19ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಡಿಸಿ ರಾಗಪ್ರಿಯಾ

ಒಟ್ಟು 90 ಪದವಿ ಪೂರ್ವ ಕಾಲೇಜು ಒಳಗೊಂಡಂತೆ 496 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ

Team Udayavani, Aug 17, 2021, 5:52 PM IST

DC-Yadgir

ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದವರಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಆ.19ರಿಂದ ಸೆ.3ರವರೆಗೆ ವಾರ್ಷಿಕ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತಂತೆ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಪ್ರಕಟಿಸಲಾಗಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 90 ಪದವಿ ಪೂರ್ವ ಕಾಲೇಜು ಒಳಗೊಂಡಂತೆ 496 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದ ಅವರು, ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲ ಮೂರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ಆರೋಗ್ಯ ಸಲಕರಣೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳಂತೆ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಸಮೂಹ ಮಾಧ್ಯಮಗಳಲ್ಲಿ / ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧ. ಒಂದು ವೇಳೆ ಇಂತಹ ಘಟನೆಗಳು ಕಂಡುಬಂದಲ್ಲಿ ಇಲಾಖೆ ಕ್ರಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿದರು ಮತ್ತು ಸುತ್ತಲಿನ ಝರಾಕ್ಸ್‌, ಕಂಪ್ಯೂಟರ್‌ ಮಳಿಗೆ ಮುಚ್ಚುವಂತೆ ಆದೇಶಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ ಪೋನ್‌ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಕೇಂದ್ರದ ಮುಖ್ಯ ಅಧೀಕ್ಷಕರು “ಬೇಸಿಕ್‌ ಸೆಟ್‌’ ಫೋನ್‌ ಮಾತ್ರ ಬಳಸಬಹುದು. ಆದರೆ ಸ್ಮಾಟ್‌ ìಫೋನ್‌ ತರುವುದು ನಿಷೇಧಿಸಿದೆ. ಪರೀಕ್ಷಾ ಗೌಪ್ಯ ಕಾರ್ಯಗಳಿಗೆ ಬಳಸಲಾಗುವ ವಾಹನಗಳಿಗೆ ಪರೀಕ್ಷೆ ಮುಂಚಿತವಾಗಿ ಜಿಪಿಎಸ್‌ ಅಳವಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ಮತ್ತು ಪರೀಕ್ಷೆ ನಂತರ ಹೊರಬರುವಾಗ ಗುಂಪುಗೂಡದಂತೆ ಜಾಗೃತಿ ವಹಿಸಬೇಕು. ಪರೀಕ್ಷಾ ಸಿಬ್ಬಂದಿ ಸೇರಿದಂತೆ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಸೇರಿದಂತೆ ಕಾಲೇಜು ಉಪನ್ಯಾಸಕರು, ಜಿಲ್ಲೆಯ ಶಿಕ್ಷಣಾಧಿಕಾರಿಗಳು, ತಹಶೀಲ್ದಾರರು, ಪೊಲೀಸ್‌ ಸಿಬ್ಬಂದಿ ಇದ್ದರು.

ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋ ಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು. ಕೇಂದ್ರಗಳಲ್ಲಿ ವಾಟರ್‌ ಬಾಯ್‌ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿವ ನೀರಿನ ವ್ಯವಸ್ಥೆ ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು.

*ಡಾ| ರಾಗಪ್ರಿಯಾ ಆರ್‌., ಜಿಲ್ಲಾಧಿಕಾರಿ

ಟಾಪ್ ನ್ಯೂಸ್

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.