ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್‌. ಅಶೋಕ್‌

Team Udayavani, Aug 17, 2021, 10:45 PM IST

ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್‌. ಅಶೋಕ್‌

ಬೆಂಗಳೂರು: ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡುವ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಚಂಡಮಾರುತ ಉಂಟಾಗುವ ಬಗ್ಗೆ ಮುಂಚಿತವಾಗಿಯೇ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆರು ಕಿಲೋಮೀಟರ್‌ಗಳವರೆಗೆ ಕೇಳಬಹುದಾದ ಸೈರನ್‌ಗಳನ್ನು ಸ್ಥಾಪಿಸಲಾಗುತ್ತದೆ. ಮೊದಲ ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ 40 ಸ್ಥಳಗಳಲ್ಲಿ ಪ್ರಾರಂಭಿಸಲು ಯೋಜಿಸಲಾಗಿದ್ದು, ಶೀಘ್ರದಲ್ಲೇ ಇದನ್ನು 60 ಸ್ಥಳಗಳಿಗೆ ವಿಸ್ತರಿಸುವ ಚಿಂತನೆಯಿದೆ.

ಪ್ರತಿ ಕೇಂದ್ರವನ್ನು ಸ್ಥಾಪಿಸಲು 10 ರಿಂದ 12 ಕೋಟಿ ವೆಚ್ಚವಾಗುತ್ತಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರದ ನಿಧಿಯೊಂದಿಗೆ ಇದನ್ನು ಕಾರ್ಯಗತಗೊಳಿಸಲಾಗುವುದು. ಇದು ವಿಶೇಷವಾಗಿ ಮೀನುಗಾರರು ಮತ್ತು ಕರಾವಳಿ ಪ್ರದೇಶಗಳಲ್ಲಿ ಇರುವವರನ್ನ ಎಚ್ಚರಿಸಿ, ಸಂಭವಿಸಬಹುದಾದ ಪ್ರಾಣಹಾನಿಯನ್ನು ತಪ್ಪಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಷರಿಯಾ ಚೌಕಟ್ಟಿನಡಿ ಮಹಿಳೆಯರಿಗೆ ಹಕ್ಕುಗಳನ್ನು ನೀಡುತ್ತೇವೆ : ತಾಲಿಬಾನ್ ವಕ್ತಾರ ಜಬೀಹುಲ್ಹಾ

ಅದೆ ರೀತಿ ಸಂಭವನೀಯ ಸಿಡಿಲಿನ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ವರ್ಷ ಸಿಡಿಲಿಗೆ ತುತ್ತಾಗಿ ಅನೇಕ ಜನರು ಸಾವನ್ನಪ್ಪುತ್ತಾರೆ. ಆದ್ದರಿಂದ, ನಾವು ಆಯ್ದ ಗ್ರಾಮಗಳಲ್ಲಿ ಸಿಡಿಲು ಸಂಭವಿಸುವ ಕುರಿತಂತೆ ಮುಂಜಾಗ್ರತೆ ನೀಡುವ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ನೆರವಿನಿಂದ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಈ ಎಚ್ಚರಿಕೆಯ ವ್ಯವಸ್ಥೆಗಳನ್ನು ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಸ್ಥಾಪಿಸಲಾಗುವುದು ಮತ್ತು ಬೆಂಗಳೂರಿನ ಹವಾಮಾನ ಕಚೇರಿಯೊಂದಿಗೆ ಇದನ್ನು ಸಂಪರ್ಕಿಸಲಾಗುವುದು. ಈ ಯೋಜನೆಯ ಕೆಲಸಗಳು ಈಗಾಗಲೇ ನಡೆಯುತ್ತಿವೆ ಮತ್ತು ಶೀಘ್ರವೇ ಕಾರ್ಯಗತಗೊಳ್ಳಲಿದೆ ಎಂದು ಹೇಳಿದರು.

ಪ್ರವಾಹ ಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಳ:
ರಾಜ್ಯದಲ್ಲಿನ 83 ತಾಲ್ಲೂಕುಗಳು ಅಧಿಕೃತವಾಗಿ ಪ್ರವಾಹ ಪೀಡಿತಗೊಂಡಿವೆ. ಈ ಮೊದಲು 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಇತ್ತೀಚಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ನಂತರ, ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿ ನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷೆ¾àಶ್ವರ, ತರೀಕೆರೆ, ಮುಂಡಗೋಡು, ಸೂಪಾ, ಹುಬ್ಬಳ್ಳಿ, ಭದ್ರಾವತಿ, ಚನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ಹರಪನಹಳ್ಳಿ, ಹೊಸನಗರ ಮತ್ತು ಮೂಡಿಗೆರೆ ಸೇರಿದಂತೆ 22 ತಾಲ್ಲೂಕುಗಳು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಹೀಗಾಗಿ ರಾಜ್ಯದಲ್ಲಿ 83 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಪಟ್ಟಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.