ಸ್ವಾತಂತ್ರ್ಯೋತ್ಸವಕ್ಕೆ ರಾಕಿಂಗ್ ಸ್ಟಾರ್ ಯಶ್ ವಿಶೇಷ ವಿಶ್
Team Udayavani, Aug 15, 2021, 1:51 PM IST
ಬೆಂಗಳೂರು: ಇಂದು ದೇಶಾದ್ಯಂತ ಸ್ವಾತಂತ್ರ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 75 ನೇ ವರ್ಷದ ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳ ವಿನಿಮಯ ಜೋರಾಗಿ ನಡೆಯುತ್ತಿದೆ. ಕ್ರಿಕೆಟಿಗರು, ಸಿನಿಮಾ ತಾರೆಯರು ಸೇರಿದಂತೆ ಎಲ್ಲರೂ ವಿಶ್ ಮಾಡುತ್ತಿದ್ದಾರೆ.
ಕನ್ನಡ ನಟ ರಾಕಿಂಗ್ ಸ್ಟಾರ್ ಯಶ್ ಅವರೂ ತಮ್ಮ ಅಭಿಮಾನಿಗಳಿಗೆ ಹಾಗೂ ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ದಿನದ ಶುಭ ಕೋರಿದ್ದಾರೆ.
ಇಂದು ಟ್ವಿಟರಿನಲ್ಲಿ ಶುಭಕೋರಿರುವ ಯಶ್ , ಮನಸ್ಸಿನಲ್ಲಿ ಸ್ವಾತಂತ್ರ್ಯ, ಪದಗಳಲ್ಲಿ ನಂಬಿಕೆ ನಮ್ಮ ಆತ್ಮಗಳಲ್ಲಿ ಹೆಮ್ಮೆ ಇರಬೇಕು ಎನ್ನು ಸಂದೇಶವನ್ನೂ ನೀಡಿದ್ದಾರೆ.
Freedom in the Mind
Faith in the words
Pride in our SoulsLet’s salute the nation on this Independence Day ??#India pic.twitter.com/RKzpNh4mV8
— Yash (@TheNameIsYash) August 15, 2021
ಇನ್ನು ರಾಕಿಂಗ್ ಸ್ಟಾರ್ ಯಶ್ ರಾಕಿಭಾಯ್ ಆಗಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಬಹುಭಾಷೆಯಲ್ಲಿ ತೆರೆ ಕಾಣಲಿರುವ ಈ ಸಿನಿಮಾ ಈಗಾಗಲೇ ಅಭಿಮಾನಿಗಳ ವರ್ಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.
ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿರುವ ಕೆಜಿಎಫ್ ಸಿನಿಮಾ ದಾಖಲೆ ಬರೆಯುವ ಸಾಧ್ಯತೆ ದಟ್ಟವಾಗಿದೆ. ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಅವರನ್ನು ಕನ್ನಡಕ್ಕೆ ಕರೆ ತಂದಿರುವ ನೀಲ್, ಜಬರ್ದಸ್ತ್ ಸಿನಿಮಾ ರೆಡಿ ಮಾಡಿದ್ದು, ಪ್ರೇಕ್ಷಕರ ಮುಂದೆ ಪ್ರದರ್ಶಿಸಲು ಉತ್ಸುಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.