ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಗುರುತು ಬಹಿರಂಗ : ಸಚಿವೆ ಶಶಿಕಲಾ ಜೊಲ್ಲೆ ನಡೆ ಅಕ್ಷಮ್ಯ
Team Udayavani, Aug 15, 2021, 9:37 PM IST
ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೋಗೇರಿ ಗ್ರಾಮದಲ್ಲಿ ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಆದರೆ ಮುಜರಾಯಿ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ಸಂತ್ರಸ್ಥರ ಗುರುತು ಬಹಿರಂಗಪಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ.
ಸಂತ್ರಸ್ಥರ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವಾನ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಮಾನವೀಯ ನೆಲೆಯಲ್ಲಿ ಅವರ ಕುಟುಂಬ ಸದಸ್ಯರಿಗೆ ತಾತ್ಕಾಲಿಕ ಪರಿಹಾರ ನೀಡಿರುವುದನ್ನು ಗೌರವಿಸುತ್ತೇನೆ. ಆದರೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿರುವ ವಿಡಿಯೋ, ಆಡಿಯೋ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದು ಸರಿಯಲ್ಲ. ಸಚಿವರು ಹೇಳಿಕೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಹೆಸರನ್ನೂ ಸಹ ಉಲ್ಲೇಖಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯ ಕಂಟೋನ್ಮೆಂಟ್ ನಲ್ಲಿ ಇದೇ ರೀತಿ ಅತ್ಯಾಚಾರಕ್ಕೆ ಒಳಗಾದ ಕುಟುಂಬಕ್ಕೆ ಸಾಂತ್ವಾನ ಹೇಳಿದ ಛಾಯಾಚಿತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಕಾರಣಕ್ಕೆ ಅವರ ಮೇಲೆ ಬಿಜೆಪಿ ನಾಯಕರು ಅನಗತ್ಯವಾಗಿ ಆರೋಪ ಮಾಡಿದರು. ರಾಷ್ಟ್ರೀಯ ಮಕ್ಕಳ ಆಯೋಗ ನೀಡಿದ ಸೂಚನೆ ಅನುಸಾರ ಟ್ವಿಟರ್ ಸಂಸ್ಥೆ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಕಾಂಗ್ರೆಸ್ ನ 500 ನಾಯಕರ ಟ್ವಿಟ್ಟರ್ ಖಾತೆಗಳನ್ನು ಬಂದ್ ಮಾಡಿತ್ತು. ಜಗತ್ತಿನ ಬೇರೆ ಯಾವುದೇ ರಾಷ್ಟ್ರದಲ್ಲೂ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಆದರೆ ಬಿಜೆಪಿ ನಾಯಕರು ಚಿತಾವಣೆ ನಡೆಸಿ ನಮ್ಮ ನಾಯಕರ ಮೇಲೆ ಡಿಜಿಟಲ್ ದಾಳಿ ಮಾಡಿದ್ದು, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಭಾರತ ಪಾಕ್ ಗಡಿಯಲ್ಲೂ ಸ್ವಾಂತಂತ್ರ್ಯೋತ್ಸವದ ಸಂಭ್ರಮ..! ಸೇನೆಯ ಪೌರುಷ ಪ್ರದರ್ಶನ..!
ಆದರೆ ಬಿಜೆಪಿ ಸಚಿವೆ ಶಶಿಕಲಾ ಜೊಲ್ಲೆ ಅವರ ಬಗ್ಗೆ ರಾಷ್ಟ್ರೀಯ ಮಕ್ಕಳ ಆಯೋಗ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಬಹಿರಂಗಪಡಿಸಬೇಕು. ಕುಟುಂಬ ಸದಸ್ಯರನ್ನು ಬಹಿರಂಗವಾಗಿ ಭೇಟಿ ಮಾಡಿ ಎಲ್ಲರ ಸಮ್ಮುಖದಲ್ಲಿ ಮಾಹಿತಿ ಪಡೆದಿರುವುದು ಸರಿಯಲ್ಲ. ಈ ಬೆಳವಣಿಗೆಯಿಂದ ಸಂತ್ರಸ್ಥರ ಕುಟುಂಬ ಸದಸ್ಯರ ಜೀವಕ್ಕೆ ಏನಾದರೂ ಅಪಾಯ ಏದುರಾದರೆ ಯಾರು ಹೊಣೆ. ಈ ಸರಳ ನಿಯಮ ಶಶಿಕಲಾ ಜೊಲ್ಲೆ ಅವರಿಗೆ ಅನ್ವಯವಾಗುವುದಿಲ್ಲವೇ ಎಂದು ರಕ್ಷಾ ರಾಮಯ್ಯ ಪ್ರಶ್ನಿಸಿದ್ದಾರೆ.
ಶಶಿಕಲಾ ಜೊಲ್ಲೆ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಕೆಲಸ ಮಾಡಿದ್ದಾರೆ. ಮಕ್ಕಳ ರಕ್ಷಣಾ ಆಯೋಗ ಸೇರಿದಂತೆ ಹಲವು ಶಾಸನ ಬದ್ಧ ಸಂಸ್ಥೆಗಳ ಮೇಲುಸ್ತುವಾರಿ ವಹಿಸಿದ್ದ ಅವರು ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇವರಿಗೆ ಪೋಸ್ಕೋ ಕಾಯ್ದೆ ಅನ್ವಯವಾಗುವುದಿಲ್ಲವೆ ಎಂದಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವವರು ಸಂತ್ರಸ್ಥರ ಕುಟುಂಬದ ಗುರುತು ಬಹಿರಂಗಪಡಿಸುವುದು ಸರಿಯಲ್ಲ ಎನ್ನುವ ಕನಿಷ್ಠ ಪ್ರಜ್ಞೆಯೂ ಸಚಿವರಿಗಿಲ್ಲ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಘಟನೆ ಬಗ್ಗೆ ಏನು ಹೇಳುತ್ತಾರೆ ಎಂದು ರಕ್ಷಾ ರಾಮಯ್ಯ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.