ಆಗಸ್ಟ್ 23ರವರೆಗೆ ಗೋವಾದಲ್ಲಿ ಕರ್ಫ್ಯೂ ಮುಂದುವರಿಕೆ
Team Udayavani, Aug 16, 2021, 5:56 PM IST
ಪಣಜಿ: ಕೋವಿಡ್ ಸೋಂಕು ನಿಯಂತ್ರಣದ ಹಿನ್ನೆಲೆ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಆಗಸ್ಟ್ 23 ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಎರಡನೇಯ ಅಲೆ ಆರಂಭಗೊಂಡ ಸಂದರ್ಭದಲ್ಲಿ ಮೇ 9 ರಂದು ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು, ನಂತರದ ದಿನಗಳಲ್ಲಿ ಹಂತ ಹಂತವಾಗಿ ವಿಸ್ತರಣೆ ಮಾಡಲಾಗುತ್ತಿದೆ. ಇದೀಗ ಮತ್ತೊಂದು ಸಾರಿ ಆಗಸ್ಟ್ 23 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಕರ್ಫ್ಯೂ ಹಿನ್ನೆಲೆ ರಾಜ್ಯದಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳಿಗೂ ನಿರ್ಬಂಧ ಮುಂದುವರೆಯಲಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನ ಕೇವಲ 50 ಜನರ ಉಪಸ್ಥಿತಿಯಲ್ಲಿ ನಡೆಸಲು ಪರವಾನಗಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಕ್ಯಾಸಿನೊ, ಸಿನಿಮಾ ಹಾಲ್, ಕ್ರೂಜ್, ಸ್ಪಾಗಳನ್ನು ಆರಂಭಿಸಲು ಇದುವರೆಗೂ ಅನುಮತಿ ನೀಡಿಲ್ಲ.
ಗೋವಾ ರಾಜ್ಯಕ್ಕೆ ಕೇರಳದಿಂದ ಆಗಮಿಸುವವರಿಗೆ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಖಡ್ಡಾಯವಾಗಿದೆ. ಅಷ್ಟೇ ಅಲ್ಲದೆಯೇ ಇತರೆ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ಎರಡೂ ಲಸಿಕೆ ಪಡೆದಿರಬೇಕು ಅಥವಾ ಕೋವಿಡ್ ಎಂಟಿಜನ್ ನೆಗೆಟಿವ್ ವರದಿ ಹೊಂದಿರಬೇಕು.
ಗೋವಾದಲ್ಲಿ ಸದ್ಯ ಕೋವಿಡ್ ಪಾಜಿಟಿವಿಟಿ ದರ ಶೇ 1.54 ರಷ್ಟಿದೆ. ಸೋಂಕು ಇಳಿಕೆಯಾಗಿದ್ದರೂ ಕೂಡ ರಾಜ್ಯದಲ್ಲಿ ಮತ್ತೆ ಹರಡದಂತೆ ಕೆಲ ನಿರ್ಬಂಧಗಳನ್ನು ಮುಂದುವರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.