ಬಾರದ ಮಳೆ; ಮುದುಡಿದ ಬೆಳೆ; ಸರ್ವೇ ಮಾಡಿ ಪರಿಹಾರ ನೀಡಿ

ಔಷಧ, ಕೂಲಿ ಸೇರಿ ಪ್ರತಿ ಎಕರೆಗೆ ಅಂದಾಜು 15 ರಿಂದ 20 ಸಾವಿರ ರೂ. ಖರ್ಚು ಮಾಡಿದ್ದೇವೆ.

Team Udayavani, Aug 14, 2021, 5:59 PM IST

ಬಾರದ ಮಳೆ; ಮುದುಡಿದ ಬೆಳೆ; ಸರ್ವೇ ಮಾಡಿ ಪರಿಹಾರ ನೀಡಿ

ಕಮಲನಗರ: ಈ ಮೊದಲು ಅತಿವೃಷ್ಟಿ-ಅನಾವೃಷ್ಟಿ ಎರಡನ್ನೂ ರೈತ ಸಮುದಾಯ ಅಕ್ಷರಶಃ ನಲುಗಿತ್ತು. ಆದರೆ ಇದೀಗ ತಾಲೂಕಿನಾದ್ಯಂತ ಕಳೆದ ಮೂರ್‍ನಾಲ್ಕು ವಾರಗಳಿಂದ ಮಳೆ ಬಾರದಿರುವುದು ರೈತರನ್ನು ಚಿಂತೆಗೀಡು ಮಾಡಿದ್ದು, ಚೆನ್ನಾಗಿ ಬೆಳೆದಿದ್ದ ಬೆಳೆಗಳೆಲ್ಲ ಕಳೆ ಕಳೆದುಕೊಂಡು ಒಣಗುತ್ತಿವೆ. ಹೀಗಾಗಿ ರೈತರು ಮತ್ತೆ ಆಗಸದತ್ತ ಮುಖ ಮಾಡಿ ಮೇಘರಾಜನಿಗಾಗಿ ಕಾಯುತ್ತಿದ್ದಾರೆ.

ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಸುರಿದ ಕಾರಣ ರೈತರ ಮೊಗದಲ್ಲಿ ಸಂತಸ ಮೂಡಿತ್ತು. ಉತ್ತಮ ಮಳೆ ಬಿದ್ದಿರುವುದರಿಂದ ರೈತರು ಬಿತ್ತನೆ ಮಾಡಿ, ಬೆಳೆದ ಬೆಳೆಗೆ ಔಷಧ ಸಿಂಪಡಿಸಿ ಉತ್ತಮ ಇಳುವರಿ-ಉತ್ಪನ್ನದ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಮಳೆ ಕೈಕೊಟ್ಟಿದ್ದು, ಈ ಆಸೆಗೆ ತಣ್ಣೀರೆರಚಿದಂತಾಗಿದೆ.

ಮುಂಗಾರು ಹಂಗಾಮಿನ ಸೋಯಾ, ತೊಗರಿ, ಹೆಸರು, ಉದ್ದು ಸೇರಿದಂತೆ ಎಲ್ಲ ಬೆಳೆಗಳು ಚೆನ್ನಾಗಿ ಬೆಳೆದಿವೆ. ಈಗ ಬಹುತೇಕ ಬೆಳೆಗಳು ಹೂ ಬಿಡುವ ಹಾಗೂ ಕಾಳು ಕಟ್ಟುವ ಹಂತದಲ್ಲಿದ್ದು, ಮಳೆ ಅವಶ್ಯಕತೆ ಇದೆ. ಒಂದು ವೇಳೆ ಮಳೆ ಬಾರದೆ ಇದ್ದರೆ ಬೆಳೆಗಳು ಸಂಪೂರ್ಣ ಬಾಡುವ ಮೂಲಕ ನೆಲಕಚ್ಚುವ ಆತಂಕ ರೈತರಲ್ಲಿ ಮನೆ ಮಾಡಿದೆ.

ಬಾಡಿವೆ ಬೆಳೆಗಳು: ಒಂದು ತಿಂಗಳಿಂದ ಬಾರದ ಮಳೆಗೆ ಸೋಯಾ, ತೊಗರಿ ಸೇರಿದಂತೆ ಮುಂಗಾರು ಹಂಗಾಮಿನ ಬೆಳೆಗಳು ಬಾಡುತ್ತಿವೆ. ತಕ್ಷಣ ಮಳೆ ಸುರಿಯದಿದ್ದರೆ ಬೆಳೆಗಳು ಸಂಪೂರ್ಣ ಒಣಗಿ ಹೋಗುವ ಭಯ ರೈತರನ್ನು ಅಕ್ಷರಶಃ ಚಿಂತೆಯ ಕಡಲಲ್ಲಿ ಮುಳುಗಿಸಿದೆ.

ಈಗಾಗಲೇ ಬೀಜ, ಗೊಬ್ಬರ, ಔಷಧ, ಕೂಲಿ ಸೇರಿ ಪ್ರತಿ ಎಕರೆಗೆ ಅಂದಾಜು 15 ರಿಂದ 20 ಸಾವಿರ ರೂ. ಖರ್ಚು ಮಾಡಿದ್ದೇವೆ. ಆದರೆ ಮಳೆ ಅಭಾವದಿಂದ ರೈತರ ನಿರೀಕ್ಷೆಗಳೆಲ್ಲ ತಲೆ ಕೆಳಗಾಗಿವೆ. ನೀರಿನ ಕೊರೆತೆಯಿಂದ ಬೆಳೆಗಳು ಬಾಡುತ್ತಿದ್ದು, ಹೊಲದಲ್ಲಿನ ಬೆಳೆ ನೋಡಲು ಮನಸ್ಸೇ ಆಗುತ್ತಿಲ್ಲ ಎನ್ನುತ್ತಾರೆ ಖತಗಾಂವನ ರೈತ ಚನ್ನಬಸವಾ ಪಾಟೀಲ್‌. ಕೂಡಲೇ ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ರೈತರ ನೆರವಿಗೆ ನಿಲ್ಲಬೇಕೆಂದು ಸೋನಾಳ ರೈತ ಅಂಕೋಶ ಹಣಮಶೆಟ್ಟೆ ಮನವಿ ಮಾಡಿದ್ದಾರೆ.

ತಾಲೂಕಿನಾದ್ಯಂತ ಕಳೆದ ಮೂರ್‍ನಾಲ್ಕು ವಾರಗಳಿಂದ ಮಳೆ ಬಾರದ ಹಿನ್ನೆಲೆಯಲ್ಲಿ ಹೊಲದಲ್ಲಿನ ಬೆಳೆ ಸಂಪೂರ್ಣ ಒಣಗುವ ಹಂತದಲ್ಲಿವೆ. ಕೂಡಲೇ ಅ ಧಿಕಾರಿಗಳು ಸರ್ವೇ ಮಾಡಿ ವಿಮೆ ಕಂಪನಿಯಿಂದ ರೈತರಿಗೆ ಪರಿಹಾರ ಕೊಡಿಸಬೇಕು.

ಶ್ರೀರಂಗ ಪರಿಹಾರ
ಜಿಲ್ಲಾ ಉಪಾಧ್ಯಕ್ಷ, ರೈತ ಮೋರ್ಚಾ

2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ್ದೇವೆ. ಆದರೆ ಕೆಲವರಿಗೆ ವಿಮೆ ಹಣ ಬಂದಿದ್ದು, ಇನ್ನೂ ಕೆಲವರಿಗೆ ಬಂದಿಲ್ಲ. ಅಲ್ಲದೇ ತೊಗರಿ ಬೆಳೆ ವಿಮೆ ಮಾಡಿಸಿದವರಿಗೆ ಕೇವಲ 40-50 ರೂ. ಖಾತೆಗೆ ಜಮೆ ಆಗಿದೆ. ಇದರಿಂದ ವಿಮೆ ಕಂಪನಿ ಮೇಲೆ ನಂಬಿಕೆ ಇಲ್ಲದಂತಾಗಿದೆ. ಕೂಡಲೇ ವಿಮೆ ಕಂಪನಿಯವರು ಸಮೀಕ್ಷೆ ನಡೆಸಿ ರೈತರ ಖಾತೆಗೆ ಬೆಳೆ ಹಾನಿ ಹಣ ಜಮೆ ಮಾಡಬೇಕು.
ಚನ್ನಬಸವಾ ಪಾಟೀಲ್‌
ಖತಗಾಂವ, ರೈತ

*ಮಹಾದೇವ ಬಿರಾದಾರ್‌

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.