ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Aug 17, 2021, 8:23 AM IST
ಮೇಷ: ಧೈರ್ಯ ಸಾಹಸ, ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ನೀಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ, ಭೂಮಿ, ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ.
ವೃಷಭ: ಸ್ಥಿರ ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿ ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ.
ಮಿಥುನ: ಜವಾಬ್ದಾರಿಯುತ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರ ಸರಿಯಾದ ಮಾರ್ಗದರ್ಶನದ. ಅಧ್ಯಯನಶೀಲರಿಗೆ ವಿಪುಲ ಅವಕಾಶ.
ಕರ್ಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ.
ಸಿಂಹ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ದಾರದರ್ಶಕವಿರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ.
ಕನ್ಯಾ: ದೀರ್ಘ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆ ಯಾಗದು. ಸಾಂಸಾರಿಕ ಸುಖ ವೃದ್ಧಿ . ದೀರ್ಘ ಪ್ರಯಾಣ ಸಂಭವ.
ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ.
ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.
ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ . ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ.
ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ . ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಫುಲ ಅವಕಾಶ.
ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿನ ಜವಾಬ್ದಾರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.