3,000 ವೈದ್ಯರು, 7,000 ನರ್ಸುಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ: ಡಾ.ಅಶ್ವತ್ಥನಾರಾಯಣ

Team Udayavani, Aug 16, 2021, 9:37 PM IST

asdcsdv

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.

ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ ವೈದ್ಯರಿದ್ದು, ಉಳಿದ 1,000 ಸಾಮಾನ್ಯ ವೈದ್ಯರಿದ್ದಾರೆ. ಅಲ್ಲದೆ, ಇನ್ನೂ 3,000 ವೈದ್ಯರನ್ನೂ, 7,000 ನರ್ಸುಗಳನ್ನು ಹಾಗೂ ಗ್ರೂಪ್ ಡಿ ವಿಭಾಗದಲ್ಲಿ 7,000 ಸಿಬ್ಬಂದಿಯನ್ನೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ಸೋಮವಾರ ನಡೆದ ಕೋವಿಡ್-19 ಸಂಕಷ್ಟದಲ್ಲಿ ಕೋವಿಡ್‌  ನಿಗ್ರಹ ಪಡೆಯ ಕಾರ್ಯಕರ್ತರಾಗಿ ಕೆಲಸ ಮಾಡಿದ ಗಣ್ಯರು, ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಿ ʼನಿಮ್ಮ ಸ್ಪಂದನೆ, ನಮ್ಮ ವಂದನೆʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಐಸಿಯು, ಆಕ್ಸಿಜನ್ ಸೌಲಭ್ಯ, ವೆಂಟಿಲೇಟರ್, ಸಿಬ್ಬಂದಿ, ಪ್ರತ್ಯೇಕ ಮಕ್ಕಳ ವಿಭಾಗ ಇತ್ಯಾದಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಮುಖ್ಯವಾಗಿ ಎಲ್ಲ ಸರಕಾರಿ ಮತ್ತು ಖಾಸಗಿ ವೈದ್ಯ ಕಾಲೇಜುಗಳಲ್ಲಿ 50,000 ಕೆಎಲ್ ಸಾಮರ್ಥ್ಯದಷ್ಟು ಆಕ್ಸಿಜನ್ ಸಂಗ್ರಹಕ್ಕೆ ಅವಕಾಶ ಆಗುವಂತೆ ಸೌಕರ್ಯ ಕಲ್ಪಿಸಲಾಗುತ್ತಿದೆ. ಅದೇ ರೀತಿ ಜಿಲ್ಲಾ ಆಸ್ಪತ್ರೆಗಳಲ್ಲಿ 20,000 ಕೆಎಲ್, ತಾಲೂಕು ಆಸ್ಪತ್ರೆಗಳಲ್ಲಿ 6,000-7,000 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕ್‌ಗಳನ್ನು ಅಳವಡಿಸಲಾಗುತ್ತಿದೆ. ಆ ಕೆಲಸಗಳು ಈಗಾಗಲೇ ಪ್ರಗತಿಯಲ್ಲಿವೆ ಎಂದು ಸಚಿವರು ಹೇಳಿದರು.

ಅಲ್ಲದೆ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 25, ಜಿಲ್ಲಾಸ್ಪತ್ರೆಗಳಲ್ಲಿ 100 ಐಸಿಯು ಬೆಡ್ಗಳ ಪ್ರತ್ಯೇಕ ವಿಭಾಗವನ್ನು ಸ್ಥಾಪನೆ ಮಾಡಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಐಸಿಯು ಅಥವಾ ಐಸಿಯುಯೇತರ ಯಾವುದೇ ಬೆಡ್ ಇದ್ದರೂ ಅದಕ್ಕೆ ಆಕ್ಸಿಜನ್ ಸೌಲಭ್ಯ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈವರೆಗೆ ಸರಕಾರದ ವೈದ್ಯಕೀಯ ವ್ಯವಸ್ಥೆಯಲ್ಲಿ 30,000 ಬೆಡ್ಗಳಿದ್ದು, ಆ ಸಂಖ್ಯೆಯನ್ನು 65,000ಕ್ಕೆ ಹೆಚ್ಚು ಮಾಡಲಾಗುತ್ತಿದೆ. 6,000 ಹೆಚ್ಚುವರಿ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ, ಎಲ್ಲಡೆಯೂ ಸುಧಾರಿತ ತಂತ್ರಜ್ಞಾನವನ್ನೂ ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಅಭಿಮಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಟಿ.ವೆಂಕಟೇಶ್, ಶಾಸಕ ಎನ್.ಎ.ಹ್ಯಾರೀಸ್, ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ಡಾ.ಸಿ.ಎನ್.ಮಂಜುನಾಥ್, ಡಾ.ಪ್ರಸನ್ನ, ಜಂಟಿ ಪೋಲೀಸ್ ಕಮಿಷನರ್ ರವಿಕಾಂತೇಗೌಡ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.