ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಓರ್ವನ ಬಂಧನ


Team Udayavani, Aug 17, 2021, 5:58 AM IST

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಓರ್ವನ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ (ವರ್ಕ್‌ ವೀಸಾ) ಹೇಳಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಲ್ಮಠದ ಜೆರಿ ಇಥಿಯಲ್‌ ಸಿಕಾ (32)ನನ್ನು ಬಂಧಿಸಿದ್ದಾರೆ.

ಈತ ಬೆಂದೂರ್‌ನಲ್ಲಿ ಕಚೇರಿ ಹೊಂದಿದ್ದ. ಒಬ್ಬನೇ ವಂಚನೆ ಮಾಡುತ್ತಿದ್ದನೇ ಅಥವಾ ತಂಡ  ಭಾಗಿಯಾಗಿದೆಯೇ ಎನ್ನುವ ಬಗ್ಗೆ ತನಿಖೆ ಮುಂದು ವರಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಕಾವೂರಿನ ಮಹಿಳೆಯೋರ್ವರು ವಿದೇಶದಲ್ಲಿ ಉದ್ಯೋಗಕ್ಕೆ ತೆರಳಲು ಎಪ್ರಿಲ್‌ ಮೊದಲ ವಾರದಲ್ಲಿ ತನ್ನ ಪರಿಚಿತ, ಆರೋಪಿ ಜೆರಿ ಇಥಿಯಲ್‌ ಸಿಖಾನ ಕಚೇರಿಗೆ ಹೋಗಿ ವಿಚಾರಿಸಿದ್ದರು. ಆಗ ಆತ ಕಚೇರಿ ಕೆಲಸದ ಬಗ್ಗೆ “ವರ್ಕ್‌ ವೀಸಾ’ ಇದೆ. ಅದಕ್ಕೆ 5.50 ಲ.ರೂ. ನೀಡಬೇಕು. ತಿಂಗಳಿಗೆ 3.50 ಲ.ರೂ. ವೇತನ ಇದೆ ಎಂದಿದ್ದ. ಇದನ್ನು ನಂಬಿದ ಮಹಿಳೆ ಚಿನ್ನಾಭರಣ ಅಡವಿಟ್ಟು 1 ಲ.ರೂ. ನಗದು ನೇರವಾಗಿ,

1 ಲ.ರೂ.ಗಳನ್ನು ನೆಫ್ಟ್ ಮೂಲಕ ಆರೋಪಿಯ  ಖಾತೆಗೆ ಜಮೆ ಮಾಡಿದ್ದರು. ಅನಂತರ ವಿಚಾರಿಸಿ ದಾಗ ಆರೋಪಿ ಯಾವುದೇ ಪರವಾನಿಗೆ ಹೊಂದದೆ ಅನಧಿಕೃತವಾಗಿ ವ್ಯವಹಾರ ನಡೆಸುತ್ತಿರುವುದು ಗೊತ್ತಾಯಿತು. ಹಣ ಹಿಂದಿರುಗಿಸುವಂತೆ ಹೇಳಿದಾಗ ಆರೋಪಿ ವಂಚಿಸಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ವಂಚನೆಗೊಳಗಾಗಿರುವ ನಾಲ್ಕು ಮಂದಿ ಕೂಡ ದೂರು ನೀಡಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಂಚನೆಯಾಗಿದ್ದರೆ ದೂರು ನೀಡಿ  :

ವಿದೇಶದಲ್ಲಿ ಉದ್ಯೋಗ ಕೊಡಿಸುವು ದಾಗಿ ಹೇಳಿ ವಂಚಿಸುತ್ತಿರುವ ಸಂಸ್ಥೆಗಳ ಬಗ್ಗೆ ಎಚ್ಚರ ವಹಿಸುವಂತೆ ವಿದೇಶಾಂಗ ವ್ಯವಹಾರ ಸಚಿವಾಲಯದ ವಲಸಿಗರ ಸಂರಕ್ಷಣಾಧಿಕಾರಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಸುತ್ತಮುತ್ತಲಿನ ಅಧಿಕೃತ ಏಜೆನ್ಸಿಗಳ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ವಿದೇಶಿ ಉದ್ಯೋಗದ ಆಮಿಷ ನೀಡಿ ಯಾವುದೇ ಸಂಸ್ಥೆಯವರು ವಂಚಿಸಿದ್ದರೆ ಸಂತ್ರಸ್ತರು ಪೊಲೀಸರಿಗೆ ದೂರು ನೀಡಬಹುದಾಗಿದೆ.– ಎನ್‌. ಶಶಿಕುಮಾರ್‌, ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.