ಮೈಸೂರಿನಲ್ಲಿ ಕ್ಷೇಮವಾಗಿದ್ದರು ಚಿತ್ತ ಮಾತ್ರ ತವರಿನ ಮೇಲಿದೆ: ಅಫ್ಘಾನ್ ವಿದ್ಯಾರ್ಥಿಗಳ ಅಳಲು
Team Udayavani, Aug 17, 2021, 3:50 PM IST
ಮೈಸೂರು: ಅಫ್ಘಾನಿಸ್ಥಾನ ದೇಶ ತಾಲಿಬಾನ್ ವಶವಾಗಿದೆ. ಜನಜೀವನ ಕಷ್ಟಕರವಾಗಿದೆ. ಈ ಮಧ್ಯೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ಥಾನದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.
ಅಫ್ಘಾನ್ ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯವರನ್ನು ಭೇಟಿಯಾದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಕುಟುಂಬಸ್ಥರೊಂದಿಗೆ ಮಾತನಾಡಿದ್ದೇವೆ. ಓದನ್ನು ಬಿಡಬೇಡಿ ನಮ್ಮ ಬಗ್ಗೆ ಹೆಚ್ಚು ಚಿಂತಿಸಬೇಡಿ, ಸದ್ಯಕ್ಕೆ ನಾವು ಕ್ಷೇಮವಾಗಿದ್ದೇವೆ ಎನ್ನುತ್ತಾರೆ” ಎಂದರು.
ಇದನ್ನೂ ಓದಿ:ಅಫ್ಘಾನ್ ವಲಸಿಗರು ಮತ್ತೆ ಅತಂತ್ರ: ಟರ್ಕಿಯಿಂದ 295 ಕಿಲೋ ಮೀಟರ್ ಬೃಹತ್ ಗೋಡೆ ನಿರ್ಮಾಣ!
ಅಲ್ಲಿ ನಮ್ಮ ಕುಟುಂಬಸ್ಥರು ಮನೆಯಿಂದ ಹೊರ ಬಾರದ ಸ್ಥಿತಿ ಉಂಟಾಗಿದೆ. ಮಹಿಳೆಯರ ಸ್ವಾತಂತ್ರ್ಯಕ್ಕೆ ದಕ್ಕೆಯಾಗಿದೆ. ಶೀಘ್ರದಲ್ಲೇ ಅಶಾಂತಿಯ ವಾತಾವರಣ ಸರಿಯಾಗುವ ಭರವಸೆಯಿದೆ. ಜಾಗತಿಕ ಸಮುದಾಯ ಅಫ್ಘಾನ್ ಪರವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.
ಭಾರತದಲ್ಲಿ ವಿದ್ಯಾರ್ಥಿಗಳಿಗೆ ಕೆಲವೇ ತಿಂಗಳಲ್ಲಿ ವೀಸಾ ಅವಧಿ ಮುಗಿಯಲಿದ್ದು, ಭಾರತ ನಮ್ಮ ನೆರವಿಗೆ ಬರಲಿದೆ ಎಂಬ ವಿಶ್ವಾಸವಿದೆ. ಮೈಸೂರು ವಿವಿ ನಮ್ಮ ಕುಟುಂಬದಂತೆ ಇರಲಿದೆ ಎಂಬ ಭರವಸೆ ನೀಡಿದೆ. ಮೈಸೂರು ವಿವಿ ಯಿಂದ ನಮಗೆ ನೈತಿಕ ಬೆಂಬಲ ದೊರೆತಿದೆ. ಭಾರತ ಹಾಗೂ ಮೈಸೂರು ವಿವಿಗೆ ಧನ್ಯವಾದಗಳು ಎಂದು ವಿದ್ಯಾರ್ಥಿಗಳು ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ.ಹೇಮಂತ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. “ಅಫ್ಘಾನಿಸ್ತಾನದಲ್ಲಿ ಏನಾಗಿದೆಯೋ ಅದಾಗಿದೆ, ಅದನ್ನ ನಿಯಂತ್ರಿಸಲು ನಾವ್ಯಾರು ಅಲ್ಲ. ಆದರೆ ನಮ್ಮ ವಿದ್ಯಾರ್ಥಿಗಳ ರಕ್ಷಣೆಗೆ ಶಕ್ತಿಮೀರಿ ಪ್ರಯತ್ನ ಮಾಡುತ್ತೇವೆ. ವಿಶ್ವವಿದ್ಯಾಲಯಲ್ಲಿ ನೀವು ಇರುವವರೆಗೂ ನಾವು ನಿಮ್ಮ ಪೋಷಕರಂತೆ. ನಿಮ್ಮ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ. ವೀಸಾ ಅವಧಿ ಮುಗಿಯುವವರೆಗೂ ವಿದ್ಯಾಭ್ಯಾಸದ ಮೇಲೆ ಗಮನಕೊಡಿ. ವೀಸಾ ವಿಸ್ತರಣೆ ಅಗತ್ಯವಿದ್ದರೆ ಸಂಬಂಧಪಟ್ಟವರೊಂದಿಗೆ ನಾವೇ ಚರ್ಚೆ ಮಾಡಿ ತಿಳಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.