ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದ ಭಾರತ: ನಳಿನ್‍ ಕುಮಾರ್ ಕಟೀಲ್


Team Udayavani, Aug 15, 2021, 3:26 PM IST

ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದ ಭಾರತ: ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ರಾಷ್ಟ್ರಧ್ವಜಾರೋಹಣ ಮಾಡಿದರು.

ಬಳಿಕ ಮಾತನಾಡಿದ ಅವರು, ದೇಶಾದ್ಯಂತ ನಡೆದ ಜನರ ಹೋರಾಟ, ಅಹಿಂಸಾತ್ಮಕ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಭಾರತವು ಸ್ವಾತಂತ್ರ್ಯ ಪಡೆದಿದೆ. ಅಂಥ ಹಿರಿಯರ ಸ್ಮರಣೆ ಅನಿವಾರ್ಯ ಎಂದರು. ಜಗತ್ತಿನ ಸರ್ವಮಾನ್ಯ- ಶ್ರೇಷ್ಠ ದೇಶ ನಮ್ಮದಾಗಬೇಕು. ವಿಶ್ವಕ್ಕೇ ಮಾರ್ಗದರ್ಶನ ನೀಡುವ ಜಗದ್ವಂದ್ಯ ಭಾರತದ ಎಲ್ಲ ಮಹನೀಯರ ಕನಸು ನನಸು ಮಾಡಲು ನಾವು ಪ್ರಯತ್ನ ಮಾಡಬೇಕು ಎಂದರು.

ಹಿಂದೆ ಭಾರತವನ್ನು ಭಿಕ್ಷುಕರ ರಾಷ್ಟ್ರ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು. ಕಳೆದ ಏಳು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದ ಪರಿಣಾಮವಾಗಿ ಭಾರತವು ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದಿದೆ ಎಂದರು. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಜಗತ್ತಿನ ಅತಿ ಎತ್ತರದ ಸ್ಥಾನಕ್ಕೆ ಏರಿದೆ ಎಂದರು.

ಸ್ವಾತಂತ್ರ್ಯ ಸಂಗ್ರಾಮದ ವೇಳೆ ಇದ್ದ ಕನಸುಗಳು ಈಗ ನನಸಾಗುತ್ತಿವೆ. ವಿಶ್ವ ಯೋಗ ದಿನಾಚರಣೆಗೆ ನರೇಂದ್ರ ಮೋದಿ ಅವರ ನೇತೃತ್ವ ಕಾರಣ. ಕೋವಿಡ್ ಮೊದಲನೇ ಅಲೆಯ ನಂತರ ಸ್ವದೇಶಿ ವ್ಯಾಕ್ಸಿನ್‍ಗಳನ್ನು ಉತ್ಪಾದಿಸಿದ ಭಾರತವು ಹಲವು ಬಡ- ಇನ್ನೂ ವ್ಯಾಕ್ಸಿನ್ ಉತ್ಪಾದಿಸಲು ಸಾಧ್ಯವಾಗದ ಹತ್ತಾರು ದೇಶಗಳಿಗೆ ವ್ಯಾಕ್ಸಿನ್ ಸರಬರಾಜು ಮಾಡಿ ವಿಶ್ವನಾಯಕನಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ದೇಶದ ಸುಮಾರು 54 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಏಳು ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಬಡವರ ಏಳಿಗೆಗೆ ಹಾಕಿಕೊಂಡ ಕಾರ್ಯಕ್ರಮಗಳ ಮೂಲಕ 139 ಕೋಟಿ ಜನರ ಹೃದಯಗಳನ್ನು ಗೆದ್ದಿದೆ ಎಂದರು. ಭಾರತವು ಕೋವಿಡ್ ಮೊದಲನೇ ಅಲೆ, ಎರಡನೇ ಅಲೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಅಲ್ಲದೆ ಕೋವಿಡ್ ನಿಯಂತ್ರಣದಲ್ಲಿದ್ದು ಶಾಲೆ- ಕಾಲೇಜು ತೆರೆಯುವಂಥ ಸ್ಥಿತಿ ಬಂದಿದೆ ಎಂದರು.

ರೈತರನ್ನು ಸ್ವಾವಲಂಬಿ ಮಾಡುವ ನಿಟ್ಟಿನಲ್ಲಿ ಕೇಂದ್ರದ ಬಿಜೆಪಿ ಸರಕಾರವು ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಬಿಮಾ ಯೋಜನೆಗಳನ್ನು ಜಾರಿಗೊಳಿಸಿದೆ. ಈಚೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ಸುಮಾರು 51 ಲಕ್ಷಕ್ಕೂ ಹೆಚ್ಚು ರೈತರಿಗೆ 1,023 ಕೋಟಿ ರೂಪಾಯಿ ನೆರವು ಲಭಿಸಿದೆ ಎಂದು ತಿಳಿಸಿದರು.

ಸಶಕ್ತ, ಸದೃಢ ದೇಶವಾಗಿ ಭಾರತ ಬೆಳೆಯುತ್ತಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡುವ ಕೆಲಸವನ್ನೂ ಕೇಂದ್ರ ಸರಕಾರ ಮಾಡಿದೆ. ಸಂಕಷ್ಟದಲ್ಲಿರುವ ಜನರಿಗೆ ಪರಿಹಾರಧನವನ್ನೂ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ವಿದ್ಯುತ್ ಸಂಪರ್ಕ ಇಲ್ಲದ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿದೆ. ಹಳ್ಳಿ ಹಳ್ಳಿಗೆ ಇಂಟರ್‍ನೆಟ್ ಸಂಪರ್ಕ ಕೊಡಲಾಗಿದೆ. ರೈತರಿಗೆ ಕ್ರೆಡಿಟ್ ಕಾರ್ಡ್, ಸೋಲಾರ್ ಪವರ್ ಸೌಕರ್ಯ ಕೊಡಲಾಗಿದೆ. ಕಿಸಾನ್ ರೈಲುಗಳ ಮೂಲಕ ರೈತರ ಉತ್ಪನ್ನ ಸಾಗಾಟದಿಂದ ರೈತರ ಆದಾಯ ಹೆಚ್ಚಾಗಿದೆ ಎಂದರು.

ಹಳ್ಳಿಗಳ ಜನರಿಗೆ ಶೌಚಾಲಯ, ಮನೆ ನೀಡುವ ಕಾರ್ಯ, ಉಜ್ವಲ ಯೋಜನೆಯಡಿ ಸಿಲಿಂಡರ್ ನೀಡುವ ಕೆಲಸ ಸೇರಿದಂತೆ ಅದ್ಭುತವಾದ ಅಭಿವೃದ್ಧಿ ಕಾರ್ಯಗಳ ಮೂಲಕ ಭಾರತ ಪ್ರಗತಿಪಧದಲ್ಲಿ ಮುನ್ನುಗ್ಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವು ಮನೆ ಮನೆಯ ಸಂಭ್ರಮದ ಹಬ್ಬವಾಗಿದೆ ಎಂದು ನುಡಿದರು. ಭಾರತ ಮಾತೆಯನ್ನು ಪೂಜಿಸುವ ಮತ್ತು ಬಲಿದಾನಗೈದ ಹಿರಿಯರ ಸ್ಮರಣೆಯ ದಿನ ಇದಾಗಲಿ ಎಂದು ಅವರು ಆಶಿಸಿದರು. ಸುಖ, ಶಾಂತಿ, ನೆಮ್ಮದಿಯ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿ ಎಂದು ಅವರು ಹಾರೈಸಿದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.