ಕೆಳವರ್ಗದವರಿಗೆ ಸೌಕರ್ಯ ಕಲ್ಪಿಸುವುದೇ ಪ್ರಥಮ ಗುರಿ


Team Udayavani, Aug 17, 2021, 6:20 AM IST

ಕೆಳವರ್ಗದವರಿಗೆ ಸೌಕರ್ಯ ಕಲ್ಪಿಸುವುದೇ ಪ್ರಥಮ ಗುರಿ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ  ಕಲ್ಯಾಣದಂಥ ಮಹತ್ತರ ಖಾತೆಯ ಹೊಣೆ  ಹೊತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಅವರು “ಉದಯವಾಣಿ’ ಮತ್ತು ಉದಯವಾಣಿ ಡಿಜಿಟಲ್‌ನ ಫೇಸ್‌ ಬುಕ್‌ ಲೈವ್‌ನಲ್ಲಿ  ಸೋಮವಾರ ಪಾಲ್ಗೊಂಡು ಇಲಾಖೆ ಬಗೆಗಿನ ತಮ್ಮ  ಕನಸುಗಳನ್ನು ಹಂಚಿಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಮಹತ್ತರ ಜವಾಬ್ದಾರಿ ಬಗ್ಗೆ ಏನನಿಸುತ್ತಿದೆ?

ರಾಜ್ಯದ ಸುಮಾರು 1.27 ಕೋಟಿ ಜನಸಂಖ್ಯೆಯ ಎಸ್‌.ಸಿ. ಸಮಾಜದವರು ಈ ಇಲಾಖೆಯಡಿ ಬರುತ್ತಾರೆ. ಹಿಂದುಳಿದ ವರ್ಗಗಳಲ್ಲಿ ಕೂಡ ಕೋಟ್ಯಂತರ ಜನರಿದ್ದಾರೆ. ಮೂಲತಃ ನಾನೂ ಅತ್ಯಂತ ಹಿಂದುಳಿದ ವರ್ಗದ ಬಡಕುಟುಂಬದಿಂದ ಬಂದಿದ್ದು, ಎಲ್ಲ ಸಮಸ್ಯೆಗಳ ಬಗ್ಗೆ ಅರಿವಿದೆ. ಹೀಗಾಗಿ ಸಮಾಜದ ಕಟ್ಟಕಡೆಯ ವರ್ಗವನ್ನು ಮುಖ್ಯವಾಹಿನಿಗೆ ತರಲು ಹಾಗೂ ನಿರ್ಲಕ್ಷéಕ್ಕೆ ಒಳಗಾದವರಿಗೆ ಮೂಲಸೌಕರ್ಯಗಳನ್ನುಒದಗಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪ್ರಮುಖ ಆದ್ಯತೆ ಏನು?

ಹಿಂದುಳಿದ ವರ್ಗದ ಮಹಿಳೆಯರಿಗೆ ಉದ್ಯೋಗ ತರಬೇತಿ ನೀಡಲು ಪ್ರತೀ ಜಿಲ್ಲಾ ಕೇಂದ್ರದಲ್ಲಿ ತರಬೇತಿ ಸಂಸ್ಥೆ ಸ್ಥಾಪಿಸಲಾಗುವುದು. ಇಲಾಖೆಯಡಿ 2,400 ಹಾಸ್ಟೆಲ್‌ಗ‌ಳಿದ್ದು, ಅದರಲ್ಲಿ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ಗ‌ಳು ಶೀಘ್ರವೇ ತೆರೆಯಲಿವೆ. ಅವುಗಳಿಗೆ ಉತ್ತಮ ಮೂಲ ಸೌಕರ್ಯ ಕಲ್ಪಿಸಲಾಗುವುದು. ಹಿಂದುಳಿದ ವರ್ಗದ ಎಲ್ಲರಿಗೂ ವಾಸಿಸಲು ಮನೆ, ಮೂಲ ಸೌಕರ್ಯ ಕಲ್ಪಿಸಬೇಕಿದೆ. ದಿ| ದೇವರಾಜ ಅರಸು ಅವರ ಹೆಸರಲ್ಲಿ ನೀಡುತ್ತಿದ್ದ ಪ್ರಶಸ್ತಿಯನ್ನು ಮತ್ತೆ ನೀಡಲಾಗುವುದು.  ಈ ವರ್ಗದವರ ಹಕ್ಕುಗಳ ರಕ್ಷಣೆಗಾಗಿ ಹೊಸ ನಿಯಮಾವಳಿಗಳನ್ನು ರೂಪಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿಮ್ಮ ಆದ್ಯತೆಗಳೇನು?

ಪರಿಶಿಷ್ಟ ಜಾತಿಯವರಲ್ಲಿ 5-6 ಲಕ್ಷ ಮಂದಿಗೆ ಇಂದಿಗೂ ಮನೆ, ಶೌಚಾಲಯ, ಹಕ್ಕುಪತ್ರವಿಲ್ಲ. ಹೀಗಾಗಿ ಇವುಗಳನ್ನು ಕಲ್ಪಿಸುವುದು ಮೊದಲ ಆದ್ಯತೆ. ಪಕ್ಷ ಹಾಗೂ ಸಂಘಟನೆ ಹೇಳಿಕೊಟ್ಟ “ನಾವೆಲ್ಲ ಹಿಂದೂ-ನಾವೆಲ್ಲ ಒಂದು’ ಎಂಬ ಪರಿಕಲ್ಪನೆ ಜಾರಿಗೊಳಿಸುವೆ. ಡಾ| ಬಿ.ಆರ್‌. ಅಂಬೇಡ್ಕರ್‌ ಮತ್ತು ಡಾ| ವಿ.ಎಸ್‌. ಆಚಾರ್ಯ ಅವರು ಹಿಂದುಳಿದವರ ಅಭಿವೃದ್ಧಿಗೆ ಹೊಂದಿದ್ದ ಯೋಜನೆಗಳನ್ನು, ಪ್ರಧಾನಿ ಮೋದಿ ಅವರ ಆಶಯವನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತೇನೆ.

ವಿಶೇಷ ಯೋಜನೆಯ ಬಗ್ಗೆ ಕನಸುಗಳಿದೆಯೇ?

ಪರಿಶಿಷ್ಟ ಜಾತಿಯ ಮನೆ ನಿರ್ಮಾಣದ ಅನುದಾನವನ್ನು 5ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಪ. ಪಂಗಡ, ಹಿಂದುಳಿದ ವರ್ಗಗಳ ಮನೆ ನಿರ್ಮಾಣಕ್ಕೂ ಅನುದಾನ ಹೆಚ್ಚಿಸುವ ಆಲೋಚನೆಯಿದೆ. ಆರ್ಥಿಕ ಮೂಲ ಗಳನ್ನು ಪರಿಶೀಲಿಸಿ ಸರಕಾರಕ್ಕೆ ಈ ಬಗ್ಗೆ ಸಲಹೆ ನೀಡಲಾಗುವುದು. ಸರಕಾರಿ ಜಾಗದಲ್ಲಿ ವಾಸಿಸಿರುವ ಎಸ್‌ ಸಿ ಕುಟುಂಬಗಳಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಿ ಹಕ್ಕುಪತ್ರ ನೀಡಲು ಪ್ರಯತ್ನಿಸಲಾಗುವುದು ಹಾಗೂ ಖಾಸಗಿ ಜಾಗದಲ್ಲಿ ವಾಸವಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ಅದನ್ನು ವಶಪಡಿಸಿಕೊಂಡು ಪರಿಹಾರ ನೀಡಿ ಹಕ್ಕುಪತ್ರ ಕೊಡಿಸಲಾಗುವುದು.

ಆಡಳಿತ ಯಂತ್ರಕ್ಕೆ ಚುರುಕು ನೀಡಲು ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ?

ಈ ಹಿಂದೆ ಸಚಿವನಾಗಿದ್ದಾಗ ರಾಜ್ಯದ ಪ್ರತಿ ಜಿಲ್ಲೆಗೆ ಸಂಚರಿಸಿ ಸಮಸ್ಯೆಗಳನ್ನು ಕಣ್ಣಾರೆ ಪರಿಶೀಲಿಸಿ ಪರಿಹಾರ ಒದಗಿಸಿರುವೆ. ಅದೇ ರೀತಿ ಮುಂದೆಯೂ ಪ್ರತೀ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ, ಕೆಲಸ ಮಾಡದಿರುವ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತೇನೆ.

ಈ ಅವಧಿಯಲ್ಲಿ ಎಲ್ಲ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವೇ?

ಇಲಾಖೆಯಲ್ಲಿನ ದುಂದುವೆಚ್ಚ ಹಾಗೂ ಅನಗತ್ಯ ಯೋಜನೆಗಳನ್ನು ಕೈಬಿಟ್ಟು ಅಗತ್ಯ ಕೆಲಸಗಳಿಗೆ ಮಾತ್ರ ಆದ್ಯತೆ ನೀಡಲಾಗುವುದು. ಕೇಂದ್ರ ಸಮಾಜ ಕಲ್ಯಾಣ ಸಚಿವ ನಾರಾಯಣ ಸ್ವಾಮಿ ಅವರನ್ನೂ ಹೆಚ್ಚಿನ ಅನುದಾನಕ್ಕಾಗಿ ಕೋರಿರುವೆ. ಅವಧಿ ಪೂರ್ಣವಾಗುವುದರೊಳಗೆ ಎಲ್ಲ ಯೋಜನೆ ಪೂರ್ಣಗೊಳಿಸಲು ಪ್ರಯತ್ನಿಸುವೆ.

ಅಭಿವೃದ್ಧಿ ಯೋಜನೆಗಳಿಗೆ ಮೊದಲ ಆದ್ಯತೆ :

ಭ್ರಷ್ಟಾಚಾರ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗದು. ಹೀಗಾಗಿ ಅಧಿಕಾರಿಗಳ ಸಭೆ ಕರೆದು “ಸರಕಾರ ನೀಡಿದ ಸವಲತ್ತು ಹೊರತುಪಡಿಸಿ ಇಲಾಖೆಯಿಂದ ಒಂದೇ ಒಂದು ಕಪ್‌ ಟೀ ಕೂಡ ನಾನು ಆಪೇಕ್ಷೆ  ಪಡುವುದಿಲ್ಲ; ಆದರೆ ಇಲಾಖೆಯ ಬಗ್ಗೆ ಎಲ್ಲಿಯಾದರೂ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ’ ಎಂದು ತಿಳಿಸಿದ್ದೇನೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಹೊಣೆ ನನ್ನ ಮೇಲಿದೆ. ಇಲಾಖೆಯಲ್ಲಿನ ಭ್ರಷ್ಟಾಚಾರ ವ್ಯವಸ್ಥೆ ಕೊನೆಗಾಣಿಸಿ ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸುವುದು ನನ್ನ ಗುರಿ.

ವಿದ್ಯಾರ್ಥಿ ವೇತನ ಸಕಾಲದಲ್ಲಿ ನೀಡಲು ಕ್ರಮ :

ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಬದುಕು ಬದಲಾಗಲು ಸಾಧ್ಯವಿದ್ದು, ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಶಿಕ್ಷಣ ಅತ್ಯಗತ್ಯ. ಆದರೆ ಹಿಂದುಳಿದ ವರ್ಗ ಹಾಗೂ ಎಸ್‌.ಸಿ. ಸಮಾಜದ ಅನೇಕ ಮಕ್ಕಳು ಇಂದಿಗೂ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಅನುದಾನ ನೀಡುವುದು ಹಾಗೂ ವಿದ್ಯಾರ್ಥಿ ವೇತನವನ್ನು ಹೆಚ್ಚಿನ ಮೊತ್ತದೊಂದಿಗೆ ಸಕಾಲಕ್ಕೆ ಸಿಗುವಂತೆ ಮಾಡಲಾಗುವುದು. ಈ ಮೂಲಕ ಕೂಲಿಕಾರರ ಮಕ್ಕಳು ಕೂಲಿಕಾರರಾಗದೆ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಬೇಕು. ಪೌರ ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗದೆ ಎಂಜಿನಿಯರ್‌, ವೈದ್ಯರಾಗುವಂತೆ ಮಾಡಬೇಕೆಂಬ ಚಿಂತನೆ ನನ್ನದಾಗಿದೆ.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.