ಆಗಸ್ಟ್ 23 ರಿಂದ 9, 10ನೇ ತರಗತಿ ಪ್ರಾರಂಭ : ಅಧಿಕೃತ ಮಾರ್ಗಸೂಚಿ ಬಿಡುಗಡೆ
Team Udayavani, Aug 16, 2021, 7:25 PM IST
ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಬಂದಾಗಿದ್ದ ಶಾಲೆ ಆರಂಭಕ್ಕೆ ಗ್ನಿನ್ ಸಿಗ್ನಲ್ ಸಿಕ್ಕಿದೆ. ಆಗಸ್ಟ್ 23 ರಿಂದ 9, 10ನೇ ತರಗತಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಅಧಿಕೃತ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ.
9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ನಡೆಯುತ್ತವೆ. ಶಾಲೆಗೆ ಹಾಜರಾಗಲು ವಿದ್ಯಾರ್ಥಿಗಳು ಪೋಷಕರಿಂದ ಸಮ್ಮತಿ ಪತ್ರ ಪಡೆಯಬೇಕು ಎಂದು ಸೂಚಿಸಲಾಗಿದೆ.
ಮೊದಲೇ ಹೇಳಿದಂತೆ ಪಾಸಿಟಿವಿಟಿ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಯಲ್ಲಿ ಶಾಲೆಗಳಲ್ಲಿ ಶಾಲೆಗಳು ಆರಂಭವಾಗಲಿದೆ.
ಮಾರ್ಗಸೂಚಿಯಲ್ಲಿರುವ ಅಂಶಗಳೇನು ?
9 ಮತ್ತು 10ನೇ ತರಗತಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿ ಮಾಡಲು ಅನುಮತಿ ನೀಡಲಾಗಿದೆ. ಶಾಲೆಗೆ ಆಗಮಿಸಲು ಪೋಷಕರ ಅನುಮತಿ ಪತ್ರ ಕಡ್ಡಾಯ ಜತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯವಾಗಿದೆ.
ಮನೆಯಿಂದಲೇ ಮಕ್ಕಳು ಕುಡಿಯುವ ನೀರು, ಉಪಹಾರ ತರಬೇಕು ಭೌತಿಕ ತರಗತಿ ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಅಥವಾ ಭೌತಿಕ ಎರಡರಲ್ಲಿ ಒಂದರಲ್ಲಿ ಹಾಜರಾತಿ ಅಗತ್ಯ. ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿ ನಡೆಯಲಿದೆ. ಶನಿವಾರ ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಯಲಿದೆ ಎಂದು ತಿಳಿಸಲಾಗಿದೆ.
* ಶಾಲೆಯನ್ನು ಸಾನಿಟೈಸ್ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
* ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ
* 50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಧರಿಸಬೇಕು
* ಅಡುಗೆ ಮನೆ ಮತ್ತು ದಾಸ್ತಾನು ವಸ್ತುಗಳನ್ನು ಸಂಪೂರ್ಣವಾಗಿ ಕ್ಲೀನ್ ಮಾಡಬೇಕು
* ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
* ಶಾಲೆ ಪ್ರವೇಶ ಮಾರ್ಗದದಲ್ಲಿ ಕನಿಷ್ಠ 3 ರಿಂದ 6 ಅಡಿ ಅಂತರದಲ್ಲಿ ವೃತ್ತ ಹಾಕಬೇಕು
* ಸಾಮಾಜಿಕ ಅಂತರ ಪಾಲಿಸುವ ಪೋಸ್ಟರ್ ಅಳವಡಿಕೆ ಮಾಡಬೇಕು
* ಪ್ರತಿ ದಿನ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಮಾಹಿತಿ ದಾಖಲಿಸಬೇಕು
* ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತ ಕಲಿಕೆಯಾಗಬೇಕು
* ಶಿಕ್ಷಕರು ಕನಿಷ್ಠ ಒಂದು ಸಾರಿಯಾದರೂ ಲಸಿಕೆ ಪಡೆದುಕೊಂಡಿದ್ದಾರೆಯೇ? ಎಂಬುದನ್ನು ತಿಳಿಸಬೇಕು
* ಕೊರೋನಾ ನಿಯಮಗಳು ಪಾಲನೆಯಾಗುತ್ತ ಇದೆಯೇ? ಇಲ್ಲವೇ? ಎಂಬುದರ ಮೇಲ್ವಿಚಾರಣೆ ನೋಡಲ್ ಅಧಿಕಾರಿಯ ಜವಾಬ್ದಾರಿ
* ಎಸ್‌ಡಿಎಂಸಿ ಸಮಿತಿ ಜತೆ ಸಮುದಾಯದ ಸಹಭಾಗಿತ್ವದಲ್ಲಿ ಶಾಲೆ ನಡೆಸಬೇಕು ಎಂಬ ನಿಯಮಗಳನ್ನು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.