಯಾಣಿಕರ ಹಿತರಕ್ಷಣ ಸಮಿತಿ, ಉತ್ತರ ಕನ್ನಡ ರೈಲ್ವೇ ಸಮಿತಿ, ರೈಲು ಪ್ರಯಾಣಿಕರು ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.

ಈ ನಿಟ್ಟಿನಲ್ಲಿ ತತ್‌ಕ್ಷಣ ಕಾರ್ಯ ಪ್ರವೃತ್ತರಾದ ಶೋಭಾ ಕರಂದ್ಲಾಜೆಯವರು, ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಕಾರವಾರ-ಬೆಂಗಳೂರು ಹಗಲು ರೈಲನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಚಿವರು ಸ್ಪಂದಿಸಿ ವಿಸ್ಟಾಡೋಮ್‌ ಕೋಚ್‌ ಸಹಿತ ರೈಲು ಆರಂಭಿಸಲು ರೈಲ್ವೇ ಇಲಾಖೆಗೆ  ಸೂಚಿಸಿದರು. ಈ ಸಂಬಂಧ “ಉದಯವಾಣಿ’ಯು ಜು. 13ರಂದು ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ಜನಪ್ರತಿನಿಧಿಗಳ ಸಹಕಾರ :

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್‌ ಹೆಗಡೆ, ಶಾಸಕರಾದ ಕುಂದಾಪುರದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಮಟಾದ ದಿನಕರ್‌ ಶೆಟ್ಟಿ ಅವರ ಸಹಕಾರ ಮತ್ತು ನಮ್ಮ ಹೋರಾಟದಿಂದ ವಿಸ್ಟಾಡೋಮ್‌ ರೈಲು ಕಾರವಾರದವರೆಗೆ ವಿಸ್ತರಿಸಲು ಸಾಧ್ಯವಾಗಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ ತಿಳಿಸಿದ್ದಾರೆ.

ಆ.16ಕ್ಕೆ ರೈಲು ಆಗಮನ :

ವಿಸ್ಟಾಡೋಮ್‌ ರೈಲು ಉಡುಪಿ, ಕುಂದಾಪುರಕ್ಕೆ ಆ. 16ರಂದು ಬರಲಿದ್ದು, ಆ ದಿನ ಸಂಜೆ ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮವಿದೆ. ಉಡುಪಿ, ಕುಂದಾಪುರ, ಬೈಂದೂರು, ಕಾರವಾರದವರೆಗೆ ಅತ್ಯಾಧುನಿಕ ಸೌಲಭ್ಯಗಳಿರುವ ಈ ಬೋಗಿಗಳಲ್ಲಿ ಪ್ರಯಾಣಿಸಿದರೆ, ಪಂಚಗಂಗಾವಳಿ ನದಿ, ಗೋಕರ್ಣ, ಮುಡೇìಶ್ವರ, ಕಡಲ ಕಿನಾರೆ, ಒತ್ತಿನೆಣೆ ಗುಡ್ಡ ಸಹಿತ ಇನ್ನಿತರ ಸಹಜ ಸೌಂದರ್ಯದ ಪ್ರಾಕೃತಿಕ ಸೊಬಗನ್ನು ಸವಿಯುವ ಅವಕಾಶ ಪ್ರಯಾಣಿಕರಿಗೆ ಸಿಗಲಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.