ಖಾಕಿ-ಖಾವಿ-ಖಾದಿ ತಿದ್ದುವವರೇ ಪತ್ರಕರ್ತರು

ಅರ್ಹ ಪತ್ರಕರ್ತರಿಗೆ ಸೂಕ್ತ ಗೌರವ ಕೊಡಿಸುವಲ್ಲಿ ಪ್ರಮಾಣಿಕವಾಗಿ ಶ್ರಮಿಸಲಾಗುವುದು

Team Udayavani, Aug 17, 2021, 5:41 PM IST

ಖಾಕಿ-ಖಾವಿ-ಖಾದಿ ತಿದ್ದುವವರೇ ಪತ್ರಕರ್ತರು

ಕಲಬುರಗಿ: ಖಾವಿ, ಖಾಕಿ, ಖಾದಿಯನ್ನು ಸರಿಪಡಿಸುವವರೇ ಪತ್ರಕರ್ತರು. ಎಲ್ಲರನ್ನೂ ತಿದ್ದಿ-ಸಲಹೆ ನೀಡಿ ಸರಿ ದಾರಿಗೆ ತರುವಂತವರು ಪತ್ರಕರ್ತರು. ಎಲ್ಲರಿಗೂ ಗುರುಗಳು ಪತ್ರಕರ್ತರು ಎಂದರೆ ತಪ್ಪಾಗಲಾರದು ಎಂದು ನಗರದ ಸುಲಫಲ ಮಠದ ಪೀಠಾಧಿಪತಿ ಹಾಗೂ ಶ್ರೀಶೈಲಂ ಸಾರಂಗಮಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕ ಹೊಂದಿರುವ ಪತ್ರಕರ್ತ ದೇವೇಂದ್ರಪ್ಪ ಕಪನೂರ ಅವರ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿದರು. ಖಾಕಿ, ಖಾದಿ ಒಬ್ಬರಿಗೊಬ್ಬರು ಹೇಳಬಹುದು. ಆದರೆ ಈ ಮೂವರಿಗೂ ತಿದ್ದುವ ಹೊಣೆಗಾರಿಕೆ ಪತ್ರಕರ್ತರೇ ಹೊಂದಿದ್ದಾರೆ ಎಂದು ಹೇಳಿದರು.

ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಮಾತನಾಡಿ, ರಂಗ ಮಾಧ್ಯಮದಲ್ಲಿ ದುಡಿದವರು ದೇವೇಂದ್ರಪ್ಪ ಕಪನೂರ. ಬ್ಯಾಲದಿಂದಲೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು. ಸರ್ಕಾರದ ಮಹತ್ವಾಕಾಂಕ್ಷೆಯ ಸಾಕ್ಷರತೆ ಕಾರ್ಯಕ್ರಮವನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸಿದವರು. ಅವರದ್ದು ಹಾರ್ಡ್‌ವೇರ್‌ ದೇಹ, ಸಾಫ್ಟ್ ವೇರ್‌ ಮನಸ್ಸು. ಒಟ್ಟಾರೆ ಪತ್ರಿಕೋಧ್ಯಮದ ಜತೆಗೆ ರಂಗ ಕಲಾವಿದರಾಗಿದ್ದಾರೆ ಎಂದರು.

ಪೊಲೀಸ್‌ ಆಯುಕ್ತ ಡಾ| ವೈ. ಎಸ್‌. ರವಿಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ದಯಾನಂದ ಅಗಸರ್‌, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ ಮತ್ತು ವಾರ್ತಾ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರ ಬಿ.ಜಿ ಸಹ ಮಾತನಾಡಿದರು. ಸನ್ಮಾನಿತಗೊಂಡು ಮಾತನಾಡಿದ ದೇವೇಂದ್ರಪ್ಪ ಕಪನೂರ, ಈ ಸನ್ಮಾನದಿಂದ ತಮ್ಮ ಮೇಲೆ ಹೊಣೆಗಾರಿಕೆ ಹೆಚ್ಚಿಸಿದೆ.

ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಅರ್ಹ ಪತ್ರಕರ್ತರಿಗೆ ಸೂಕ್ತ ಗೌರವ ಕೊಡಿಸುವಲ್ಲಿ ಪ್ರಮಾಣಿಕವಾಗಿ ಶ್ರಮಿಸಲಾಗುವುದು ಎಂದು ಹೇಳಿದರು. ಸಂಘದ ವತಿಯಿಂದ ಕಪನೂರ ದಂಪತಿಯನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ದೇವೇಂದ್ರಪ್ಪ ಕಪನೂರ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಹಿರಿಯ ಪತ್ರಕರ್ತರು, ಸಂಘದ ಪದಾಧಿಕಾರಿಗಳು, ಕಪನೂರ ಪರಿವಾರದವರು ಇದ್ದರು.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.