ಮಾನವೀಯ ಮೌಲ್ಯ ಮರುಸ್ಥಾಪನೆಯೇ ಅಭಿವೃದ್ಧಿಯ ಹಾದಿ!

Team Udayavani, Aug 16, 2021, 7:10 AM IST

ಮಾನವೀಯ ಮೌಲ್ಯ ಮರುಸ್ಥಾಪನೆಯೇ ಅಭಿವೃದ್ಧಿಯ ಹಾದಿ!

ಕಳೆದ 75 ವರ್ಷಗಳನ್ನು ಗಮನಿಸಿದರೆ ಪರಿವರ್ತನೆಗಳು ನಿಧಾನವಾಗಿ ಆರಂಭವಾಗಿ ಈಚೆಗಿನ ದಶಕಗಳಲ್ಲಿ ತೀವ್ರಗತಿ ಪಡೆದಿವೆ. ಬದಲಾವಣೆ ಮುಂದಿನ ದಶಕಗಳಲ್ಲಿ ಇನ್ನೂ ವೇಗವನ್ನು ಗಳಿಸಲಿದೆ ಎನ್ನುವುದು ಶತಸ್ಸಿದ್ಧ. ಸ್ವಾತಂತ್ರ್ಯದ ಶತಮಾನೋತ್ಸವ ಸಮಯಕ್ಕೆ ಭಾರತ ಹೇಗಿರಬೇಕು ಎಂಬ ಹೊಂಗನಸು ಕಾಣುವ ಲೇಖನ ಸರಣಿ ಇದು.

ಅಧಿಕಾರ ಮತ್ತು ಶ್ರೀಮಂತಿಕೆಯನ್ನು ಪೂಜಿಸುವ ಸಮಾಜವನ್ನು ನಾವಿಂದು ಕಾಣುತ್ತಿದ್ದೇವೆ. ಇಂದರಿಂದ ಭ್ರಷ್ಟರು ಮತ್ತು ಭ್ರಷ್ಟ ವ್ಯವಸ್ಥೆಗೆ ಗೌರವ ಹೆಚ್ಚಾಗುತ್ತಿದೆ. ಭ್ರಷ್ಟರನ್ನು ಬಹಿಷ್ಕರಿಸಿ, ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡ ಬೇಕು. ಇದಕ್ಕೆ ಸಾಮಾಜಿಕವಾಗಿ ಮತ್ತು ವೈಯಕ್ತಿಕ ನೆಲೆಗಟ್ಟಿನಲ್ಲಿ ಮೌಲ್ಯಗಳ ಅಳವಡಿಕೆ ಯಾಗಬೇಕು.

ನಮ್ಮ ಹಿರಿಯರು, ಪೂರ್ವಜರು ನೀಡಿ ರುವ ಹಲವಾರು ಮೌಲ್ಯಗಳಲ್ಲಿ ಕನಿಷ್ಠ ಎರಡು ಮೌಲ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ಅಳವಡಿಸುವ ಮೂಲಕ ಹಲವು ರೀತಿಯ ಬದಲಾವಣೆ ತರಲು ಸಾಧ್ಯವಿದೆ. ಒಂದು ತೃಪ್ತಿ, ಇನ್ನೊಂದು ಮಾನವೀಯತೆ.
ಮನುಷ್ಯ ಅಥವಾ ವ್ಯವಸ್ಥೆಯಲ್ಲಿ ತೃಪ್ತಿಯಿದ್ದರೆ ದುರಾಸೆ ಇರುವುದಿಲ್ಲ. ದುರಾಸೆ ಹೆಚ್ಚಾದಂತೆ ಸಮಾಜದಲ್ಲಿ ಶಾಂತಿ ಕಡಿಮೆಯಾಗುತ್ತ ಹೋಗುತ್ತದೆ. ಶಾಂತಿ ಇಲ್ಲದೆ ಇದ್ದಾಗ ಬೇರೆ ಯಾವುದನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಬ್ಬರೂ ದುರಾಸೆ ಇಲ್ಲದ ತೃಪ್ತಿಕರ ಬದುಕು ನಡೆಸಬೇಕು. ಇದಕ್ಕೆ ಮಾನವೀಯತೆ ಆವಶ್ಯಕ. ನಮ್ಮ ಜೀವನ ಪಥದಲ್ಲಿ ಮಾನವೀಯತೆಯನ್ನು ಅಳವಡಿಸಿಕೊಂಡಾಗ ಸಮಾಜದಲ್ಲಿ ಶಾಂತಿ ಸೌಹಾರ್ದ ತಾನಾಗಿಯೇ ಸೃಷ್ಟಿಯಾಗುತ್ತದೆ. ಈ ಮೂಲಕ ಭ್ರಷ್ಟರನ್ನು ಬಹಿಷ್ಕರಿಸುವ ಸಮಾಜ ನಿರ್ಮಾಣ ಸಾಧ್ಯವಿದೆ.

ನಾವೀಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ವನ್ನು ವರ್ಷಪೂರ್ತಿ ಆಚರಿಸಲಿದ್ದೇವೆ.  ಮುಂದಿನ 25 ವರ್ಷಗಳಲ್ಲಿ ಸ್ವಾತಂತ್ರ್ಯದ ಶತ ಮಾನೋ ತ್ಸವವನ್ನು ಆಚರಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಮುಂದಿನ 25 ವರ್ಷಗಳಲ್ಲಿ ಬಹಳಷ್ಟು ಬದಲಾವಣೆಗಳು ಸಾಮಾಜಿಕ ಮತ್ತು ವೈಯಕ್ತಿಕ ನೆಲೆಗಟ್ಟಿನಲ್ಲಿ ಆಗಬೇಕಿವೆ. ಈಗ ಇರುವ ಭ್ರಷ್ಟಾಚಾರ ಮುಂದಿನ 25 ವರ್ಷಗಳಲ್ಲಿ ಶೂನ್ಯಕ್ಕೆ ಇಳಿಯಬೇಕು ಅಥವಾ ಕನಿಷ್ಠ ಮಟ್ಟಕ್ಕೆ ಬರಬೇಕು. ಇದಕ್ಕಾಗಿ ಸಾಮಾಜಿಕ ಬದಲಾವಣೆ ಮತ್ತು ಸಾಮಾಜಿಕ ಮೌಲ್ಯಗಳ ಅನುಷ್ಠಾನ ಆಗಲೇ ಬೇಕು. ತೃಪ್ತಿ ಮತ್ತು ಮಾನವೀಯತೆ ಮನುಷ್ಯರಲ್ಲಿ ಜಾಸ್ತಿಯಾದಾಗ ಮುಂದಿನ 25 ವರ್ಷಗಳಲ್ಲಿ ನಾವಿದನ್ನು ಖಂಡಿತ ಸಾಧಿಸಬಹುದು.

ತೃಪ್ತಿ ಮತ್ತು ಮಾನವೀಯತೆಗಳ ಮರು ಅಳವಡಿಕೆ
ಇವತ್ತಿನ ಪರಿಸ್ಥಿತಿಯಲ್ಲಿ ಭ್ರಷ್ಟಾಚಾರದಿಂದ ದೇಶಕ್ಕೆ ಬಹಳಷ್ಟು ರೀತಿಯ ಕಂಟಕಗಳು ಎದುರಾಗುತ್ತಿರುವುದು ಮಾತ್ರವಲ್ಲದೆ ಅನೇಕ ಸಮಸ್ಯೆಗಳಿಗೂ ಭ್ರಷ್ಟಾಚಾರವೇ ಕಾರಣವಾಗುತ್ತಿದೆ.  ದೇಶದ ಅಭಿವೃದ್ಧಿ ಕಾರ್ಯ ಅಥವಾ ಯೋಜನೆಗೆ ಭಾರತ ಸರಕಾರ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದರಲ್ಲಿ 15 ಪೈಸೆ ಮಾತ್ರ ಯೋಜನೆ ಅಥವಾ ಫಲಾನುಭವಿಗೆ ತಲುಪುತ್ತಿತ್ತು ಎಂದು1985ರಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿಯವರು ಹೇಳುತ್ತಿದ್ದರು. ನಾವೀಗ 2021ರಲ್ಲಿದ್ದೇವೆ. ಆದರೆ ಈ ವ್ಯವಸ್ಥೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗಿಲ್ಲ. ಯೋಜನೆಗೆ ಬಿಡುಗಡೆಯಾಗುವ ಹಣ ಶೇ. 100ರಷ್ಟು ಅದರ ಅನುಷ್ಠಾನಕ್ಕೆ ಉಪಯೋಗ ಆಗುತ್ತಿಲ್ಲ. ಇದರಿಂದಾಗಿ ದೇಶದ ಸಮಗ್ರ ಅಭಿವೃದ್ಧಿಗೆ ಹಲವು ಕಂಟಕ ಎದುರಾಗುತ್ತಿವೆ. ಇದರ ನಿವಾರಣೆ ಯಾವುದೇ ಕಾನೂನಿನಿಂದ ಸಾಧ್ಯವಿಲ್ಲ. ಸಾಮಾಜಿಕ ಮತ್ತು ವೈಯಕ್ತಿಕ ಜೀವನದಲ್ಲಿ ತೃಪ್ತಿ ಮತ್ತು ಮಾನವೀಯ ಮೌಲ್ಯಗಳ ಮರು ಅಳವಡಿಕೆಯಿಂದ ಮಾತ್ರ ಬದಲಾವಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು.

ಈ ಎರಡು ಮೌಲ್ಯಗಳನ್ನು ಸಮಾಜ ಮತ್ತು ವ್ಯಕ್ತಿಯಲ್ಲಿ ಕಾನೂನಿನ ಮೂಲಕ ಅಳವಡಿಸಲು ಸಾಧ್ಯವಿಲ್ಲ. ಬದಲಾಗಿ  ಕೌಟುಂಬಿಕ ಸಂಸ್ಕಾರದಿಂದ ಸಾಧ್ಯವಿದೆ. ವ್ಯಕ್ತಿ ತಾನು ಈ ಮೌಲ್ಯಗಳನ್ನು ಅಳವಡಿಸಿಕೊಂಡು ತನ್ನ ಮಕ್ಕಳಿಗೂ ಅದನ್ನು ಕಲಿಸಬೇಕು. ಹಿಂದೆ ಮನೆಗಳಲ್ಲಿ ಹೆತ್ತವರು, ಕುಟುಂಬದ ಹಿರಿಯರು ಮಕ್ಕಳಿಗೆ ಯಾವ ರೀತಿಯ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಹೇಳುತ್ತಿದ್ದರೋ ಅಂಥ ವ್ಯವಸ್ಥೆ ಪುನರ್‌ನಿರ್ಮಾಣವಾಗಬೇಕು. ಇದು ಒಂದು ಭಾಗವಾದರೆ, ಶಿಕ್ಷಣ ವ್ಯವಸ್ಥೆಯಲ್ಲೂ ಬದಲಾವಣೆ ಆಗಬೇಕು.

ಮುಂದಿನ 25 ವರ್ಷಗಳಲ್ಲಿ ಆಗಬೇಕಿರುವ ಬದಲಾವಣೆಗಳಿಗೆ ಮೌಲ್ಯಗಳ ಅಳವಡಿಕೆಯೇ ಪ್ರಧಾನವಾಗಿರುತ್ತದೆ. ಯಾವುದೇ ಕಾನೂನು ಅಥವಾ ಸರಕಾರದ ನಿಯಮಗಳಿಂದ ಇದರ ಅನುಷ್ಠಾನ ಸಾಧ್ಯವಿಲ್ಲ. ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿ ಮೌಲ್ಯಗಳನ್ನು ಮರುಸ್ಥಾಪಿಸಿ, ಅದನ್ನು ಮಕ್ಕಳಲ್ಲಿ ತುಂಬುವ ಕೆಲಸ ಮಾಡಬೇಕು. ಭ್ರಷ್ಟ ವ್ಯವಸ್ಥೆಯ ನಿರ್ಮೂಲನೆಯಿಂದ ಅಭಿವೃದ್ಧಿ ಹೊಂದಿದ ಸದೃಢ ದೇಶ ನಿರ್ಮಾಣ ಸಾಧ್ಯವಿದೆ. ಇದಕ್ಕೆ ತೃಪ್ತಿ ಮತ್ತು ಮಾನವೀಯತೆ ಎಂಬ ಎರಡು ಮೌಲ್ಯಗಳು ಅತೀ ಅವಶ್ಯ.

- ಎನ್‌. ಸಂತೋಷ್‌ ಹೆಗ್ಡೆ, ನಿವೃತ್ತ ಲೋಕಾಯುಕ್ತರು, ಕರ್ನಾಟಕ

ಟಾಪ್ ನ್ಯೂಸ್

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.