ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ
Team Udayavani, Aug 14, 2021, 8:23 PM IST
ಬೆಂಗಳೂರು : ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು, ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು ಎಂದರು.
ಇದನ್ನೂ ಓದಿ :ದಾಂಡೇಲಿಯಲ್ಲಿ ಚರಿತ್ರೆ ನಿರ್ಮಿಸಿದ ಮೆಗಾ ಲೋಕ್ ಅದಾಲತ್
ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತಿಳಿಸಲಾಗಿದೆ ಎಂದರು.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಗಿದ್ದು ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು.
ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ.
ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.