ದಾವಣಗೆರೆ ಜಿಲ್ಲೆಗೀಗ 24ರ ಸಂಭ್ರಮ


Team Udayavani, Aug 15, 2021, 6:38 PM IST

15-13

„ರಾ. ರವಿಬಾಬು

ದಾವಣಗೆರೆ: ರಾಜ್ಯ ಕಂಡಂತಹ ಖಡಕ್‌ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ರವರ ದಿಟ್ಟ ನಿರ್ಧಾರದ ಫಲವಾಗಿ 1997ರ ಆ. 15 ರಂದು ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಜಿಲ್ಲೆಗೆ ಈಗ 24ರ ಸಂಭ್ರಮ. ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಪ್ರಮುಖ ವ್ಯಾಪಾರಿ, ಶಿಕ್ಷಣ ಕೇಂದ್ರವಾಗಿದ್ದ ದಾವಣಗೆರೆಯನ್ನು ಜಿಲ್ಲೆ ಮಾಡಬೇಕು ಎಂಬ ಪ್ರಬಲ ಕೂಗಿಗೆ ಮಣಿದಿದ್ದ ಜೆ.ಎಚ್‌. ಪಟೇಲ್‌ ನೇತೃತ್ವದ ಸರ್ಕಾರ ದಾವಣಗೆರೆ, ಜಗಳೂರು, ಹೊನ್ನಾಳಿ, ಹರಿಹರ, ಚನ್ನಗಿರಿ, ಹರಿಹರ, ಹರಪನಹಳ್ಳಿ ತಾಲೂಕುಗಳನ್ನೊಳಗೊಂಡ ದಾವಣಗೆರೆ ಜಿಲ್ಲೆ ರಚನೆ ಮಾಡಿತು.

ದಾವಣಗೆರೆ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ಸಾಕಷ್ಟು ಅಭಿವೃದ್ಧಿ ಆಗಿವೆ. 2007 ರಲ್ಲಿ ದಾವಣಗೆರೆ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ. 2009ರಲ್ಲಿ ದಾವಣಗೆರೆ ವಿಶ್ವವಿದ್ಯಾಲಯ, 2015ರಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ, ಅಮೃತ್‌ ಸಿಟಿ ಯೋಜನೆಗೆ ಆಯ್ಕೆಯಾಗಿದೆ. 2020ರಲ್ಲಿ ರೈಲ್ವೆ ನಿಲ್ದಾಣ ಆಧುನೀಕರಣಗೊಂಡಿದೆ. 22 ಕೆರೆ, ಸಾಸ್ವೇಹಳ್ಳಿ, ದೀಟೂರು ಏತ ನೀರಾವರಿ ಯೋಜನೆಗಳ ಜೊತೆಗೆ ಬರಪೀಡಿತ ತಾಲೂಕು ಎಂದೇ ಗುರುತಿಸಲ್ಪಡುವ ಜಗಳೂರು ತಾಲೂಕಿಗೆ ಕುಡಿಯುವ ನೀರು ಒದಗಿಸುವ ಭದ್ರಾ ಮೇಲ್ದಂಡೆ ಯೋಜನೆಯೂ ಪ್ರಾರಂಭವಾಗಿದೆ.

ಹರಿಹರ ಸಮೀಪದಲ್ಲಿ 2 ಜಿ ಎಥೆನಾಲ್‌, ಯೂರಿಯಾ ರಸಗೊಬ್ಬರ ಘಟಕದ ಪ್ರಾರಂಭದ ಮಾತುಗಳು ಕೇಳಿ ಬರುತ್ತಿವೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ದಿವ್ಯಾಂಗನ ಮಕ್ಕಳ ಆರೈಕೆ ಕೇಂದ್ರವೂ ಕಾರ್ಯಾರಂಭ ಮಾಡಿದೆ. ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಗಾಜಿನಮನೆ ದಾವಣಗೆರೆಯಲ್ಲಿ ನಿರ್ಮಾಣವಾಗಿದೆ. ಕೊಂಡಜ್ಜಿಯಲ್ಲಿ ಪೊಲೀಸ್‌ ಪಬ್ಲಿಕ್‌ ವಸತಿ ಶಾಲೆ ಪೂರ್ಣಗೊಂಡಿದೆ. ಈ ನಡುವೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿದ್ದ ಹರಪನಹಳ್ಳಿ ಮತ್ತೆ ಬಳ್ಳಾರಿ ತೆಕ್ಕೆಗೆ ಜಾರಿದೆ. ಹೊನ್ನಾಳಿ ವ್ಯಾಪ್ತಿಯಲ್ಲಿದ್ದ ಹೋಬಳಿ ಕೇಂದ್ರ ನ್ಯಾಮತಿ ನೂತನ ತಾಲೂಕು ಕೇಂದ್ರವಾಗಿದೆ.

ಮಾಯಕೊಂಡದ ತಾಲೂಕು ಕನಸು ಈವರೆಗೆ ನನಸಾಗಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಗಮನ ಸೆಳೆಯುವಂತಹ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅಂತೆಯೇ ಹಲವಾರು ಜ್ವಲಂತ ಸಮಸ್ಯೆಗಳು ಜಿಲ್ಲೆಯಾಗಿ 24 ವರ್ಷದ ನಂತರವೂ ಈ ಕ್ಷಣಕ್ಕೂಜೀವಂತವಾಗಿವೆ. ದಾವಣಗೆರೆಯಲ್ಲಿದ್ದ ಕಾಟನ್‌ಮಿಲ್‌ ಗಳಿಂದ ಮ್ಯಾಂಚೆಸ್ಟರ್‌ ಖ್ಯಾತಿಗೆ ಪಾತ್ರವಾಗಿತ್ತು. ಜವಳಿ ಮಿಲ್‌ ಗಳ ಮುಚ್ಚಿದ ನಂತರ ಈವರೆಗೆ ದಾವಣಗೆರೆ ನಗರ ಮತ್ತು ಜಿಲ್ಲೆಯಲ್ಲಿ ದುಡಿಯುವ ಕೈಗಳಿಗೆ ಭರಪೂರ ಕೆಲಸ ನೀಡುವಂತಹ, ನಿರುದ್ಯೋಗ ಸಮಸ್ಯೆ ಮೂಲೋತ್ಪಾಟನೆ ಮಾಡುವಂತಹ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಕೈಗಾರಿಕೆಗಳ ತರುವತ್ತ ಜನಪ್ರತಿನಿಧಿಗಳು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ ಎಂಬ ನೋವು ಸಾರ್ವಜನಿಕ ವಲಯದಲ್ಲಿದೆ.

“ಮೆಕ್ಕೆಜೋಳ ಕಣಜ’ ಖ್ಯಾತಿಯ ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಸ್ಕರಣ ಘಟಕ ಪ್ರಾರಂಭವಾದಲ್ಲಿ ಬೆಳೆಗಾರರಿಗೆ ಅನುಕೂಲ ಆಗಲಿದೆ. ಸಂಸ್ಕರಣಾ ಘಟಕ ಪ್ರಾರಂಭಿಸಬೇಕು ಎಂಬ ದಶಕಗಳ ಕೂಗಿಗೆ ಈ ಕ್ಷಣಕ್ಕೂ ಸ್ಪಂದನೆ ದೊರೆತಿಲ್ಲ. ಸಂಸ್ಕರಣ ಘಟಕದ ಪ್ರಾರಂಭದತ್ತ ಜನಪ್ರತಿನಿಧಿಗಳು ಗಮನ ಹರಿಸಬೇಕಾಗಿದೆ. ಜಿಲ್ಲೆಯಲ್ಲಿ 60 ಸಾವಿರ ಹೆಕ್ಟೇರ್‌ಗೂ ಅಧಿಕ ಭದ್ರಾ ಅಚ್ಚುಕಟ್ಟಿದೆ.

ಕೊನೆಯ ಭಾಗಕ್ಕೂ ಸಮರ್ಪಕವಾಗಿ ನೀರು ಹರಿದ ಉದಾಹರಣೆ ಇಲ್ಲ. ಈಚೆಗೆ ಕಾಡಾ ಅಧ್ಯಕ್ಷರ ಪ್ರಯತ್ನದ ಫಲವಾಗಿ ಕೆಲವು ಭಾಗಕ್ಕೆ ನೀರು ದೊರೆಯುತ್ತಿದೆ. ಅಚ್ಚುಕಟ್ಟಿನ ತುತ್ತ ತುದಿಗೂ ನೀರು ತಲುಪುವಂತಾಗಬೇಕು. ಅಕ್ರಮ ಪಂಪ್‌ಸೆಟ್‌ಗೆ ಇತಿಶ್ರೀ ಹಾಡಬೇಕು ಎಂಬುದು ರೈತಾಪಿ ವರ್ಗದ ಒತ್ತಾಯ. ಜಿಲ್ಲೆಯಲ್ಲಿ ಕೆಲವಾರು ಏತ ನೀರಾವರಿ ಯೋಜನೆಗಳನ್ನು ರೂಪಿಸಲಾಗಿದೆ. ಮಹತ್ವಾಕಾಂಕ್ಷಿ ಯೋಜನೆಯಾಗಿರುವ 22 ಕೆರೆಗಳ ಏತ ನೀರಾವರಿ ಯೋಜನೆಯ ಮೂಲ ಉದ್ದೇಶವೇ ಈಡೇರಿಲ್ಲ.

ದಶಕ ಕಳೆದರೂ ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿದಿಲ್ಲ. ಸಾಸ್ವೇಹಳ್ಳಿ, ದೀಟೂರು ಏತ ನೀರಾವರಿ ಯೋಜನೆಗಳಿಗೆ ಚುರುಕು ಮುಟ್ಟಿಸಬೇಕಿದೆ. ಹೊನ್ನಾಳಿ ತಾಲೂಕಿನ ಅರಕೆರೆ, ಹರಿಹರ ತಾಲೂಕಿನ ಭೈರನಪಾದ ಏತ ನೀರಾವರಿ ಯೋಜನೆ, ಜಗಳೂರು ತಾಲೂಕಿನ ಸಂತೇಮುದ್ದಾಪುರ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ದೊರೆಯಬೇಕಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ಜಗಳೂರು ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕಿದೆ. ಜಿಲ್ಲೆಯ ಜನರ ಬೇಡಿಕೆ, ಒತ್ತಾಯಕ್ಕೆ ಜನಪ್ರತಿನಿಧಿಗಳು, ಆಡಳಿತ ವರ್ಗ ಸ್ಪಂದಿಸಿದಲ್ಲಿ ದಾವಣಗೆರೆ ಜಿಲ್ಲೆ ತನ್ನ 25ನೇ ವರ್ಷದಲ್ಲಿ ನಿಜವಾಗಿಯೂ ಅಭಿವೃದ್ಧಿಯಲ್ಲಿ ಕರ್ನಾಟಕದ ಕೇಂದ್ರ ಬಿಂದುವಾಗಲಿದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.